Udupi Video Case: ಚುರುಕುಗೊಂಡ ತನಿಖೆ- FSL ವರದಿಯ ನಿರೀಕ್ಷೆ
ವೀಡಿಯೋ ಚಿತ್ರೀಕರಣ ಪ್ರಕರಣ: ತನಿಖಾಧಿಕಾರಿಯಾಗಿ ಬೆಳ್ಳಿಯಪ್ಪ
Team Udayavani, Jul 29, 2023, 11:23 PM IST
ಉಡುಪಿ: ಪ್ಯಾರ ಮೆಡಿಕಲ್ ಕಾಲೇಜಿನ ಶೌಚಾಲಯ ದಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ತನಿಖಾಧಿ ಕಾರಿಯನ್ನು ಬದಲಾಯಿಸಲಾಗಿದೆ.
ನೂತನ ತನಿಖಾಧಿಕಾರಿಯಾಗಿ ಬೆಳ್ಳಿಯಪ್ಪ ಕೆ.ಯು. ಅವರನ್ನು ನೇಮಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಆದೇಶಿಸಿದ್ದಾರೆ. ತನಿಖಾ ತಂಡದಲ್ಲಿ ಮಹಿಳಾ ಪಿಎಸ್‌ಐಗಳನ್ನು ಒಳಗೊಂಡ ಸಿಬಂದಿ ಇರಲಿದ್ದಾರೆ.
ಈ ಪ್ರಕರಣ ಮಲ್ಪೆ ಠಾಣಾ ವ್ಯಾಪ್ತಿಗೆ ಬಂದ ಕಾರಣ ಪ್ರಕರಣದ ತನಿಖಾಧಿಕಾರಿಯಾಗಿ ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ಕಾರ್ಯನಿರ್ವಹಿಸುತ್ತಿದ್ದರು. ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಿಜೆಪಿ ಪ್ರತಿಭಟನೆ ನಡೆಸಿ, ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ಪಟ್ಟು ಹಿಡಿದಿದ್ದರು. ತೀವ್ರ ಒತ್ತಡ ಬಂದಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪರಿಶೀಲನೆ
ತನಿಖಾಧಿಕಾರಿಯಾಗಿ ನೇಮಕಗೊಂಡ ಬಳಿಕ ಬೆಳ್ಳಿಯಪ್ಪ ಅವರು ಘಟನೆ ನಡೆದ ಕಾಲೇಜಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದುಕೊಂಡರು. ಸಿಸಿಟಿವಿ ದೃಶ್ಯಾವಳಿಗಳ ಸಹಿತ ಈ ಹಿಂದಿನ ತನಿಖಾಧಿಕಾರಿ ಮೂಲಕ ವಿವರ ಪಡೆದುಕೊಂಡರು. ಈಗಾಗಲೇ ಐಜಿ ಡಾ| ಚಂದ್ರಗುಪ್ತ ಅವರು ಘಟನೆಯ ಬಗ್ಗೆ ಪೂರ್ಣ ವಿವರ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯರ ವಿಚಾರಣೆ
ಸಂತ್ರಸ್ತ ವಿದ್ಯಾರ್ಥಿನಿಯರ ಸಹಿತ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಅವರ ಹೇಳಿಕೆಗಳನ್ನು ದಾಖಲಿಸಲಾಯಿತು. ಘಟನೆ ನಡೆದ ಸ್ಥಳ ಸಹಿತ ಕಾಲೇಜಿನ ಸಿಬಂದಿ ವಿಚಾರಣೆಗೊಳಪಡಿಸಲಾಯಿತು. ಈಗಾಗಲೇ ವಿದ್ಯಾರ್ಥಿನಿಯರ ಮೂರು ಐಫೋನ್‌ಗಳನ್ನು ಎಫ್ಎಸ್‌ಎಲ್ ವರದಿಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಇದರ ವರದಿ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನುತ್ತವೆ ಪೊಲೀಸ್ ಮೂಲಗಳು.
ಅಶ್ಲೀಲ ಸಂದೇಶ: ಪ್ರಕರಣ ದಾಖಲು
ಉಡುಪಿ: ಉಡುಪಿಯ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಭಟನೆಯೊಂದರಲ್ಲಿ ಹೇಳಿಕೆ ನೀಡಿದ್ದ ಕಾಲೇಜಿನ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜು. 28ರಂದು ಇನ್‌ಸ್ಟಾಗ್ರಾಂ ಖಾತೆಯಿಂದ ವಿದ್ಯಾರ್ಥಿನಿಗೆ ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಆಕೆಯ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ನೊಂದ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.
ವೀಡಿಯೋ ರಿಟ್ರೈವ್ ಆಗಬಹುದೇ?
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಂತೆ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಘಟನೆಗೆ ಸಂಬಂಧಿಸಿದ ಯಾವುದೇ ವೀಡಿಯೋವಾಗಲಿ ಅಥವಾ ಫಾರ್ವರ್ಡ್ ಆದ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ವಿವಿಧ ಸಂಘಟನೆಗಳು ಹೆಚ್ಚಿನ ತನಿಖೆಯಾಗಬೇಕೆಂಬ ನಿಟ್ಟಿನಲ್ಲಿ ಎಫ್ಎಸ್‌ಎಲ್ ವರದಿಗೆ ಬೆಂಗಳೂರಿಗೆ ಕಳುಹಿಸಲಾಗಿದೆ.
ಈ ಬಗ್ಗೆ ಮೊಬೈಲ್ ತಜ್ಞರು ಹೇಳುವ ಪ್ರಕಾರ ಇದು ಐಫೋನ್ ಆದ್ದರಿಂದ ವೀಡಿಯೋ ರೀಸೈಕಲ್ ಬಿನ್ ಮೂಲಕವೂ ಡಿಲೀಟ್ ಮಾಡಲ್ಪಟ್ಟರೆ ಐಕ್ಲೌಡ್ ಮೂಲಕ ವೀಡಿಯೋ ಸೇವ್ ಆಗಿರುತ್ತದೆ. ಒಂದು ವೇಳೆ ಅಲ್ಲಿಯೂ ಡಿಲೀಟ್ ಆಗಿದ್ದರೆ ಯಾವುದೇ ಕುರುಹು ದೊರಕದು. ಒಂದು ವೇಳೆ ವಿದ್ಯಾರ್ಥಿನಿಯರು ಆ ವೀಡಿಯೋವನ್ನು ಫಾರ್ವರ್ಡ್ ಮಾಡಿದ್ದೇ ಆದಲ್ಲಿ ಆ ಸಂದೇಶವನ್ನು ಸ್ವೀಕರಿಸಿದ ವ್ಯಕ್ತಿಯ ಮೊಬೈಲ್‌ನಲ್ಲಿದ್ದರೆ ಅದನ್ನು ಕಂಡು ಹುಡುಕಬಹುದು. ಆತ/ಆಕೆ ಅದನ್ನು ಡಿಲೀಟ್ ಮಾಡಿದ್ದರೆ ಕೇವಲ ಶೇರ್ ಆದ ಬಗ್ಗೆ ಲಿಂಕ್ ಸಿಗುತ್ತದೆ ವಿನಃ ಅದು ಯಾವ ವೀಡಿಯೋ ಎಂಬ ಬಗ್ಗೆ ನಿಖರವಾಗಿ ತಿಳಿದು ಬರುವುದಿಲ್ಲ. ಈ ಪ್ರಕರಣದಲ್ಲಿಯೂ ವೀಡಿಯೋ ಫಾರ್ವರ್ಡ್ ಆಗಿದೆ ಎಂಬ ಆರೋಪವೂ ಕೇಳಿಬಂದಿತ್ತು. ಆದರೆ, ಪೊಲೀಸರು ಹಾಗೂ ಒಂದು ವರ್ಗದ ವಿದ್ಯಾರ್ಥಿನಿಯರು ವೀಡಿಯೋ ಫಾರ್ವರ್ಡ್ ಆಗಿಲ್ಲ ಎನ್ನುತ್ತಿದ್ದಾರೆ. ಇದರ ಸಂಪೂರ್ಣ ವಿವರ ಎಫ್ಎಸ್‌ಎಲ್ ವರದಿಯಿಂದಷ್ಟೇ ತಿಳಿದುಬರಲು ಸಾಧ್ಯವಿದೆ. ವರದಿ ಬರಲು ಕನಿಷ್ಠ ಒಂದು ವಾರವಾದರೂ ಬೇಕಾಗಬಹುದು ಎನ್ನುತ್ತಾರೆ ಪೊಲೀಸರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.