Government ನಿರ್ವಾಹಕರು, ಕ್ಲೀನರ್‌ಗಳಿಗೆ ನೋಂದಣಿಗೆ ಅವಕಾಶ
ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ
Team Udayavani, Oct 6, 2023, 11:29 PM IST
ಉಡುಪಿ/ಮಂಗಳೂರು: ಅಪಘಾತದಿಂದ ಸಂಕಷ್ಟಕ್ಕೆ ಸಿಲುಕುವ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ಸರಕಾರ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
ಸಾರಿಗೆ ಇಲಾಖೆಯಿಂದ ಸಾರಿಗೆ ವಾಹನ ಚಾಲನಾ ಪರವಾನಿಗೆ ಪಡೆದ ಚಾಲಕರು ತತ್‌ಕ್ಷಣದಿಂದ ಫಲಾನುಭವಿಯೆಂದು ಪರಿಗಣಿಸುತ್ತಿದ್ದು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಯೋಜನೆಯಡಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳಬೇಕು. ಒಮ್ಮೆ ನೋಂದಣಿಯಾದ ಅನಂತರ ನೀಡಲಾದ ಗುರುತಿನ ಚೀಟಿಯು 3 ವರ್ಷಗಳವರೆಗೆ ಅಸ್ಥಿತ್ವದಲ್ಲಿರುತ್ತದೆ. ಅನಂತರ ನವೀಕರಣಕ್ಕೆ ನಿಗದಿಪಡಿಸಿದ ದಾಖಲೆಗಳನ್ನು ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಿ ನವೀಕರಿಸಿಕೊಳ್ಳಬಹುದಾಗಿದೆ.
ಯೋಜನೆಯ ಸೌಲಭ್ಯಗಳು
ಅಪಘಾತದಿಂದ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ. ಪರಿಹಾರ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ 2 ಲಕ್ಷ ರೂ. ವರೆಗೆ ಪರಿಹಾರ ನೀಡಲಾಗುವುದು.
ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 50,000 ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಹಾಗೂ 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 1 ಲಕ್ಷ ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಮರುಪಾವತಿ ಪಡೆಯಬಹುದಾಗಿದೆ.
ಶೈಕ್ಷಣಿಕ ಧನ ಸಹಾಯ
2018-19ನೇ ಸಾಲಿನಿಂದ ಅಪಘಾತದ ಕಾರಣ ನಿಧನ/ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000 ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ.
ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾರ್ಮಿಕ ಇಲಾಖೆಯ ಕಚೇರಿ ಸಂರ್ಕಿಸಲು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.