ರಸ್ತೆ ನಿಯಮ ಪಾಲನೆಯಿಂದ ಅಪಘಾತ ನಿಯಂತ್ರಣ: ಎಸ್‌ಪಿ
Team Udayavani, Jul 1, 2019, 5:14 AM IST
ಉಡುಪಿ: ಪ್ರತಿಯೊಬ್ಬರೂ ರಸ್ತೆ ನಿಯಮ ಸರಿಯಾಗಿ ಪಾಲನೆ ಮಾಡುವುದರಿಂದ ಅಪಘಾತ ನಿಯಂತ್ರಿ ಸಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಹೇಳಿದರು.
ಉಡುಪಿ ಜಿಲ್ಲಾ ಪೊಲೀಸ್, ಮಣಿಪಾಲ ಕೆಎಂಸಿಯ ಸೆಂಟರ್ ಫಾರ್ ಫಾರೆನ್ಸಿಕ್ ಕ್ಲಿನಿಕಲ್ ಸೆಂಟರ್ ಹಾಗೂ ಅನಸ್ತೇಶಿಯಾ ಮತ್ತು ಆರ್ಥೋಪೆಡಿಕ್ಸ್ ವಿಭಾಗದ ಸಹ ಯೋಗದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಮಣಿಪಾಲ ಕೆಎಂಸಿಯ ಟಿ.ಎಂ.ಎ. ಪೈ ಸಭಾಂಗಣದಲ್ಲಿ ರವಿವಾರ ವಾಹನ ಚಾಲಕರಿಗೆ ಆಯೋಜಿಸಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ಪ್ರತಿವರ್ಷ ಅಪಘಾತದಲ್ಲಿ 1.5ಲಕ್ಷ ಮಂದಿ ರಸ್ತೆ ದುರಂತದಿಂದ ಮರಣ ಹೊಂದುತ್ತಿದ್ದಾರೆ. ಅಂದರೆ ಪ್ರತಿ ಗಂಟೆಗೆ 400 ಮಂದಿ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ 130 ಮಂದಿ ಅಪಘಾತದಿಂದ ಪ್ರಾಣ ಕಳೆದುಕೊಂಡಿದ್ದು, ಅಪಘಾತ ಎಂಬುದು ಬಹಳ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದರು.
ವಾಹನ ವಿರುದ್ಧ ಕ್ರಮ
ಈ ಹಿಂದೆ ವಿಶೇಷ ಕಾರ್ಯಾಚರಣೆ ನಡೆಸಿ ಹೆಲ್ಮೆಟ್ ಮತ್ತು ಸೀಟ್ ಬಿಲ್r ಧರಿಸದವರ ವಿರುದ್ಧ ಕ್ರಮ ಜರಗಿಸಲಾಗಿದೆ. ಅದೇ ರೀತಿ ಈ ವಾರದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಶಾಲಾ ಮಕ್ಕಳನ್ನು ಸಾಗಿಸುವ ಮತ್ತು ಗೂಡ್ಸ್ ವಾಹನದಲ್ಲಿ ಜನರನ್ನು ಸಾಗಿಸುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ರಸ್ತೆ ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದರೆ ಪ್ರಾಣ ಉಳಿಸುವ ಪ್ರಮಾಣ ಅಧಿಕವಿರುತ್ತದೆ. ಸ್ಥಳದಲ್ಲಿರುವವರು ಪ್ರಥಮ ಚಿಕಿತ್ಸೆ ನೀಡಿ, ಕೂಡಲೇ ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಿದರೆ ತುಂಬಾ ಪ್ರಾಣ ಉಳಿಸಲು ಸಾಧ್ಯ ಎಂದರು.
ರಾಜ್ಯದಲ್ಲಿ ಜಾರಿಗೆ ಬಂದಿರುವ ಹೊಸ ಕಾನೂನು ಪ್ರಕಾರ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ನೀಡುವಂತಿಲ್ಲ. ಆಸ್ಪತ್ರೆಯವರು ಕೂಡ ಯಾವುದೇ ಪ್ರಶ್ನೆ ಕೇಳುವಂತಿಲ್ಲ. ಅದೇ ರೀತಿ ಪೊಲೀಸ್ ಇಲಾಖೆಯವರು ಕೂಡ ಕಷ್ಟ ಕೊಡುವಂತಿಲ್ಲ. ಸಹಾಯ ಮಾಡಿದ ವ್ಯಕ್ತಿಯ ಒಪ್ಪಿಗೆ ಇದ್ದರೆ ಮಾತ್ರ ಆ ಪ್ರಕರಣದಲ್ಲಿ ಸಾಕ್ಷಿ ಯಾಗಿ ಪರಿಗಣಿಸಲಾಗುತ್ತದೆ. ಒತ್ತಾಯ ಪೂರ್ವಕವಾಗಿ ಸಾಕ್ಷಿಯನ್ನಾಗಿ ಮಾಡಿದರೆ ಪೊಲೀಸರಿಗೆಯೇ ಶಿಕ್ಷೆ ಯಾಗುವ ಸಾಧ್ಯತೆ ಇದೆ ಎಂದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಕೆಎಂಸಿಯ ಡೀನ್ ಡಾ| ಪ್ರಜ್ಞಾ ರಾವ್ ಉಪಸ್ಥಿತರಿದ್ದರು. ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಸ್ವಾಗತಿಸಿದರು.
ಅನೆಸ್ತೇಶಿಯಾ ವಿಭಾಗದ ಪ್ರೊಫೆಸರ್ ಡಾ| ಅನಿತಾ ಶೆಣೈ ವಂದಿಸಿದರು. ಫಾರೆನ್ಸಿಕ್ ಕ್ಲಿನಿಕಲ್ ಸೆಂಟರ್‌ನ ಅಸೋಸಿಯೇಟ್ ಪ್ರೊಫೆಸರ್ ಡಾ| ಶಂಕರ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.