ತೆಕ್ಕಟ್ಟೆಯಲ್ಲಿ ಅಪಘಾತ: 4 ವಾಹನ ಜಖಂ
Team Udayavani, Apr 5, 2018, 6:00 AM IST
ತೆಕ್ಕಟ್ಟೆ: ರಾ. ಹೆ. 66ರ ತೆಕ್ಕಟ್ಟೆ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ಸಂದರ್ಭ ಸರಣಿ ಅಪಘಾತ ಸಂಭವಿಸಿ ನಾಲ್ಕು ವಾಹನಗಳು ಜಖಂಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಕುಂದಾಪುರ ದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ ತವೇರಾ ವಾಹನಕ್ಕೆ ಢಿಕ್ಕಿಯಾಯಿತು. ಈ ಘಟನೆಯ ಕೆಲವೇ ಹೊತ್ತಿನಲ್ಲಿ ಮತ್ತೂಂದು ಲಾರಿ ಸ್ಯಾಂಟ್ರೋ ಕಾರಿಗೆ ಢಿಕ್ಕಿ ಹೊಡೆದಿದೆ.
ಪೊಲೀಸ್ ಹಾಗೂ ಸಾರ್ವ ಜನಿಕರ ನಡುವೆ ಚಕಮಕಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆಕ್ಕಟ್ಟೆಯ ಪ್ರಮುಖ ಭಾಗದಲ್ಲಿ ಕೋಟ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣಾ ಕೇಂದ್ರವು ಮಾ.27ರಂದು ಆರಂಭ ಗೊಂಡಿದೆ. ತಪಾಸಣೆ ಸಂದರ್ಭದಲ್ಲಿ ವಾಹನಗಳ ಓವರ್‌ಟೇಕ್ ಭರಾಟೆಯಿಂದಾಗಿ ದಿನಕ್ಕೆ ಒಂದೆರಡು ಅಪಘಾತಗಳು ಸಂಭವಿಸುತ್ತಿವೆ. ರಾ. ಹೆ. 66ರಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ದಿನಪೂರ್ತಿ ತಪಾಸಣೆ ನಡೆಸುವ ಕಾರಣ ಕಿ.ಮೀ. ಉದ್ದದ ವಾಹನ ಸಾಲು ಕಂಡುಬರುತ್ತಿದೆ. ಇದರಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ತವ್ಯ ನಿರತ ಪೊಲೀಸರಲ್ಲಿ ಸಾರ್ವಜನಿಕರು ಆಗ್ರಹಿಸುತ್ತಿದ್ದಂತೆ ಸ್ವಲ್ಪಮಟ್ಟಿನ ಮಾತಿನ ಚಕಮಕಿ ನಡೆಯಿತು.
ವೇಗಕ್ಕೆ ನಿಯಂತ್ರಣ ಅಗತ್ಯ
ಇಲ್ಲಿ ವಾಹನಗಳು ಮಿತಿಮೀರಿದ ವೇಗದಲ್ಲಿ ಸಾಗುತ್ತಿದ್ದು, ಅದಕ್ಕೆ ನಿಯಂತ್ರಣ ವಿಧಿಸಬೇಕಾದ ಅಗತ್ಯ ಇದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.