Udupi ಹಕ್ಕುಪತ್ರ ವಿತರಿಸಲು ಕ್ರಮ: ಜಿಲ್ಲಾಧಿಕಾರಿ
Team Udayavani, Aug 7, 2024, 11:05 PM IST
ಉಡುಪಿ: ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ.ನ ಡಾ| ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜರಗಿದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾ.ಪಂ.ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಗ್ರಾ.ಪಂ.ಗಳಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.
ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯ ವಿರುವ ಜಮೀನು ಗುರುತಿಸುವ ಕಾರ್ಯ ವನ್ನು ತಹಶೀಲ್ದಾರರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ಸಮನ್ವಯ ದೊಂದಿಗೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಭೂಮಿ ನೀಡಲು ಕಾದಿರಿಸುವ ಜಮೀನಿನ ಸರ್ವೇ ಕಾರ್ಯಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಅವುಗಳನ್ನು ನಿವೇಶನವಾಗಿ ಪರಿವರ್ತಿಸುವ ಕಾರ್ಯಗಳನ್ನು ಅಧಿಕಾರಿಗಳು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು. ನಿವೇಶನ ಬೇಡಿಕೆಯಿರುವ ಗ್ರಾ.ಪಂ.ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿಲ್ಲದಿದ್ದಲ್ಲಿ ಸಮೀಪದ ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಭೂಮಿಯನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಕಾದಿರಿಸಬೇಕು ಎಂದರು.
ಕೆಲವು ಗ್ರಾ.ಪಂ.ವ್ಯಾಪ್ತಿಯಲ್ಲಿ ನಿವೇಶನ ರಹಿತ ಫಲಾನುಭವಿಗಳನ್ನು ಗುರುತಿಸದಿದ್ದಲ್ಲಿ, ಅಂತಹ ಗ್ರಾ.ಪಂ. ಒಂದು ತಿಂಗಳ ಒಳಗೆ ಅರ್ಹ ಫಲಾನುಭವಿಗಳನ್ನು ನಿಯಮಾನುಸಾರ ಆಯ್ಕೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಎಲ್ಲ ತಾಲೂಕಿನ ತಹಶೀಲ್ದಾರ್‌ಗಳು,ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.