ರಾ.ಹೆ. ಭೂಸ್ವಾಧೀನ ಸಮಸ್ಯೆಗೆ ಅದಾಲತ್ ಪರಿಹಾರ
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ
Team Udayavani, May 10, 2022, 12:13 PM IST
ಉಡುಪಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೊಡಕಾಗಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರತ್ಯೇಕ ಅದಾಲತ್ ನಡೆಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಜಿಲ್ಲಾಧಿಕಾರಿ ಸಹಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರ ಕೃಷಿ(ರಾಜ್ಯಖಾತೆ) ಸಚಿವೆ ಶೋಭಾ ಕರಂದ್ಲಾಜೆ ಸೂಚಿಸಿದರು.
ಜಿ.ಪಂ. ಕಚೇರಿಯ ಡಾ|ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅವರು ಮಾತನಾಡಿ, ಪರ್ಕಳದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಆದರೆ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸ್ಥಳೀಯರು ಪರಿಹಾರ ಬಂದಿಲ್ಲ ಎಂದು ಆರೋಪಿಸುತ್ತಿದ್ದಾರೆ ಎಂದಾಗ ಇದಕ್ಕೆ ಧ್ವನಿಗೂಡಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಯಾರಿಗೂ ಪರಿಹಾರ ಬಂದಿಲ್ಲ. ದೊಡ್ಡ ಮಟ್ಟದಲ್ಲಿ ಪರಿಹಾರ ನೀಡಲಾಗುತ್ತಿದೆ ಎಂದಷ್ಟೇ ಹೇಳಲಾಗುತ್ತಿದೆ ಎಂದರು.
ಆಗ ಇಲಾಖೆಯ ಎಂಜಿನಿಯರ್ ಎದ್ದು ನಿಂತು, ಭೂ ಸ್ವಾಧೀನದ ಅನಂತರ ಸಮರ್ಪಕವಾದ ದಾಖಲೆಗಳನ್ನು ನೀಡಿಲ್ಲ. ಆರ್‌ಟಿಸಿ ಯಾರ ಹೆಸರಿಲ್ಲಿದೆಯೋ ಅವರಿಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ವಿವರಿಸಿದರು.
ಆಗ ಸಚಿವರು, ಈ ಸಮಸ್ಯೆಗೆ ಕೂಡಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಸ್ಥಳೀಯರನ್ನು ಕರೆದು ಅದಾಲತ್ ನಡೆಸಬೇಕು. ಕುಂದಾಪುರದಲ್ಲಿ ನಗರಕ್ಕೆ ಪ್ರವೇಶಿಸಕ್ಕೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಮಾಡಿಕೊಡಬೇಕು. ಹೆದ್ದಾರಿಯ ಬೀದಿದೀಪದ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು ಎಂದು ನಿರ್ದೇಶನ ನೀಡಿದರು.
ನಗರಸಭೆ xರೈಲ್ವೇ- ಎನ್‌ಒಸಿ ಯಾರಲ್ಲಿದೆ?
ಇಂದ್ರಾಳಿ ರೈಲು ನಿಲ್ದಾಣದಿಂದ ಹೆದ್ದಾರಿಗೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ಬಗ್ಗೆ ದಿಶಾ ಸಭೆಯಲ್ಲಿ ಚರ್ಚೆ ನಡೆದಿದೆ. ಈ ರಸ್ತೆಯ ಅರ್ಧಭಾಗ ರೈಲ್ವೇ ಇಲಾಖೆಗೆ ಹಾಗೂ ಉಳಿದ ಅರ್ಧ ನಗರಸಭೆಗೆ ಸೇರುತ್ತದೆ. ನಗರಸಭೆಯಿಂದ ಈಗಾಗಲೇ ಪ್ಯಾಚ್ ವರ್ಕ್ ಕೂಡ ಮಾಡಲಾಗಿದೆ. ಆದರೆ, ರೈಲ್ವೇ ಇಲಾಖೆಯಿಂದ ರಸ್ತೆ ಡಾಮರು ಸಂಬಂಧ ಎನ್‌ಒಸಿ ನೀಡದೆ ಇರುವುದರಿಂದ ಕಾಮಗಾರಿ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಪೌರಾಯುಕ್ತ ಡಾ| ಉದಯ ಕುಮಾರ್ ಶೆಟ್ಟಿ ಹೇಳಿದರು. ಆಗ ರೈಲ್ವೇ ಇಲಾಖೆಯ ಅಧಿಕಾರಿಗಳು ಈಗಾಗಲೇ ಎನ್ ಒಸಿ ನೀಡಲಾಗಿದೆ ಎಂದು ಮರು ಉತ್ತರ ನೀಡಿದರು. ಸಚಿವರು ತತ್‌ಕ್ಷಣವೇ ಯಾವುದಾದರೂ ಒಂದು ಕಾಮಗಾರಿಯಲ್ಲಿ ರಸ್ತೆ ಸರಿಪಡಿಸುವಂತೆ ಸೂಚಿಸಿ, ಚರ್ಚೆಗೆ ತೆರೆ ಎಳೆದರು.
ರೈಲ್ವೇ ಪ್ಲಾಟ್‌ಫಾರ್ಮ್ಗೆ ಮೇಲ್ಛಾವಣಿ ಅಳವಡಿಸಿ
ರೈಲು ಪ್ಲಾಟ್‌ಫಾರ್ಮ್ನಲ್ಲಿ ಪ್ರಯಾಣಿಕರಿಗೆ ಮಳೆ ಗಾಲದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತದೆ. ಪ್ಲಾಟ್ ಫಾರ್ಮ್ ಉದ್ದಕ್ಕೂ ಮೇಲ್ಛಾವಣಿ ಅಳವಡಿಸಿಲ್ಲ. ಮುಖ್ಯದ್ವಾರದಲ್ಲಿ ಮಾತ್ರ ಸುಸಜ್ಜಿತ ವ್ಯವಸ್ಥೆ ಇದೆ. ಎಲ್ಲ ಪ್ಲಾಟ್‌ಫಾರ್ಮ್ಗಳಲ್ಲಿಯೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೇಲ್ಛಾವಣಿ/ಶೆಡ್ ರೀತಿಯ ವ್ಯವಸ್ಥೆ ಮಾಡಬೇಕು ಎಂದು ಸಚಿವರು ರೈಲು ಇಲಾಖೆಯ ಅಧಿಕಾರಿಗಳಿಗೆ ತಿಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.