ಪರ್ಯಾಯ ಮಹೋತ್ಸವ: ವಾಹನ ಸಂಚಾರದಲ್ಲಿ ಬದಲಾವಣೆ
Team Udayavani, Jan 16, 2020, 11:33 PM IST
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜ.17 ಮತ್ತು 18ರಂದು ನಡೆಯಲಿರುವ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಪರ್ಯಾಯ ಉತ್ಸವಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಈ ಕಾರಣಕ್ಕಾಗಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಮಂಗಳೂರಿನಿಂದ ಬರುವ ವಾಹನಗಳಿಗೆ
ಜ. 17ರಂದು ಅಪರಾಹ್ನ 2 ಗಂಟೆಯಿಂದ ಜ. 18ರಂದು ಬೆಳಗ್ಗೆ 7ರ ವರೆಗೆ ಮಂಗಳೂರು, ಬಲಾಯಿಪಾದೆ, ಅಂಬಲಪಾಡಿ ಕಡೆಯಿಂದ ಉಡುಪಿ ನಗರಕ್ಕೆ ಬರುವ ಎಲ್ಲ ವಾಹನಗಳು ಅಂಬಲಪಾಡಿ ಮೂಲಕ ರಾ.ಹೆ. 66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ ಮತ್ತು ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7 ಗಂಟೆಯ ಅನಂತರ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಸು ಮಂಗಳೂರಿನತ್ತ ತೆರಳಬೇಕು. ಮಣಿಪಾಲಕ್ಕೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್‌ನಿಂದ ಮುಂದಕ್ಕೆ ಸಾಗಿ ಅಂಬಾಗಿಲು ಮೂಲಕ ಪೆರಂಪಳ್ಳಿ ರಸ್ತೆಯಿಂದಾಗಿ ಉಪೇಂದ್ರ ಪೈ ಸರ್ಕಲ್ ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ತೆರಳಬೇಕು.
ಕುಂದಾಪುರದಿಂದ ಬರುವ ವಾಹನಗಳಿಗೆ
ಕುಂದಾಪುರ ಬ್ರಹ್ಮಾವರ ಮಾರ್ಗವಾಗಿ ಉಡುಪಿ ನಗರಕ್ಕೆ ಬರುವ ವಾಹನಗಳು ಅಂಬಲಪಾಡಿ ಮೂಲಕ ರಾ.ಹೆ. 66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಸಂಜೆ 7ರ ಅನಂತರ ಕುಂದಾಪುರದಿಂದ ಉಡುಪಿ ನಗರಕ್ಕೆ ಆಗಮಿಸುವ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದೆ. ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ಕುಂದಾಪುರಕ್ಕೆ ಹೋಗಬೇಕು.
ಕಾರ್ಕಳದಿಂದ ಬರುವ ವಾಹನಗಳಿಗೆ
ಕಾರ್ಕಳ. ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ , ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವಂತಹ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವೀಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಸಂಜೆ 7ರ ಅನಂತರ ಮಿಷನ್ ಕಂಪೌಂಡ್ ರಸ್ತೆ ಅಂತಿಮ ನಿಲುಗಡೆಯಾಗಿದ್ದು ಅಲ್ಲಿಂದಲೇ ವಾಪಸು ಹಿಂದಿರುಗಬೇಕು.
ಕಾರ್ಕಳ – ಮಣಿಪಾಲ
ಕಾರ್ಕಳ ಮಣಿಪಾಲಕ್ಕೆ ಹೋಗಿ ಬರುವ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಸಂಜೆ 7ರ ಅನಂತರ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಕಾಯಿನ್ ಸರ್ಕಲ… ಪೆರಂಪಳ್ಳಿ ಅಂಬಾಗಿಲು ಮಾರ್ಗವಾಗಿ ಕರಾವಳಿ ಜಂಕ್ಷನ್‌ಗೆ ಆಗಮಿಸಬೇಕು. ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಸು ಅಂಬಾಗಿಲು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲ ಕಾರ್ಕಳ ಕಡೆಗೆ ತೆರಳಬೇಕು.
ಮಂಗಳೂರು – ಮುಂಬಯಿ
ಜ.17ರಂದು ಅಪರಾಹ್ನ 2ರಿಂದ 18ರ ಬೆಳಗ್ಗೆ 7ರ ವರೆಗೆ ಮಂಗಳೂರಿನಿಂದ ಮುಂಬಯಿಗೆ ಹೋಗುವ ಎಲ್ಲ ಬಸ್ಸುಗಳು ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ನೇರವಾಗಿ ಸಂತೆಕಟ್ಟೆ ಮಾರ್ಗವಾಗಿ ಕುಂದಾಪುರ ಕಡೆಗೆ ತೆರಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.