ಹಿರಿಯ ನಾಗರಿಕರನ್ನು ಗೌರವಿಸುವುದು ಅತ್ಯಗತ್ಯ


Team Udayavani, Oct 2, 2018, 6:00 AM IST

011018astro03.jpg

ಉಡುಪಿ: ಮನೆಯಲ್ಲಿರುವ ಹಿರಿಯರನ್ನು ಅಗೌರವಿಸುವವರನ್ನು ಸಮಾಜ ಕೂಡ ಅಗೌರವಿಸಬೇಕು. ಆಗಲಾದರೂ ವೃದ್ಧ ತಂದೆ ತಾಯಿಯರನ್ನು ಗೌರವಿಸುವ ಮನಃಸ್ಥಿತಿ ಮಕ್ಕಳಲ್ಲಿ ಬೆಳೆಯಬಹುದು. ಕಾನೂನಿಂದ ಹಿರಿಯ ನಾಗರಿಕರಿಗೆ ರಕ್ಷಣೆ ನೀಡಬಹುದು. ಆದರೆ ಅವರಿಗೆ ಗೌರವ ಸಿಗುವಂತೆ ಮಾಡಲು ಸಾಧ್ಯವಾಗುವುದು ಸಮಾಜ ಮನಸ್ಸು ಮಾಡಿದಾಗ ಮಾತ್ರ ಎಂದು ಶಾಸಕ ರಘುಪತಿ ಭಟ್‌ ಹೇಳಿದರು. 

ಅವರು ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸೋಮವಾರ ಜರಗಿದ ವಿಶ್ವ ಹಿರಿಯನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳುವಷ್ಟು ಸಮಯ ಇಂದಿನ ಯುವ ಜನತೆಗಿಲ್ಲ. ವೃದ್ಧಾಶ್ರಮಕ್ಕೆ ತಂದೆತಾಯಿಗಳನ್ನು ಬಿಟ್ಟು, ಅವರು ಮೃತರಾದಾಗ ಅವರ ಅಂತ್ಯಸಂಸ್ಕಾರಕ್ಕೂ ಬಾರದೇ ಇರುವಷ್ಟು ಪುರಸೋತ್ತಿಲ್ಲ. ಇದು ವಿದ್ಯಾವಂತ ಸಮಾಜ ಮೌಲಿಕವಾಗಿ ಕುಸಿಯುತ್ತಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಖೇದ ವ್ಯಕ್ತಪಡಿಸಿದರು. 

ಉತ್ತಮ ಮಕ್ಕಳನ್ನು ಗುರುತಿಸಿ
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ಪೋಷಕರನ್ನು ವೃದ್ದಾಪ್ಯದಲ್ಲಿ ಉತ್ತಮವಾಗಿ ಪೋಷಿಸಿದ, ಪೋಷಿಸುತ್ತಿರುವ ಮಕ್ಕಳನ್ನು ಗುರುತಿಸಿ ಸಮ್ಮಾನಿಸಿ, ಇದಕ್ಕೆ ಇಲಾಖೆಯಿಂದ ಬೇಕಾದ ಸಹಕಾರ ನೀಡುವ ಪ್ರಯತ್ನ ಮಾಡುತ್ತೇವೆ. ಇದರಿಂದ ಹತ್ತು ಜನರಿಗೆ ಪ್ರೇರಣೆಯಾಗಲಿ ಎನ್ನುವುದು ನಮ್ಮ ಆಶಯ ಎಂದು ಸಲಹೆ ನೀಡಿದರು. 

ಡೇ ಕೇರ್‌ಗೆ ಸಹಾಯ
ಹಿರಿಯ ನಾಗರಿಕರ ವೇದಿಕೆಯ ಸಿ.ಎಸ್‌ ರಾವ್‌ ಅವರು ಹಿರಿಯ ನಾಗರಿಕರಿಗೆ ಡೇ ಕೇರ್‌ ಸೆಂಟರ್‌ ನಡೆಸಲು ಸ್ಥಳಾವಕಾಶ ಕೇಳಿದ್ದಾರೆ. ಬೋರ್ಡ್‌ ಹೈಸ್ಕೂಲ್‌ನಲ್ಲಿ ಸ್ಥಳಾವಕಾಶ ಒದಗಿಸಿ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಆದರೆ ನಿರ್ವಹಣೆ ಮಾತ್ರ ಹಿರಿಯ ನಾಗರಿಕರ ವೇದಿಕೆ ನೋಡಿಕೊಳ್ಳಬೇಕೆಂದು ಎಂದು ಶಾಸಕ ಭಟ್‌ ತಿಳಿಸಿದರು. 
ಈ ಸಂದರ್ಭ 103 ವರ್ಷದ ಹಿರಿಯ ಗುರುವ ಕೊರಗ ಅವರನ್ನು ಇಲಾಖೆಯಿಂದ ಸಮ್ಮಾನಿಸಲಾಯಿತು. 

ಹಿರಿಯ ಸಿವಿಲ್‌ ನ್ಯಾಯಾಧೀಶೆ ಲತಾ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಸಹಾಯಕ ಜಿಲ್ಲಾ ಪೊಲೀಸ್‌ ಅಧಿಕ್ಷಕ ಕುಮಾರಚಂದ್ರ, ಜಿ. ಪಂ ಸಿಇಓ ಶಿವಾನಂದ ಕಾಪಶಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌,  ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ. ಪಿ. ಕೊಡಂಚ ಮೊದಲಾದವರು ಉಪಸ್ಥಿತರಿದ್ದರು. 

ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಿರಂಜನ ಭಟ್‌ ಸ್ವಾಗತಿಸಿ, ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ  ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಎಲ್‌ ಗೋನ್ಸಾಲ್ವಿಸ್‌ ಪ್ರಸ್ತಾವನೆಗೈದರು, ಗಣೇಶ್‌ ಮರಾಠೆ ವಂದಿಸಿದರು. ಜಿಲ್ಲಾ ಆರೋಗ್ಯ ಇಲಾಖೆಯಿಂದ ನೇತ್ರ ಮತ್ತು ಆರೋಗ್ಯ ತಪಾಸನಾ ಶಿಬಿರ ನಡೆಯಿತು. ಪ್ರಭಾಕರ ಪೈ, ವಸುಧಾ ಪೈ, ನಂದಕುಮಾರ್‌ ಅವರಿಗೆ ನೇತ್ರದಾನದ ಪ್ರಮಾಣಪತ್ರವನ್ನು ವಿತರಿಸಲಾಯಿತು. 

ಹೆಲ್ಪ್ ಡೆಸ್ಕ್
ಹಿರಿಯ ನಾಗರಿಕರ ಸಹಾಯಕ್ಕಾಗಿ ನಗರಸಭೆಯಲ್ಲಿ ಸಹಾಯಕೇಂದ್ರವನ್ನು ತೆರೆಯಲು ಉದ್ದೇಶಿಸಿದ್ದೇವೆ. ನಗರಸಭೆಯಲ್ಲಿ ಆಡಳಿತ ವ್ಯವಸ್ಥೆ ಜಾರಿಗೆ ಬಂದ ಬಳಿಕ ಇದು ಕೂಡ ಜಾರಿಗೆ ಬರಲಿದೆ. ಬಿಲ್‌ ಕಟ್ಟುವುದು, ಮೊದಲಾದ ಸಹಾಯಗಳು ಈ ಹೆಲ್ಪ್ಡೆಸ್ಕ್ ಮೂಲಕವೇ ಹಿರಿಯ ನಾಗರಿಕರಿಗೆ ದೊರಕಲಿದೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು. 

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.