ಬಡ ದೇಗುಲಗಳ ದತ್ತು: ಸಚಿವ ಲಮಾಣಿ
Team Udayavani, May 25, 2017, 3:30 PM IST
ಕೊಲ್ಲೂರು: ಜವುಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಕುಟುಂಬ ಸಮೇತರಾಗಿ ಮೇ 23ರಂದು ರಾತ್ರಿ ಕೊಲ್ಲೂರಿಗೆ ಆಗಮಿಸಿ ಬುಧವಾರ ತನ್ನ 60ನೇ ಹುಟ್ಟುಹಬ್ಬದ ಸಲುವಾಗಿ ಚಂಡಿಕಾ ಹೋಮ ಸೇವೆ ಸಲ್ಲಿಸಿದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಆರ್ಥಿಕವಾಗಿ ಬಲಿಷ್ಠವಾಗಿರುವ ಮುಜರಾಯಿ ದೇವಸ್ಥಾನಗಳನ್ನು ಗುರುತಿಸಿ ಆ ಮೂಲಕ ಮುಜರಾಯಿ ಇಲಾಖೆಯ ಆದಾಯವಿಲ್ಲದ ಸಣ್ಣ ದೇವಸ್ಥಾನಗಳನ್ನು ದತ್ತು ಸ್ವೀಕರಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿಬಂದಿ ಖಾಯಂ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಲ್ಲೂರು ದೇವಸ್ಥಾನದಲ್ಲಿರುವ 76 ನೌಕರರನ್ನು ಖಾಯಂಗೊಳಿಸುವ ಬಗ್ಗೆ ಸರಕಾರದೊಡನೆ ಚರ್ಚಿಸಲಾಗಿದ್ದು ಅತೀ ಶೀಘ್ರದಲ್ಲೇ ಅವರನ್ನು ಖಾಯಂಗೊಳಿಸಲಾಗುವುದು ಎಂದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿನ ಕಾರ್ಯನಿರ್ವಹಧಿಣಾಕಾರಿ ಸಹಿತ ಖಾಲಿ ಇರುವ ಹುದ್ದೆಗಳಿಗೆ ತತ್‌ಕ್ಷಣ ನೇಮಕ ಮಾಡಲಾಗುವುದು. ಕೊಲ್ಲೂರಿನಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಹಮ್ಮಿಕೊಳ್ಳಲಾದ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಭೋಜನ ಶಾಲೆ ನಿರ್ಮಾಣದ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದ್ದು ಆ ಮೂಲಕ ಕೊಲ್ಲೂರಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಟ್ಟು ಶ್ರಮಿಸಲಾಗುವುದು ಎಂದು ತಿಳಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿಗಳಿಗೆ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಪ್ರತಿಧಿಯೊಂದು ದೇವಸ್ಥಾನದ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಪ್ರತಿ ದೇವಸ್ಥಾನಗಳಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆ ಬದ್ಧವಾಗಿದ್ದು ದೇವಸ್ಥಾನಗಳ ಪರಿಸರದಲ್ಲಿ ಮಾಲಿನ್ಯವಾಗದಂತೆ ನಿಗಾ ವಹಿಸಲು ಸೂಚಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜನಾರ್ದನ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯಧಿರಾಮ ಶೆಟ್ಟಿ, ರಮೇಶ್ ಗಾಣಿಗ, ನರಸಿಂಹ ಹಳಗೇರಿ, ಜಯಂತಿ ಪಡುಕೋಣೆ, ಅರ್ಚಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.