Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Team Udayavani, May 6, 2024, 7:15 AM IST

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಉಡುಪಿ:ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಸುರಂಗ (ಟನಲ್‌) ನಿರ್ಮಾಣ ಯೋಜನೆ ಈಗ ಮುನ್ನೆಲೆಗೆ ಬಂದಿದೆ.

ಉಡುಪಿಯಿಂದ ಶಿವಮೊಗ್ಗ ಜಿಲ್ಲೆಗೆ ಸಾಗಲು ಆಗುಂಬೆ ಘಾಟಿ ಮಾರ್ಗವೇ ಪ್ರಧಾನವಾದುದು. ಮಳೆಗಾಲದಲ್ಲಿ ಈ ಮಾರ್ಗದಲ್ಲಿ ಸಂಚಾರ ದುಸ್ತರ. ಸಾಮಾನ್ಯವಾಗಿ ಮುಂಗಾರು ಆರಂಭವಾಗುತ್ತಿದ್ದಂತೆ ಗುಡ್ಡ ಕುಸಿತ ಎದುರಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಎರಡೂ ಜಿಲ್ಲಾಡಳಿಗಳು ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡುತ್ತವೆ. ಮರ ಬಿದ್ದು, ಗುಡ್ಡ ಕುಸಿದು ಸಂಚಾರ ಸಂಪೂರ್ಣ ನಿರ್ಬಂಧಿಸಿದ್ದ ಘಟನೆಗಳೂ ಈ ಹಿಂದೆ ನಡೆದಿದ್ದವು. ಹೀಗಾಗಿಯೇ ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಿಸಬೇಕೆಂಬ ಬೇಡಿಕೆ ಬಹಳ ಕಾಲದ್ದಾಗಿದೆ. ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿ ಶಿವಮೊಗ್ಗಕ್ಕೆ ಬಂದಿದ್ದ ಸಂದರ್ಭ ಪ್ರಸ್ತಾವನೆಯೊಂದನ್ನು ಸಲ್ಲಿಸಲಾಗಿತ್ತು. ಅದರಂತೆ ಯೋಜನೆ ಅನುಷ್ಠಾನ ಸಾಧ್ಯವೇ ಎಂಬಿತ್ಯಾದಿ ಸಾಧಕ ಬಾಧಕಗಳನ್ನು ತಿಳಿಯಲು ಕಾರ್ಯಾರಂಭ ಮಾಡಲಾಗಿದೆ.

ಡಿಪಿಆರ್‌ಗೆ 2 ಕೋ.ರೂ.
ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದ್ದು. ಇದಕ್ಕಾಗಿ 2 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಯೋಜನೆಯ ರೂಪುರೇಷೆ, ಅನುಕೂಲ ಮತ್ತು ಅನನುಕೂಲ, ಅನುಷ್ಠಾನ ವೆಚ್ಚ ಹಾಗೂ ತಗಲುವ ಸಮಯ, ಆ ಸಂದರ್ಭದಲ್ಲಿ ಪರ್ಯಾಯ ಮಾರ್ಗ ಇತ್ಯಾದಿ ಅಂಶಗಳುಳ್ಳ ಡಿಪಿಆರ್‌ ಸಿದ್ಧವಾಗಬೇಕಿದೆ.

ಎಲ್ಲಿ ಆರಂಭ
ಹೆಬ್ರಿ ತಾಲೂಕಿನ ಸೋಮೇಶ್ವರ
ಎಲ್ಲಿಗೆ ಸಂಪರ್ಕ
ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ
ದೂರ
ಸುಮಾರು 12 ಕಿ.ಮೀ.

ವೆಚ್ಚ ಎಷ್ಟು?
ಯೋಜನೆಯ ಆರಂಭಿಕ ವೆಚ್ಚ 3,000 ಕೋ.ರೂ.ಗಳಿಂದ 3,500 ಕೋ.ರೂ. ಎಂದು ಅಂದಾಜಿಸಲಾಗಿದೆ. ಕಾಮಗಾರಿ ಆರಂಭದ ಬಳಿಕ ಯೋಜನಾ ವೆಚ್ಚದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯೂ ಇದೆ. ಸದ್ಯ ಮಲ್ಪೆ- ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯೂ ನಡೆಯುತ್ತಿದೆ. ಇದರಲ್ಲಿಯೇ ಸುರಂಗ ಮಾರ್ಗ ಸೇರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಜೀವ ವೈವಿಧ್ಯಕ್ಕೆ
ಹಾನಿ?
ಆಗುಂಬೆಯು ಪಶ್ಚಿಮ ಘಟ್ಟದಲ್ಲಿದ್ದು,ಅಪಾರ ಜೀವವೈವಿಧ್ಯ ಹೊಂದಿರುವ ಪ್ರದೇಶ. ಇಲ್ಲಿ ಹಲವು ಪ್ರಭೇದಗಳ ಪ್ರಾಣಿ, ಪಕ್ಷಿ ಮತ್ತು ಸಸ್ಯ ಸಂಕುಲಗಳು ಇವೆ. ಪರಿಸರ ಸೂಕ್ಷ್ಮ ವಲಯವೂ ಆಗಿದೆ. ಸುರಂಗ ಮಾರ್ಗ ಕಾಮಗಾರಿಯಿಂದ ಪರಿಸರದ ಮೇಲೂ ಪರಿಣಾಮ ಉಂಟಾಗಬಹುದು. ಹೀಗಾಗಿ ಪರಿಸರಕ್ಕೆ ಯಾವುದೇ ಹಾನಿ ಆಗದಂತೆ, ಜೀವ ವೈವಿಧ್ಯಕ್ಕೆ ಧಕ್ಕೆ ಬಾರದಂತೆ ಯೋಜನೆ ಅನುಷ್ಠಾನ ಮಾಡಲು ಸಾಧ್ಯವೇ ಎಂಬ ನೆಲೆಯಲ್ಲಿ ಡಿಪಿಆರ್‌ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಪರಿಸರ ಇಲಾಖೆಯ ಅನುಮತಿಯೂ ಅಗತ್ಯವಿರುತ್ತದೆ. ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುವ ಸಾಧ್ಯತೆಯೂ ಇದೆ. ಹೀಗಾಗಿ ಯೋಜನೆಯನ್ನು ಪರಿಸರಕ್ಕೆ ಹಾನಿಯಾಗದಂತೆ ರೂಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಲಿವೆ ಎಂದು ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

-  ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.