ಆಗುಂಬೆ ಘಾಟಿ : ರಸ್ತೆ ಬಿರುಕು, ಮತ್ತೆ ಕುಸಿಯುವ ಭೀತಿ
Team Udayavani, Jul 17, 2022, 7:35 AM IST
ಹೆಬ್ರಿ: ಆಗುಂಬೆ ಘಾಟಿಯ 4ನೇ ಸುತ್ತಿನಲ್ಲಿ ಭೂಕುಸಿತವಾಗಿ ಈಗಾಗಲೇ ಬಸ್ ಸಂಚಾರ ಸ್ಥಗಿತಗೊಂಡು ಒಂದು ವಾರ ಕಳೆದಿದೆ. ಇದೇ ವೇಳೆ ಸುರಿಯುತ್ತಿರುವ ಭಾರೀ ಮಳೆಯಿಂದ 3ನೇ ಸುತ್ತಿನ ರಸ್ತೆಯಲ್ಲಿ ಬಿರುಕು ಕಂಡಿದ್ದು ಮತ್ತೆ ಕುಸಿಯುವ ಭೀತಿ ಎದುರಾಗಿದೆ.
ಶನಿವಾರ ಆಗುಂಬೆ ಘಾಟಿಯಲ್ಲಿ 17 ಸೆ.ಮೀ. ಮಳೆಯಾಗಿದ್ದು ಭಾರೀ ಮಳೆಯ ಕಾರಣ ಘಾಟಿಯ ಪ್ರತಿ ಸುತ್ತಿನಲ್ಲೂ ತಡೆಗೋಡೆಯ ಬದಿ ನೀರು ರಬಸವಾಗಿ ಹರಿಯುತ್ತಿರುವುದರಿಂದ ಬಿರುಕು ಕಾಣುತ್ತಿದೆ ಎನ್ನಲಾಗುತ್ತಿದೆ. ಇದೇ ರೀತಿ ಮಳೆ ಮುಂದುವರಿದರೆ ಬಿರುಕು ಬಿಟ್ಟ ಸ್ಥಳದಲ್ಲಿ ನೀರು ಹರಿದು ರಸ್ತೆ ಕುಸಿಯುವ ಭೀತಿ ಎದುರಾಗಿದೆ.
ಕಳೆದ ಒಂದು ವಾರದಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು ಶಿವಮೊಗ್ಗ, ಚಿಕ್ಕಮಗಳೂರಿನಿಂದ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರಿಗೆ ಸಮಸ್ಯೆಯಾಗಿದೆ. ಸದ್ಯ ಕಾರು ಹಾಗೂ ದ್ವಿಚಕ್ರವಾಹನಗಳ ಸಂಚಾರಕ್ಕೆ ಅವಕಾಶವಿದ್ದು ಇದೇ ರೀತಿ ಮಳೆ ಮುಂದುವರಿದರೆ ಲಘವಾಹನ ಸಂಚಾರ ಕೂಡ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ವಿರಾಜಪೇಟೆ -ಬೈಂದೂರು ರಾಜ್ಯ ಹೆದ್ದಾರಿಯ ನೇರಳೆಕೂಡಿಗೆ ಬಳಿ ರಸ್ತೆ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಆ.10ರ ವರೆಗೆ ನಿಷೇಧಿಸಲಾಗಿದೆ. ಇದರ ಬದಲು ಶೃಂಗೇರಿಯಿಂದ ಕಿಗ್ಗಾ ಮೂಲಕ ಬೇಗಾರು ಮಾರ್ಗದಲ್ಲಿ ಸಂಚರಿಸಬಹುದು ಎಂದು ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.