ಒತ್ತಿನೆಣೆಯಲ್ಲಿ ಸಾಕಾರಗೊಳ್ಳಲಿದೆಯೇ ವಿಮಾನ ನಿಲ್ದಾಣ ಯೋಜನೆ?

Team Udayavani, Sep 28, 2018, 6:00 AM IST

ottinene-555.jpg

ಬೈಂದೂರು: ಹೊಸ ತಾಲೂಕು ಕೇಂದ್ರವಾಗಿ ಘೋಷಣೆಯಾದ ಬೈಂದೂರಿನಲ್ಲಿ ಅಗತ್ಯ ಕಚೇರಿಗಳು ಒಂದೊಂದಾಗಿ ಆರಂಭವಾಗಬೇಕಿದೆ. ಇದರ ನಡುವೆ ಮಹತ್ವಾಕಾಂಕ್ಷಿ ಒತ್ತಿನೆಣೆ ವಿಮಾನ ನಿಲ್ದಾಣದ ಕನಸೂ ಸಾಕಾರಗೊಳ್ಳಲು ವೇದಿಕೆ ಒದಗಬೇಕಿದೆ.  

ಬಹುಬೇಡಿಕೆಯ ಕನಸು 
ಒತ್ತಿನೆಣೆ  ವಿಮಾನ ನಿಲ್ದಾಣದ ಕನಸು ಇಂದು ನಿನ್ನೆಯದಲ್ಲ. ಹಲವು ವರ್ಷಗಳ ಪ್ರಯತ್ನದ ನಡುವೆ 2004ರಲ್ಲಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ ಟ್ರಸ್ಟ್‌  ಹಾಗೂ ಮುರ್ಡೆàಶ್ವರ ಆರ್‌.ಎನ್‌.ಶೆಟ್ಟಿ ಟ್ರಸ್ಟ್‌ ಸಹಯೋಗದಲ್ಲಿ ಏರ್‌ಸ್ಟ್ರಿಪ್‌ ಪ್ರಾರಂಭಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಪ್ರವಾಸಿ ಸ್ಥಳಗಳನ್ನು ಹೊಂದಿರುವ ಹೆಗ್ಗಳಿಕೆಯ ಬೈಂದೂರಿಗೆ ಪ್ರವಾಸಿಗರ ಆಗಮನವೂ ಹೆಚ್ಚಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಇದರ ಪಕ್ಕದಲ್ಲೇ ಇದ್ದು, ಮುಡೇìಶ್ವರವೂ ಬೈಂದೂರಿನಿಂದ ಕೆಲವೇ ಕಿ.ಮೀ ಅಂತರದಲ್ಲಿದೆ.

ಮಂಗಳೂರೇ ಗತಿ!
ಗೋವಾವನ್ನು ಹೊರತುಪಡಿಸಿದರೆ ಇಲ್ಲಿನ ಪ್ರವಾಸಿಗರು 150 ಕಿ.ಮೀ. ದೂರದ ಮಂಗಳೂರು ವಿಮಾನ ನಿಲ್ದಾಣವನ್ನೇ ಅವಲಂಬಿಸಬೇಕಾಗಿದೆ. ಕೇಂದ್ರ ಸರಕಾರ ಈಗಾಗಲೇ ವ್ಯಾಪಾರ ವಹಿವಾಟು ಮತ್ತು ಪ್ರವಾಸೋದ್ಯಮ ಅಭಿವೃದ್ದಿಗಾಗಿ ಕಿರು ವಿಮಾನ ನಿಲ್ದಾಣ ಸ್ಥಾಪನೆಗೆ ವಿಶೇಷ ಆಸಕ್ತಿ ವಹಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ  ಜಿಲ್ಲಾಡಳಿತದ ವತಿಯಿಂದ ವಿಮಾನ ನಿಲ್ದಾಣದ ಜಾಗದ ಕುರಿತು ಸರ್ವೇ ಕಾರ್ಯ ಕೂಡ ನಡೆದಿದೆ. ಸದ್ಯ ಭಟ್ಕಳದಿಂದ ಹೆಚ್ಚಿನ ಪ್ರಯಾಣಿಕರು ವಿದೇಶ ಪ್ರಯಾಣಕ್ಕಾಗಿ ಮಂಗಳೂರನ್ನೇ ಅವಲಂಬಿಸಬೇಕಾಗಿದೆ. ಆದರೆ ಇದಕ್ಕಾಗಿ ಮೂರು ತಾಸಿಗೂ ಹೆಚ್ಚು ರಸ್ತೆ ಪ್ರಯಾಣ ಮಾಡಬೇಕಿದೆ. ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಆರಂಭಗೊಂಡರೆ ಈ ಭಾಗದವರಿಗೆ, ಶಿವಮೊಗ್ಗ ಭಾಗದವರಿಗೂ ಉಪಯೋಗವಾಗಲಿದೆ.  

ಸರಕಾರದ ಗಮನ ಸೆಳೆಯುವ ಪ್ರಯತ್ನ 
ಬೈಂದೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಬಗಗೆ ದುಬೈನಲ್ಲಿ ಕಳೆದ ವರ್ಷ ನಡೆದ ಕಾರ್ಯಕ್ರಮದಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗ ದುಬೈ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿತ್ತು. ಇದರೊಂದಿಗೆ ಸ್ಥಳೀಯ ಜನಪ್ರತಿನಿಧಿಗಳಿರುವ ನಿಯೋಗವೊಂದು ಕೇಂದ್ರದ ಸಚಿವರನ್ನು ಭೇಟಿ ಮಾಡುವ ಚಿಂತನೆ ಇದೆ. ಈಗಾಗಲೇ ವಿಮಾನ ನಿಲ್ದಾಣ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು ಒತ್ತಾಯಕ್ಕೆ ಯೋಜಿಸಿದೆ.

ಬೈಂದೂರು ವಿಮಾನ ನಿಲ್ದಾಣ ನನ್ನ ದೊಡ್ಡ ಕನಸು. ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಾದರೆ ಸಂಪರ್ಕ ವ್ಯವಸ್ಥೆಯೂ ಪ್ರಗತಿಯಾಗಬೇಕು. ಬೈಂದೂರಿನಲ್ಲಿ ವಿಮಾನ ನಿಲ್ದಾಣ ಕುರಿತು ಮುಂದಿನ ದಿನದಲ್ಲಿ ಪ್ರಧಾನಿಯವರ ಗಮನಕ್ಕೆ ತರುವುದರೊಂದಿಗೆ ರಾಜ್ಯ ಸರಕಾರದ ಸಹಕಾರದೊಂದಿಗೆ ಕೇಂದ್ರ ಸಚಿವರ ಗಮನ ಸೆಳೆಯಲಾಗುವುದು.
– ಬಿ.ಎಂ. ಸುಕುಮಾರ ಶೆಟ್ಟಿ, 
ಶಾಸಕರು ಬೈಂದೂರು ಕ್ಷೇತ್ರ

ಕಿರು ವಿಮಾನ ನಿಲ್ದಾಣದ ಪ್ರಸ್ತಾವನೆ ಈಗಾಗಲೇ ಸರಕಾರದ ಮಟ್ಟದಲ್ಲಿದೆ. ಮುಂದಿನ ದಿನದಲ್ಲಿ ಹೋರಾಟ ಸಮಿತಿ ಮೂಲಕ ಕೇಂದ್ರ ಸರಕಾರದ ಗಮನ ಸೆಳೆದು ವಿಮಾನ ನಿಲ್ದಾಣ ಸ್ಥಾಪನೆಗೆ ಪ್ರಯತ್ನಿಸಲಾಗುವುದು. 
– ಸಾಧನ ದಾಸ್‌, ಅಧ್ಯಕ್ಷರು, ನಮ್ಮ ಕುಂದಾಪ್ರ ಬಳಗ

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.