ಅಜೆಕಾರು: ಕೊನೆಗೂ ವಿದ್ಯುತ್ ಸಂಪರ್ಕ ಪಡೆದ ದಾರಿದೀಪ
Team Udayavani, Apr 5, 2018, 7:40 AM IST
ಅಜೆಕಾರು: ಮರ್ಣೆ ಪಂಚಾಯತ್ ವ್ಯಾಪ್ತಿಯ ಅಜೆಕಾರು ಪೇಟೆಯಲ್ಲಿ ರಸ್ತೆಯ ವಿಭಾಜಕದ ನಡುವೆ 4 ತಿಂಗಳ ಹಿಂದೆ ಅಳವಡಿಸಿದ ದಾರಿದೀಪಗಳಿಗೆ ವಿದ್ಯುತ್ ಸಂಪರ್ಕ ಇಲ್ಲದ ಬಗ್ಗೆ ಉದಯವಾಣಿ ಪತ್ರಿಕೆಯು ಮಾ. 24ರಂದು ಸಚಿತ್ರ ವರದಿ ಪ್ರಕಟಿಸಿದ ಕೆಲವೇ ದಿನಗಳಲ್ಲಿ ದಾರಿದೀಪ ವಿದ್ಯುತ್ ಸಂಪರ್ಕ ಪಡೆದಿದೆ.
2017ರ ಡಿಸೆಂಬರ್ ತಿಂಗಳಿನಲ್ಲಿ ಸುಮಾರು 9 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ವಿಭಾಜಕದ ನಡುವೆ ದಾರಿ ದೀಪ ಅಳವಡಿಸಿ 4 ತಿಂಗಳು ಕಳೆದರೂ ವಿದ್ಯುತ್ ಸಂಪರ್ಕವಿಲ್ಲದೆ ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿರುವ ಬಗ್ಗೆ ಪತ್ರಿಕೆ ವರದಿ ಮಾಡಿ ಎಚ್ಚರಿಸಿತ್ತು.
ವರದಿಗೆ ಗುತ್ತಿಗೆದಾರರು ಕೂಡಲೇ ಸ್ಪಂದಿಸಿ ರಸ್ತೆ ವಿಭಾಜಕದ ನಡುವಿನ 8 ದಾರಿದೀಪಗಳಿಗೂ ವಿದ್ಯುತ್ ಸಂಪರ್ಕವನ್ನು ಎ. 2ರಂದು ಕಲ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.