ನಿರ್ವಹಣೆಯ ಕೊರತೆ: ಸಾರ್ವಜನಿಕರಿಗೆ ತೊಂದರೆ


Team Udayavani, Jun 5, 2018, 6:15 AM IST

2505ajke01.jpg

ಅಜೆಕಾರು: ಮರ್ಣೆ ಗ್ರಾ. ಪಂ. ವ್ಯಾಪ್ತಿಯ ಅಜೆಕಾರು ಪೇಟೆಯಲ್ಲಿರುವ ಸಾರ್ವಜನಿಕ ಶೌಚಾಲಯವು ಸೂಕ್ತ ನಿರ್ವಹಣೆಯಿಲ್ಲದೆ ಗಬ್ಬೆದ್ದಿದೆ. 

ಅಜೆಕಾರು ಪೇಟೆಯಲ್ಲಿರುವ ಈ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳಿದ್ದರೂ ಸ್ವಚ್ಛ ತೆಯಲ್ಲಿ ಹಿಂದೆ ಬಿದ್ದಿದೆ. 

ಶೌಚಾಲಯದ ಒಂದು ಪಾರ್ಶ್ವದಲ್ಲಿ ಪುರುಷರಿಗೆ ಹಾಗೂ ಇನ್ನೊಂದು ಪಾರ್ಶ್ವದಲ್ಲಿ ಮಹಿಳೆಯರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಕಲ್ಪಿಸಲಾಗಿದ್ದರೂ ಕಟ್ಟಡ ಮಾತ್ರ ನಿರ್ವಹಣೆ ಇಲ್ಲದೆ ಶೌಚಾಲಯದ ಮೇಲ್ಛಾವಣಿ ಪೊದೆಗಳಿಂದ ಆವೃತಗೊಂಡಿದೆ. 

ಅಸಹ್ಯಕರ ಸ್ಥಿತಿ
ಶೌಚಾಲಯದ ಒಳಗೆ ಸ್ವಚ್ಛತೆ ಇಲ್ಲದೆ ದುರ್ವಾಸನೆಯಿಂದ ಕೂಡಿದೆ. ಜತೆಗೆ ಕಟ್ಟಡದ ಒಳಗೆ ಹಳೆಯ ಬಟ್ಟೆಗಳು, ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಅಸಹ್ಯಕರವಾಗಿದೆ. ಶೌಚಾಲಯಕ್ಕೆ ಹೊಂದಿಕೊಂಡೇ ರಿಕ್ಷಾ ನಿಲ್ದಾಣವಿದ್ದು ಇದರ ದುರ್ವಾಸನೆ ಸಹಿಸಿಕೊಂಡೆ ಹೊಟ್ಟೆಪಾಡಿಗಾಗಿ ದಿನ ಕಳೆಯಬೇಕಾಗಿದೆ ಎಂಬುದು ರಿಕ್ಷಾ ಚಾಲಕ ಮಾಲಕರ ಅಳಲು.  

ಸೂಕ್ತ ನಿರ್ವಹಣೆ ಇಲ್ಲದೆ ಪರಿಸರ ದುರ್ವಾಸನೆಯಿಂದ ಕೂಡಿದ್ದು ಸಾಂಕ್ರಾಮಿಕ ರೋಗ ಭೀತಿ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. 

ಮಹಿಳೆಯರಿಗೆ ಮುಜುಗರ 
ಅಜೆಕಾರು ಪೇಟೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯ ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದರೂ ಸಹ ಕೆಲ ವರ್ಷಗಳ ಹಿಂದೆ ಶೌಚಾಲಯದ ಸಮೀಪವೇ ರಿಕ್ಷಾ ತಂಗುದಾಣ ನಿರ್ಮಿಸಿರುವುದರಿಂದ ಮಹಿಳೆಯರು ಶೌಚಾಲಯಕ್ಕೆ ತೆರಳಲು ಮುಜುಗರಪಡುತ್ತಿದ್ದು ಶೌಚಾಲಯ ಇದ್ದೂ ಉಪಯೋಗಕ್ಕೆ ಬಾರದಂತಾಗಿದೆ ಎಂಬುದು ಮಹಿಳೆಯರ ಆರೋಪ. 

ನಾಗರಿಕರ ಸಹಕಾರ ಅಗತ್ಯ
ಸಾರ್ವಜನಿಕ ಶೌಚಾಲಯವನ್ನು ಉಪಯೋಗಿಸುವ ನಾಗರಿಕರು ಸಹ ಸ್ವಚ್ಛತೆ ಕಾಪಾಡುವಲ್ಲಿ ಮುತುವರ್ಜಿ ವಹಿಸ ಬೇಕಾಗಿದೆ. ಶೌಚಾಲಯ ಉಪಯೋಗಿಸಿದ ಅನಂತರ ಸೂಕ್ತವಾಗಿ ಸ್ವತ್ಛಗೊಳಿಸುವುದು ಪ್ರತಿಯೋರ್ವರ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. 

ಸಾಂಕ್ರಾಮಿಕ ರೋಗ ಹರಡುವ ಭೀತಿ
ಸಾರ್ವಜನಿಕ ಶೌಚಾಲಯವು ಸ್ವಚ್ಛತೆಯ ಕೊರತೆಯಿಂದಾಗಿ ಪರಿಸರ ದುರ್ವಾಸನೆಯಿಂದ ಕೂಡಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಉಂಟಾಗಿದೆ. ಈ ದುರ್ವಾಸನೆಯಿಂದಾಗಿ ರಿಕ್ಷಾ ತಂಗುದಾಣದಲ್ಲಿ ರಿಕ್ಷಾ ಚಾಲಕ ಮಾಲಕರಿಗೆ ಸಮಸ್ಯೆ ಉಂಟಾಗುತ್ತಿದೆ.
– ಸಂದೇಶ್‌ ನಾಯಕ್‌, ರಿಕ್ಷಾ ಚಾಲಕ- ಮಾಲಕ

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.