ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್
Team Udayavani, May 17, 2021, 10:53 AM IST
ಕಾಪು: ಕಾಪುಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್‌ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ.
ಇಂದು ಬೆಳಗ್ಗೆ ಆಗಮಿಸಿದ ನೌಕಾಪಡಯ ಹೆಲಿಕಾಪ್ಟರ್ ಮೂಲಕ ಎಲ್ಲರನ್ನೂ ಏರ್ ಲಿಫ್ಟ್ ಮಾಡಿ, ಕೋಸ್ಟ್ ಗಾರ್ಡ್ ನ ವರಾಹ ನೌಕೆಯ ಮೂಲಕ ದಡಕ್ಕೆ ಕರೆತರಲಾಗುತ್ತಿದೆ.
ಸದ್ಯ ಎಲ್ಲಾ ಒಂಬತ್ತು ಮಂದಿ ಕಾರ್ಮಿಕರನ್ನು ಎನ್ ಎಂಪಿಟಿ ಬಂದರಿಗೆ ಕರೆತರಲಾಗುತ್ತಿದೆ. ಕಾರ್ಮಿಕರ ಆರೋಗ್ಯದ ತಪಾಸಣೆಗೆ ವೈದ್ಯರ ತಂಡ ಸಜ್ಜಾಗಿದೆ.
ಇದನ್ನೂ ಓದಿ:ಟಗ್ ಸಿಬ್ಬಂದಿ ರಕ್ಷಣಾ ಕಾರ್ಯ: ಕೋಸ್ಟ್ ಗಾರ್ಡ್ ಡಿಐಜಿ ಜತೆ ಕೋಟ, ಕಟೀಲ್, ಡಿಸಿ ಚರ್ಚೆ
ಎನ್ಎಂಪಿಟಿ ಬಂದರಿನ ಹೊರವಲಯದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಚಂಡಮಾರುತದ ಪರಿಣಾಮ ಆ್ಯಂಕರ್ ತುಂಡಾಗಿ ತೇಲಿ ಬಂದು, ಕಾಪು ಬಳಿಯಲ್ಲಿ ಅಪಘಾತಕ್ಕೊಳಗಾದ ಕೋರಮಂಡಲ ಎಕ್ಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಒಂಬತ್ತು ಮಂದಿ ಸಿಬ್ಬಂದಿಗಳಿದ್ದರು.
ಶುಕ್ರವಾರ ಬೆಳಗ್ಗೆ11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್‌ಪ್ರೆಸ್ ಟಗ್ ಶನಿವಾರ ಬೆಳಗ್ಗೆ 8.30 ಕ್ಕೆ ಕಾಪು ಲೈಟ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಢಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿತ್ತು.
ಟಗ್ ನಲ್ಲಿ ಇರುವ 9 ಮಂದಿ ಸಿಬಂದಿಗಳು ತಮ್ಮ ಜೀವನದ ಅತ್ಯಮೂಲ್ಯವಾದ ಸುಮಾರು 44 ಗಂಟೆಗಳನ್ನು ಈಗಾಗಲೇ ಸಮುದ್ರ ಮಧ್ಯದಲ್ಲೇ ಕಳೆದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.