“ಎಲ್ಲ ವಿಧದ ಕಲಾವಿದರೂ ಮುಖ್ಯವಾಹಿನಿಗೆ ಬರುವಂತಾಗಬೇಕು’
Team Udayavani, Mar 6, 2019, 1:00 AM IST
ಮಲ್ಪೆ: ಸಾಂಸ್ಕೃತಿಕ ಆಯಾಮಗಳು ಸ್ಪರ್ಧಾತ್ಮಕ ಗುಣಮಟ್ಟಕ್ಕೆ ತೆರೆದುಕೊಂಡಿವೆ. ಕಲಾಭಿಮಾನಿಗಳ ನಿರೀಕ್ಷೆ ತಲುಪಲು ಸಾಕಷ್ಟು ಶ್ರದ್ಧೆಯಿಂದ ಶ್ರಮ ವಹಿಸುವ ಕಲಾವಿದರುಗಳಿಗೂ ಒಳಿತಾಗಬೇಕು. ಎಲ್ಲ ವಿಧದ ಕಲಾವಿದರೂ ಅತಿ ಅಗತ್ಯವಾಗಿ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಸಹಕಾರಿ ಧುರೀಣ ಜಯಕರ್ ಶೆಟ್ಟಿ ಇಂದ್ರಾಳಿ ಹೇಳಿದರು.
ಶುಕ್ರವಾರ ಭುಜಂಗ ಪಾರ್ಕಿನ ಬಯಲು ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಸಂಸ್ಕೃತಿ ನಿರ್ದೇಶನಾಲಯ ನವದೆಹಲಿ ಇದರ ಸಹಯೋಗದೊಂದಿಗೆ ಸುಮನಸಾ ಕೊಡವೂರು ಆಯೋಜಿಸಿದ ರಂಗಹಬ್ಬದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಂಗ ನಿರ್ದೇಶಕ ಡಾ| ಸಾಸ್ವೆಹಳ್ಳಿ ಸತೀಶ್ ಮುಖ್ಯಅತಿಥಿಯಾಗಿ ಮಾತನಾಡಿ, ಸರಕಾರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೊಡುವ ಪ್ರೋತ್ಸಾಹ ಮತ್ತು ಸಹಾಯಧನದ ಹೆಚ್ಚಳ, ಅಗತ್ಯದ
ಕುರಿತು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಪ್ರಸಾದನ ಕಲಾವಿದ ಲಿಯಾಕತ್ ಆಲಿ ಅವರನ್ನು ರಂಗ ಸಾಧಕ ಸಮ್ಮಾನ ನೀಡಿ ಗೌರವಿಸಲಾಯಿತು.
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ಉದ್ಯಮಿಗಳಾದ ಪ್ರಭಾಕರ ಪೂಜಾರಿ ಕಾಪು, ಸದಾನಂದ ಸಾಲ್ಯಾನ್, ವಿಜಯ ಶ್ರೀಯಾನ್, ಉಡುಪಿ ನೂತನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೆ„ಟಿ ಅಧ್ಯಕ್ಷೆ ಸುಮಿತ್ರಾ ಆರ್., ನಗರಸಭಾ ಸದಸ್ಯ ವಿಜಯ್ ಕೊಡವೂರು, ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು ಉಪಸ್ಥಿತರಿದ್ದರು.
ಜತೆ ಕಾರ್ಯದರ್ಶಿ ಪ್ರಜ್ಞಾ ಅಮೀನ್ ಸ್ವಾಗತಿಸಿದರು. ಕವನ ವಂದಿಸಿದರು. ಪ್ರಜ್ಞಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಹೊಂಗಿರಣ ಶಿವಮೊಗ್ಗ ತಂಡದಿಂದ “ವೀರ ಉತ್ತರಕುಮಾರ’ ನಾಟಕ ಪ್ರದರ್ಶನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.