ಸಹೋದರತ್ವದಿಂದ ಸೌಹಾರ್ದ
Team Udayavani, Dec 21, 2018, 10:05 AM IST
ಉಡುಪಿ: ಸಹೋದರತ್ವದಿಂದ ಸಹ ಬಾಳ್ವೆ, ಸೌಹಾರ್ದ ಸಾಧ್ಯ ಎಂದು ಉಡುಪಿ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ರೈ|ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಹೇಳಿದ್ದಾರೆ.
ಗುರುವಾರ ಉಡುಪಿ ಶೋಕಮಾತಾ ಇಗರ್ಜಿಯ ವಠಾರದಲ್ಲಿ ಜರಗಿದ ಸರ್ವಧರ್ಮ ಕ್ರಿಸ್ಮಸ್ ಆಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ, ಪರರನ್ನು ದ್ವೇಷಿಂಸಲು, ಹಿಂಸಿಸಲು, ಅನ್ಯಾಯ ಮಾಡಲು ಯಾವ ಧರ್ಮವೂ ಹೇಳಿಲ್ಲ. ಧರ್ಮದ ಸಾರ ತಿಳಿದಾಗ ಸತ್ಯದ ಅರಿವಾಗುತ್ತದೆ. ನಾವು ನಮ್ಮ ನಮ್ಮ ಧರ್ಮಗಳನ್ನು ಸರಿಯಾಗಿ ತಿಳಿದು ಪಾಲಿಸುವ ಜತೆಗೆ ಇತರರ ಧರ್ಮವನ್ನು ಗೌರವಿಸಿದಾಗ ಸೌಹಾರ್ದ ನೆಲೆಸುತ್ತದೆ ಎಂದು ಅವರು ಹೇಳಿದರು.
ಶುಭಾಶಂಸನೆಗೈದ ನಿವೃತ್ತ ಪ್ರಾಂಶುಪಾಲ ಪ್ರೊ| ಪಿ. ಶ್ರೀಪತಿ ತಂತ್ರಿ, ಆಳವಾಗಿ ಅಧ್ಯಯನ ಮಾಡಿದಾಗ ಪ್ರತಿಯೊಂದು ಧರ್ಮ ಕೂಡ ಹುಟ್ಟಿದ್ದು ಎಲ್ಲರ ಕಲ್ಯಾಣಕ್ಕೆ ಎಂಬುದು ಅರ್ಥವಾಗುತ್ತದೆ ಎಂದರು. ಇಗರ್ಜಿಯ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೋನ್ಸಾ, ಮಲ್ಪೆ ಯುಬಿಎಂ ಎಬಿಜರ್ ಚರ್ಚ್‌ನ ಪಾಸ್ಟರ್ ವಂ| ಡೇವಿಡ್ ನಿರ್ಮಾಣಿಕ್, ಡಾ| ಮಹಮ್ಮದ್ ರಫೀಕ್ ಹೂಡೆ, ಲಯನ್ಸ್ ಜಿಲ್ಲಾ ಗವರ್ನರ್ ಡಾ| ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಸೌಹಾರ್ದ ಸಮಿತಿ ಸಂಚಾಲಕ ಮೈಕಲ್ ಡಿ’ಸೋಜಾ ವಂದಿಸಿದರು. ಅಲೊನ್ಸ್ ಡಿ’ಕೋಸ್ಟಾ ನಿರ್ವಹಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.