ಉಡುಪಿ : ಶಿರ್ವ, ಕಾಪು, ಕಟಪಾಡಿಯಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ ಅಧಿಕಾರಿಗಳು
Team Udayavani, Apr 22, 2021, 6:34 PM IST
ಉಡುಪಿ : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ.
ನೂತನ ನಿಯಮದಂತೆ ಇಂದು ( ಏಪ್ರಿಲ್ 22) ನಗರಸಭೆ ವ್ಯಾಪ್ತಿಯೊಳಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ.
ಶಿರ್ವ: ಸರಕಾರದ ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಯಂತೆ ಶಿರ್ವ ಪೋಲೀಸರು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವ್ಯಾಪಾರಿಗಳನ್ನು ವಿನಂತಿಸುತ್ತಿದ್ದಾರೆ
ಕಾಪು : ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಯನ್ವಯ ಅವಶ್ಯಕ ಸಾಮಾಗ್ರಿಗಳನ್ನು ಹೊರತು ಪಡಿಸಿ, ಇತರ ಅಂಗಡಿ – ಮುಂಗಟ್ಟುಗಳನ್ನು ಸ್ವಯಂ ಪ್ರೇರಿವಾಗಿ ಮುಚ್ಚುವಂತೆ ಕಾಪು ಪೊಲೀಸರು ಅಂಗಡಿ ಮಾಲಕರಲ್ಲಿ ಮನವಿ ಮಾಡಿದರು.
ಕಟಪಾಡಿಯಲ್ಲೂ ಬಂದ್: ಸರಕಾರದ ಆದೇಶದಂತೆ ಪೊಲೀಸರು ಕಟಪಾಡಿಯಲ್ಲಿ ದಿನ ಅವಶ್ಯಕ ಸಾಮಾಗ್ರಿಗಳ ಅಂಗಡಿಗಳನ್ನು ಹೊರತುಪಡಿಸಿ ಇತರೆ ಅಂಗಡಿ- ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ.
ಇನ್ನು ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.
ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.