“ಸಮಸ್ತರನ್ನೊಳಗೊಂಡ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಶ್ರಮ’
Team Udayavani, Apr 15, 2018, 7:40 AM IST
ಉಡುಪಿ: ಸ್ವತಂತ್ರ ಭಾರತದಲ್ಲಿ ಎಲ್ಲ ವರ್ಗದವರನ್ನೊಳಗೊಂಡ ಸಮಾಜ ನಿರ್ಮಾಣಕ್ಕಾಗಿ ಡಾ| ಬಿ.ಆರ್.ಅಂಬೇಡ್ಕರ್ ಅವರು ಶ್ರಮಿಸಿ ದ್ದರು. ಅದಕ್ಕಾಗಿ ಅವರು ಕೇವಲ ಹೋರಾಟ ಮಾತ್ರವೇ ಮಾಡದೆ ಮನವೊಲಿಕೆಗೂ ಆದ್ಯತೆ ನೀಡಿದ್ದರು ಎಂದು ಜಿ.ಪಂ. ಸಿಇಒ ಶಿವಾನಂದ ಕಾಪಶಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ ಇಲಾಖೆ, ದಲಿತ ಸಂಘಟನೆಗಳ ಆಶ್ರಯದಲ್ಲಿ ಆದಿ ಉಡುಪಿ ಅಂಬೇಡ್ಕರ್ ಭವನದಲ್ಲಿ ಶನಿವಾರ ಜರಗಿದ ಡಾ| ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನೋತ್ಸವ ಉದ್ಘಾಟಿಸಿ ಮಾತನಾಡಿದರು.
ದಲಿತರ ನೋವನ್ನು ದಲಿತೇತರರಿಗೆ ಮನವರಿಕೆ ಮಾಡುವ ಪ್ರಯತ್ನವನ್ನು ಅಂಬೇಡ್ಕರ್ ನಡೆಸಿದ್ದರು. ಅವರು ಕೊಟ್ಟಿರುವ ಸಂವಿಧಾನದ ಅಂಶಗಳನ್ನು ಮೈಗೂಡಿಸಿ ದೇಶ ವನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯಬೇಕಾಗಿದೆ ಎಂದರು.
ಪ್ರಜಾಪ್ರಭುತ್ವಕ್ಕೆ ಭಾರತೀಯತೆ
ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಜೀವನದ ಬಗ್ಗೆ ಉಪನ್ಯಾಸ ನೀಡಿದ ಮಂಗಳೂರು ಬೊಕ್ಕಪಟ್ಣ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಡಾ| ವಾಸುದೇವ ಬೆಳ್ಳೆ,
“ಪ್ರಜಾಪ್ರಭುತ್ವಕ್ಕೆ ಭಾರತೀಯ ತಂದುಕೊಟ್ಟವರಲ್ಲಿ ಅಂಬೇಡ್ಕರ್ ಅಗ್ರಗಣ್ಯರು. ಆಧುನಿಕ ಭಾರತದ ಪರಿಕಲ್ಪನೆ ಸಾಕಾರ ಗೊಳಿಸುವುದಕ್ಕಾಗಿ ಮಹಿಳೆಯರು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಅವಕಾಶ ದೊರೆಯುವಂತೆ ಮಾಡಿದರು. ಅಂಬೇಡ್ಕರ್ ಅವರನ್ನು ಸಾಮಾಜಿಕ ನ್ಯಾಯ ಶಿಲ್ಪಿಯನ್ನಾಗಿ ಸ್ವೀಕರಿಸಬೇಕು. ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದವರು ತಿಳಿಸಿದರು.
ಎಸ್ಪಿ ಲಕ್ಷ್ಮಣ್ ಬ. ನಿಂಬರಗಿ, ನಗರಸಭೆ ಆಯುಕ್ತ ಜಿ.ಸಿ. ಜನಾರ್ದನ, ತಾ.ಪಂ. ಇಒ ಮೋಹನ್‌ರಾಜ್, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎನ್. ರಮೇಶ್ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಭುಜಬಲಿ ಪಾಸಾನೆ ಸ್ವಾಗತಿಸಿದರು. ಕೆಎಎಸ್ ಪ್ರೊಬೆಷನರಿ ಅಧಿಕಾರಿ ರೇಣುಕಾ ದೇವಿ ಕಾರ್ಯಕ್ರಮ ನಿರೂಪಿಸಿದರು.
ಮಹಿಳಾ ಸಶಸ್ತೀಕರಣದ ಮೊದಲ ಹೆಜ್ಜೆ
ಮಹಿಳಾ ಸಶಸ್ತೀಕರಣದ ಮೊದಲ ಹೆಜ್ಜೆ ಇಟ್ಟದ್ದು ಅಂಬೇಡ್ಕರ್ ಅವರು. ಸಂವಿಧಾನದ 325ನೇ ವಿಧಿಯ ಮೂಲಕ ಮಹಿಳೆಯರಿಗೂ ಮತದಾನದ ಹಕ್ಕು ದೊರೆತು ಸಮಾನತೆ ಬಂತು. ಮಹಿಳೆಯರು ಕೂಡ ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ಆಗ ಪಾರದರ್ಶಕ ಆಡಳಿತ ದೊರೆತು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲು ಸಾಧ್ಯ.
– ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.