ಕೋಟ:ಆ್ಯಂಬುಲೆನ್ಸ್ ಭೀಕರ ಅವಘಡ;3 ಬಲಿ,ಮೂವರು ಗಂಭೀರ
Team Udayavani, Oct 27, 2018, 8:42 AM IST
ಕೋಟ : ಇಲ್ಲಿನ ಮಣೂರು ಮಹಾಲಿಂಗೇಶ್ವರ ದೇಗುಲದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನ 1.30 ರ ವೇಳೆ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಹಾರಿ ಪಲ್ಟಿಯಾಗಿ ಭೀಕರ ಅವಘಡ ಸಂಭವಿಸಿದೆ. ಅವಘಡದಲ್ಲಿ ಆ್ಯಂಬುಲೆನ್ಸ್‌ನಲ್ಲಿ ದ್ದ ರೋಗಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆ್ಯಂಬುಲೆನ್ಸ್‌ನಲ್ಲಿ ಕಾರವಾರದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸಲಾಗುತ್ತಿತ್ತು. ಆ್ಯಂಬುಲೆನ್ಸ್ ಡಿವೈಡರ್ ಹಾರಿ ಟ್ಯಾಂಕರ್‌ವೊಂದಕ್ಕೆ ಢಿಕ್ಕಿಯಾಗಿದೆ. ಟ್ಯಾಂಕರ್‌ನ ಭಾಗ ಜಖಂಗೊಂಡಿದೆ.
ಮೃತ ದುರ್ದೈವಿಗಳು ಕಾರವಾರದ ಆಮದಳ್ಳಿಯ ನಿವಾಸಿಗಳಾದ ಉಲ್ಲಾಸ್ ತಳೇಕರ್(45), ಅಶೋಕ್(37)ಮತ್ತು ಶೈಲೇಶ್ ಎಂದು ತಿಳಿದು ಬಂದಿದೆ.
ಅರವಿಂದ್, ಸರಿತಾ ಮತ್ತು ರಾಘವೇಂದ್ರ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.