ಫಿಶ್ ಮಿಲ್ ಸ್ಟೋರೇಜ್ ನಲ್ಲಿ ಅಮೋನಿಯಾ ಲಿಕ್ವಿಡ್ ಸ್ಪೋಟ: 70ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Aug 12, 2019, 9:15 AM IST
ಕುಂದಾಪುರ: ಇಲ್ಲಿನ ದೇವಲ್ಕುಂದದಲ್ಲಿರುವ ಫಿಶ್ ಮಿಲ್ ಸ್ಟೋರೇಜ್ ಒಂದರಲ್ಲಿ ಅಮೋನಿಯಾ ಲಿಕ್ವಿಡ್ ಸ್ಪೋಟವಾಗಿ 70ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಈ ಫ್ಯಾಕ್ಟರಿಯಲ್ಲಿ ಆಡಳಿತ ವರ್ಗದ 91 ಮಂದಿ ಸೇರಿ ಸುಮಾರು 401 ನೌಕರರು ಇದ್ದಾರೆ. ಅಮೋನಿಯಂ ಅನಿಲ ಸೋರಿಕೆಯಿಂದ 75 ನೌಕರರು ಅಸ್ವಸ್ಥರಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥಗೊಂಡವರಲ್ಲಿ 7ಮಂದಿ ಗಂಡಸರು, 68 ಜನ ಹೆಂಗಸರು ಸೇರಿದ್ದಾರೆ. ಈ ಪೈಕಿ ಓರ್ವ ಮಹಿಳೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ಈ ಘಟನೆ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಯಾವುದ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.