ಮದುಮಕ್ಕಳ ಜಾತ್ರೆ: ಸಂಭ್ರಮದ ಸಿಂಹ ಸಂಕ್ರಮಣ
Team Udayavani, Aug 17, 2017, 6:30 AM IST
ಹೆಬ್ರಿ: ಪೆರ್ಡೂರು ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಆ. 17ರಂದು ನಡೆಯುವ ಸಿಂಹ ಸಂಕ್ರಮಣ ಆಚರಣೆ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.ಉಡುಪಿ ಜಿಲ್ಲೆಯಾದ್ಯಂತದಿಂದ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರದ ದರ್ಶನಕ್ಕೆ ಬರುವುದು ಇಲ್ಲಿಯ ವಿಶೇಷ. ಶ್ರೀ ಅನಂತ ಪದ್ಮನಾಭನ ಕ್ಷೇತ್ರ ವಿಶೇಷ ಕಾರಣಿಕದ ಸಾನಿಧ್ಯವಾಗಿದ್ದು, ಭಕ್ತರು ತಮ್ಮ ಇಷ್ಟ ದೈವವನ್ನು ಸ್ಮರಿಸಿಕೊಂಡು ಪ್ರಾರ್ಥಿಸಿದರೆ ಖಂಡಿತ ಫಲ ನೀಡುತ್ತದೆ ಎಂಬ ನಂಬಿಕೆ ಭಕ್ತರದ್ದಾಗಿದೆ. 12 ಸಂಕ್ರಮಣಗಳೂ ಇಲ್ಲಿ ವಿಶೇಷವಾಗಿದ್ದು. ಅದರಲ್ಲೂ ಸಿಂಹ ಸಂಕ್ರಮಣ ಹಬ್ಬದ ವಾತಾವರಣವನ್ನು ಸೃಷ್ಠಿಸುತ್ತದೆ.
ಬಾಳೆಹಣ್ಣಿಗೊಲಿವ ಭಗವಂತ
ಕದಳಿಪ್ರಿಯ ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿ ಬಾಳೆಹಣ್ಣಿಗೊಲಿದ ಭಗವಂತನೆಂದೇ ಖ್ಯಾತಿ ಪಡೆದಿದ್ದು ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದೆ. ತಮ್ಮ ಇಷ್ಟಾರ್ಥ ಸಿದ್ದಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು ,500 ಬಾಳೆಹಣ್ಣು , ದಿನಕ್ಕೊಂದು ಬಾಳೆಹಣ್ಣು ,ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ. ಕಳೆದ ವರ್ಷ ಸುಮಾರು ಒಂದು ಲಕ್ಷಕೂ ಮಿಕ್ಕಿ ಬಾಳೆಹಣ್ಣು ಶ್ರೀ ದೇವರಿಗೆ ಸಮರ್ಪಿತ ಗೊಂಡಿದ್ದು ಈ ಬಾರಿ ಬಾಳಿಹಣ್ಣಿನ ಬೆಲೆ ದುಬಾರಿ ಹಾಗೂ ಕದಳೀ ಬಾಳೆಹಣ್ಣಿನ ಪೂರೈಕೆ ಕಡಿಮೆ ಆದ್ದರಿಂದ ಭಕ್ತರು ಪರದಾಡುವ ಪರಿಸ್ಥಿತಿ ಇದೆ.
ಹನ್ನೆರಡು ಸಂಕ್ರಮಣ ವ್ರತ ಸೂರ್ಯ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುವ ಶುಭ ಸಂದರ್ಭ ಸಂಕ್ರಮಣವನ್ನು ಇಲ್ಲಿ ಆಚರಿಸಲಾಗುತ್ತಿದ್ದು.ವರ್ಷದ ಹನ್ನೆರಡು ರಾಶಿಗಳನ್ನು ಸೂರ್ಯ ಕ್ರಮಿಸುವ ಘಟ್ಟದಲ್ಲಿ ಅನಂತಪದ್ಮನಾಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆರಾಧಿಸುವ ಪದ್ದತಿ ಹಿಂದಿನಿಂದಲೂ ಇದೆ. ಶ್ರೀ ಕ್ಷೇತ್ರದಲ್ಲಿ 12 ಸಂಕ್ರಮಣಕ್ಕೆ ತಪ್ಪದೇ ಬಂದು ಭಗವಂತನ ದರ್ಶನ ಪಡೆದರೆ ಸಂಕಲ್ಪ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ.ಹಿಂದೆ ಪ್ರತಿ ಸಂಕ್ರಮಣದಂದು ಕಾಲ್ನಡಿಗೆಯಲ್ಲಿಯೇ ದೇವರ ದರ್ಶನ ಪಡೆಯುತ್ತಿದ್ದರು. ಈಗಲೂ ಹೆಚ್ಚಿನ ಭಕ್ತಾದಿಗಳು ನಿರಾಹಾರರಾಗಿ ಶ್ರೀ ಸನ್ನಿಧಿಗೆ ಬಂದು ಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ದೇವರಲ್ಲಿ ಪ್ರಾಥಿಸಿ ವ್ರತಾವರಣೆಯಲ್ಲಿ ಪಾಲ್ಗೊಳ್ಳುತ್ತಾರೆ.
ಅಚ್ಚುಕಟ್ಟಿನ ವ್ಯವಸ್ಥೆ
ವರ್ಷದಿಂದ ವರ್ಷಕ್ಕೆ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಭಕ್ತರು ಯಾವುದೇ ನೂಕು ನುಗ್ಗಲಿಲ್ಲದೆ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.ಭಕ್ತರು ಮಳೆಯಲ್ಲಿ ಒದ್ದೆಯಾಗದಂತೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ದೇವಸ್ಥಾನ ಒಳಾಂಗಣದ ಸುತ್ತ ತಗಡಿನ ಚಪ್ಪರ ಹಾಕಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ ತಿಳಿಸಿದ್ದಾರೆ.
ಮದುಮಕ್ಕಳಿಗೆ ಶುಭಪ್ರದ
ಆಷಾಢ ಮಾಸದ ಬಳಿಕ ಬರುವ ಸಿಂಹ ಮಾಸ ನೂತನ ಮದುಮಕ್ಕಳಿಗೆ ವಿಶೇಷ. ಮದುಮಗ ತನ್ನ ಮನೆ ಹಿರಿಯರೊಂದಿಗೆ ಬಂದು ತನ್ನ ಮಡದಿಯನ್ನು ಕರೆದೊಯ್ಯುವ ಹಾಗೂ ಮದುಮಗಳು ತನ್ನ ತಂದೆ-ತಾಯಿಯೊಂದಿಗೆ ಬಂದು ಗಂಡನ ಮನೆಯೆಡೆಗೆ ನಡೆಯಲು ಸೇರುವ ತಾಣ ಪೆರ್ಡೂರಿನ ಸಿಂಹ ಸಂಕ್ರಮಣವಾಗಿತ್ತು. ಅದಕ್ಕಾಗಿಯೇ ಕಳೆದ ವರ್ಷ ಮದುವೆಯಾದ ಜೋಡಿಗಳು ಜತೆಯಾಗಿ ಬಂದು ಮುಂದಿನ ಭವ್ಯ ಭವಿಷ್ಯಕ್ಕಾಗಿ ದೇವರನ್ನು ಪ್ರಾರ್ಥಿಸುವುದು ಹಿಂದಿನಿಂದಲೂ ನಡೆದ ಸಂಪ್ರದಾಯವಾಗಿದೆ. ಈ ಪದ್ಧತಿ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಕಳೆದ ವರ್ಷ ಸುಮಾರು 55 ಸಾವಿರಕ್ಕೂ ಮಿಕ್ಕಿ ಭಕ್ತಾಧಿಗಳು ದೇವರ ದರ್ಶನಕ್ಕೆ ಪಾತ್ರರಾಗಿದ್ದಾರೆ.
– ಉದಯ ಕುಮಾರ್ ಶೆಟ್ಟಿ ಹೆಬ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.