ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಬ್ರಹ್ಮ ರಥೋತ್ಸವ ಸಂಪನ್ನ
ಗಮನ ಸೆಳೆಯುತ್ತಿರುವ ಹೂವಿನ ಅಲಂಕಾರ, ದೀಪಾಲಂಕಾರ
Team Udayavani, Nov 30, 2019, 8:16 PM IST
ತೆಕ್ಕಟ್ಟೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮ ರಥೋತ್ಸವದ ಪ್ರಯುಕ್ತ ಶ್ರೀ ದೇಗುಲವನ್ನು ಸಂಪೂರ್ಣ ಹೂವಿನಿಂದ ಅಲಂಕರಿಸಿದ್ದು, ಮುಂಜಾನೆಯಿಂದಲೂ ಸಾವಿರಾರು ಭಕ್ತರು ಶ್ರೀ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆಯನ್ನು ಸಲ್ಲಿಸುವ ಮೂಲಕ ಶ್ರೀ ದೇವರ ಕೃಪೆಗೆ ಪಾತ್ರರಾದರು.
ಬ್ರಹ್ಮ ರಥೋತ್ಸವದ ಸಂದರ್ಭದಲ್ಲಿ ಪಿಲಿಕಿಲಿ ತಂಡಗಳಿಂದ ಆಕರ್ಷಕ ಕೀಲು ಕುದುರೆ, ಗೊಂಬೆಗಳ ನೃತ್ಯ, ವಿವಿಧ ವೇಷಗಳು, ತಟ್ಟಿರಾಯ, ಚಂಡೆ ವಾದನ ತಂಡಗಳಿಂದ ನಡೆದ ಚಂಡೆವಾದನ ಒಂದೆಡೆಯಾದರೆ ಮತ್ತೂಂದೆಡೆಯಲ್ಲಿ ಅಲ್ಲಲ್ಲಿ ಸೆಲ್ಫಿ ಪ್ರಿಯರು ಮೊಬೈಲ್‌ನಲ್ಲಿ ದೃಶ್ಯವಳಿಗಳನ್ನು ಸೆರೆ ಹಿಡಿಯುತ್ತಿರುವ ದೃಶ್ಯ ಸಾಮಾನ್ಯವಾಗಿಕಂಡು ಬಂತು.
ಈ ಸಂದರ್ಭ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಆನುವಂಶಿಕ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ , ಕೆ.ವಿಟuಲ ಉಪಾಧ್ಯಾಯ ಹಾಗೂ ಆನುವಂಶಿಕ ಪರ್ಯಾಯ ಅರ್ಚಕರಾಗಿ ಕೆ. ಚಂದ್ರಕಾಂತ್ ಉಪಾಧ್ಯಾಯ ಮತ್ತು ಸಹೋದರ, ಮ್ಯಾನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ವಿಶೇಷ ಕೇಸರಿ ಪಾನಕ ವಿತರಣೆ
ಭಕ್ತರ ದಣಿವು ನೀಗಿಸುವ ನಿಟ್ಟಿನಲ್ಲಿ ಶಿವಮೊಗ್ಗದ ದಿ| ಅಡ್ಡೆ ನಾರಾಯಣ ಭಟ್ ಮತ್ತು ಮಕ್ಕಳು ಸುಮಾರು 2.5 ಕ್ವಿಂಟಾಲ್‌ಗೂ ಅಧಿಕ ಸಕ್ಕರೆಯ ಕೇಸರಿ ಪಾನಕವನ್ನು ವಿತರಿಸಿದರು. ಕಳೆದ ಐವತ್ತು ವರ್ಷಗಳಿಂದಲೂ ಇವರು ಈ ಕಾರ್ಯ ನಡೆಸಿಕೊಂಡು ಬರುತ್ತಿದ್ದಾರೆ ಎನ್ನಲಾಗಿದೆ.
ಸಿಸಿ ಕೆಮರಾ ಕಣ್ಗಾವಲು
ಬ್ರಹ್ಮ ರಥೋತ್ಸವಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಅಪಾರ ಭಕ್ತ ಸಮೂಹವೇ ಸನ್ನಿಧಿ ಹರಿದು ಬರುವುದರಿಂದ ದೇಗುಲ ಒಳಪ್ರಾಕಾರ ಹಾಗೂ ರಥ ಬೀದಿಯಲ್ಲಿ ಪೊಲೀಸ್ ಇಲಾಖೆ ವಿಶೇಷವಾಗಿ ಕೆಮರಾ ಅಳವಡಿಸಿ ಅನುಮಾನಾಸ್ಪದ ವ್ಯಕ್ತಿಗಳ ಚಲನ ವಲನದ ಮೇಲೆ ತೀವ್ರ ನಿಗಾ ವಹಿಸುವ ಕಾರ್ಯ ನಡೆಸಿರುವುದಾಗಿ ಕುಂದಾಪುರ ಠಾಣಾಧಿಕಾರಿ ಹರೀಶ್ ತಿಳಿಸಿದ್ದಾರೆ.
ಚಿತ್ರ ; ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.