ಆನೆಗುಡ್ಡೆ : ಸಂಭ್ರಮದ ಶ್ರೀ ವಿನಾಯಕ ಚತುರ್ಥಿ ; ಹರಿದು ಬಂದ ಭಕ್ತ ಸಮೂಹ
Team Udayavani, Sep 10, 2021, 7:51 PM IST
ತೆಕ್ಕಟ್ಟೆ : ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗ ವಿಶೇಷ ಪೂಜೆಯೊಂದಿಗೆ ಸೆ.10 ಶುಕ್ರವಾರದಂದು ಸಂಭ್ರಮದಿಂದ ಜರುಗಿತು .
ಶ್ರೀ ದೇವಳ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದು ಈ ಸಂದರ್ಭದಲ್ಲಿ ನಂಬಿದ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದರು.
ಹರಿದು ಬಂದ ಭಕ್ತ ಸಮೂಹ : ಕೋವಿಡ್ ಆತಂಕದ ನಡುವೆಯೂ ಕೂಡಾ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಯಂದು ಸಹಸ್ರಾರು ಭಕ್ತರು ಮುಂಜಾನೆಯಿಂದ ಶ್ರೀ ದೇವರ ದರ್ಶನ ಪಡೆದು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ ಹಾಗೂ ಸಿಬ್ಬಂದಿ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.
ಚಿತ್ರಗಳು : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.