ಜಾನುವಾರು ಸಾಗಾಟಕ್ಕೆ ಆ್ಯಪ್‌: ಜಿಲ್ಲಾಧಿಕಾರಿ

ಉಡುಪಿ ಜಿಲ್ಲಾ ಪ್ರಾಣಿ ದಯಾ ಸಂಘದ ಸಾಮಾನ್ಯ ಸಭೆ

Team Udayavani, Aug 8, 2019, 5:14 AM IST

ANIMAL1

ಉಡುಪಿ: ಜಾನುವಾರುಗಳನ್ನು ಕಾನೂನುಬದ್ಧವಾಗಿ, ಸುರಕ್ಷಿತವಾಗಿ ಸಾಗಾಣಿಕೆ ಮಾಡುವ ಬಗ್ಗೆ ದ.ಕ ಜಿಲ್ಲೆಯಲ್ಲಿ ಎಲ್‌ಎಲ್‌ಸಿ (ಲೈವ್‌ ಸ್ಟಾಕ್‌ ಲಾಜಿಸ್ಟಿಕ್‌ ಕಂಟ್ರೋಲ್‌) ಆ್ಯಪ್‌ ಸಿದ್ಧಪಡಿಸಿದ ಮಾದರಿಯನ್ನು ಉಡುಪಿ ಜಿಲ್ಲೆಯಲ್ಲಿಯೂ ಅಳವಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಾಣಿ ದಯಾ ಸಂಘದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆ್ಯಪ್‌ನಲ್ಲಿ ನೋಂದಣಿ ಮಾಡಿ
ಎಲ್‌ಎಲ್‌ಸಿ ಆ್ಯಪ್‌ನಲ್ಲಿ ನೊಂದಣಿ ಮಾಡಿಕೊಂಡು ಜಾನುವಾರುಗಳನ್ನು ಸಾಗಿಸುವುದರಿಂದ ವಾಹನಗಳ ನೊಂದಣಿ ಸಂಖ್ಯೆ, ಸಾಗಾಟಗಾರನ ವಿವರ ಲಭ್ಯವಾಗಲಿದೆ. ಕಾನೂನುಬದ್ದವಾಗಿ ಜಾನುವಾರು ಸಾಗಾಟ ಮಾಡುವವರು ಮತ್ತು ಅಕ್ರಮ ಸಾಗಾಟಗಾರರನ್ನು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗಲಿದೆ ಎಂದು ಡಿಸಿ ಹೇಳಿದರು.

ನೈಟ್‌ ಶೆಲ್ಟರ್‌ ವ್ಯವಸ್ಥೆಗೆ ಕ್ರಮ ಜಾನುವಾರುಗಳ ರಕ್ಷಣೆಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುತ್ತಿರುವ ಗೋ ಶಾಲೆ ಹಾಗೂ ಇತರ ಸಂಸ್ಥೆಗಳು ಕಡ್ಡಾಯವಾಗಿ ನೊಂದಾಯಿಸಿಕೊಳ್ಳುವಂತೆ ಸೂಚನೆ ನೀಡಿದರು. ಇದು ಸಹಾಯಧನಕ್ಕೂ ಅಗತ್ಯವಿದೆ ಎಂದರು.

ನೋಂದಾಯಿತ ಗೋಶಾಲೆಗಳ ಸಂಖ್ಯೆ ಕಡಿಮೆ ಇರುವುದರಿಂದ ಗೋವುಗಳ ನಿರ್ವಹಣೆಗೆ ಜಾಗದ ಕೊರತೆ ಇರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಈ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಹಾಗೂ ಅಪಘಾತದಲ್ಲಿ ಗಾಯಗೊಂಡ ಶ್ವಾನ ಅಥವಾ ಇತರ ಜಾನುವಾರುಗಳ ಶುಶ್ರೂಷೆ ಮಾಡಿ ಅವುಗಳ ರಕ್ಷಣೆಗೆ ಪ್ರತಿ ತಾಲೂಕಿಗೆ ಒಂದು ತಾತ್ಕಾಲಿಕ ನೈಟ್‌ ಶೆಲ್ಟರ್‌ನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲಾ ಪ್ರಾಣಿ ದಯಾ ಸಂಘದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಲು 4 ತಿಂಗಳಿಗೊಮ್ಮ ಸಭೆಯನ್ನು ನಡೆಸುವಂತೆ ತಿಳಿಸಿ, ನೊಂದಾಯಿತ ಗೋ ಶಾಲೆ ಹಾಗೂ ಇತರ ಸಂಸ್ಥೆ ಹಾಗೂ ಸಿಬಂದಿಗೆ ಗುರುತಿನ ಚೀಟಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಡಿಸೆಂಬರ್‌ ಒಳಗೆ ನಿಗದಿತ ಶಾಲೆಗಳನ್ನು ಗುರಿಯಾಗಿಸಿ ಶಾಲೆಗಳಲ್ಲಿ ಪ್ರಾಣಿಗಳ ರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಡಿಸಿ, ಬೇಸಗೆಯಲ್ಲಿ ಶಾಲಾ ಕಟ್ಟಡ ಅಥವಾ ಆವರಣಗಳಲ್ಲಿ ಪಕ್ಷಿಗಳಿಗೆ ಅಗತ್ಯವಾದ ನೀರು, ಆಹಾರವನ್ನು ನೀಡುವ ವ್ಯವಸ್ಥೆ ಕಲ್ಪಿಸುತ್ತಿರುವ ಶಾಲೆಗಳನ್ನು ಗುರುತಿಸಿ ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ಗೌರವಿಸುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರಾಣಿಗಳ ಶವಗಳನ್ನು ವಿಲೇವಾರಿ ಮಾಡಲು ಜಾಗದ ಕೊರತೆ ಇದ್ದು ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯವರಲ್ಲಿ ದ್ವಾರಕಾಮಯಿ, ಸಾಯಿ ಸಾಂತ್ವನ ಮಂದಿರ ಟ್ರಸ್ಟ್‌ ಸಂಸ್ಥೆಯವರು ಮನವಿ ಮಾಡಿದರು.

ಕುದಿ ಗ್ರಾಮದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ನಾಶ, ಗಂಗೊಳ್ಳಿ ಬಂದರಿನಲ್ಲಿ ಬೀದಿ ನಾಯಿಗಳ ಕಾಟ, ಬೀದಿ ನಾಯಿಗಳಿಗೆ ನೈಟ್‌ ಶೆಲ್ಟರ್‌ ಆರಂಭ, ಹೊಸ ಗೋಶಾಲೆ ಆರಂಭದ ಬಗ್ಗೆ ಚರ್ಚೆ ನಡೆಯಿತು.

145 ಪಶುವೈದ್ಯರ ಅಗತ್ಯ
ಜಿಲ್ಲೆಯಲ್ಲಿ 145 ಪಶು ವೈದ್ಯರ ಅಗತ್ಯತೆ ಇದ್ದು, ಪ್ರಸ್ತುತ 36 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಪಶು ಪಾಲನಾ ಇಲಾಖೆ, ಸ್ಥಳೀಯ ಸಂಸ್ಥೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ 3,325 ಶ್ವಾನಗಳಿಗೆ ರೇಬೀಸ್‌ ಲಸಿಕೆ ನೀಡಲಾಗಿದ್ದು, 124 ಶ್ವಾನಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ 3 ಗೋ ಹತ್ಯೆ ಪ್ರಕರಣ ಹಾಗೂ 11 ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ದಾಖಲಾಗಿರುವುದಾಗಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ| ಸರ್ವೋತ್ತಮ ಉಡುಪ ಮಾಹಿತಿ ನೀಡಿದರು.

ಸಭೆ ಪ್ರಾರಂಭದಲ್ಲಿ ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಾಣಿ ದಯಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕ್ರಮ ಕೈಗೊಳ್ಳಲು ಸುತ್ತೋಲೆ
ಜಿಲ್ಲೆಯಲ್ಲಿ ಜಾನುವಾರುಗಳ ಅಕ್ರಮ ಸಾಗಾಟ ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಯಲ್ಲಿನ ಜಾನುವಾರುಗಳ ಸಾಗಾಟ ನಡೆಯುತ್ತಿದೆ ಎಂದು ಎಸ್ಪಿ ನಿಷಾ ಜೇಮ್ಸ್‌ ತಿಳಿಸಿದರು. ಜಾನುವಾರುಗಳನ್ನು ಬೀದಿಗೆ ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳುವ ಚಿಂತನೆ ಇದೆ ಮತ್ತು ಗ್ರಾ. ಪಂ.ಗಳ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಸಂರಕ್ಷಣೆ ಕುರಿತಂತೆ ಪಂಚಾಯತ್‌ಗಳ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಜಿಪಂ ಸಿಇಓ ಮೂಲಕ ಎಲ್ಲಾ ಪಂಚಾಯತ್‌ಗಳಿಗೆ ಸುತ್ತೋಲೆ ಕಳುಹಿಸಲಾಗುವುದು ಎಂದು ಡಿಸಿ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.