ಇಚ್ಛಾಶಕ್ತಿ ಇದ್ದಲ್ಲಿ ಅರ್ಜಿಗಳು ತ್ವರಿತಗತಿಯಲ್ಲಿ ವಿಲೇವಾರಿ
ಕಾಪು ತಾಲೂಕು ಪಹಣಿ ವಿತರಣಾ ಕೇಂದ್ರ ಉದ್ಘಾಟಿಸಿ ಶಾಸಕ ಲಾಲಾಜಿ ಮೆಂಡನ್
Team Udayavani, Jun 18, 2019, 5:54 AM IST
ಕಾಪು: ಕಾಪು ತಾಲೂಕು ಕಚೇರಿಯ ಕೆಳ ಮಹಡಿಯಲ್ಲಿ ಪ್ರಾರಂಭಿ ಸಲಾದ ತಾಲೂಕಿನ ನೂತನ ಪಹಣಿ (ಆರ್‌ಟಿಸಿ) ವಿತರಣಾ ಕೇಂದ್ರವನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಜೂ. 17ರಂದು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಕಾಪು ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳ ವಿಶೇಷ ಮುತುವರ್ಜಿ ಯಿಂದಾಗಿ ತಾಲೂಕು ಕಚೇರಿಯಲ್ಲಿ ಪ್ರತೀಯೊಂದು ಅರ್ಜಿಗಳು ಕೂಡಾ ತ್ವರಿತಗತಿಯಲ್ಲಿ ವಿಲೇವಾರಿಯಾಗುತ್ತಿವೆ. ಇದಕ್ಕೆ ಅಧಿಕಾರಿಗಳ ಇಚ್ಛಾಶಕ್ತಿಯೇ ಮೂಲ ಕಾರಣವಾಗಿದೆ. ಸಾರ್ವಜನಿಕರು ತಾಲೂಕು ಕಚೇರಿ ಹಾಗೂ ಪಹಣಿ ವಿತರಣಾ ಕೇಂದ್ರದ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ತಾಲೂಕಿನ ಜನತೆಯ ಬಹು ಸಮಯದ ಬೇಡಿಕೆ ಯಾಗಿದ್ದ ಪಹಣಿ ಕೇಂದ್ರ ಸ್ಥಾಪನೆಯು ಇದೀಗ ಅನುಷ್ಠಾನಕ್ಕೆ ಬಂದಿದೆ. ನೂತನ ಪಹಣಿ ಕೇಂದ್ರದಲ್ಲಿ ತಾಲೂಕಿನ ಜನತೆ ಅಗತ್ಯದ ಸೌಕರ್ಯಗಳಾದ ಆರ್.ಟಿ.ಸಿ. ಮತ್ತು ಮ್ಯುಟೇಶನ್ ಪ್ರತಿಗಳು ದೊರಕಲಿವೆ. ಇದರಿಂದಾಗಿ ಕಾಪು ತಾಲೂಕಿನ ಜನತೆ ಪಹಣಿ ಪತ್ರ, ಮ್ಯುಟೇಶನ್ ಪ್ರತಿಗಳಿಗಾಗಿ ಉಡುಪಿಗೆ ತೆರಳುವುದನ್ನು ತಪ್ಪಿಸಬಹುದಾಗಿದೆ ಎಂದರು.ಕಾಪು ತಾಲೂಕು ಡೆಪ್ಯುಟಿ ತಹ ಶೀಲ್ದಾರ್ ಕಲ್ಲಮುರುಡಪ್ಪ, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.