28 ಸ್ಥಳಗಳಲ್ಲಿ ಮರಳುಗಾರಿಕೆಗೆ ಅನುಮೋದನೆ
Team Udayavani, Aug 15, 2017, 8:05 AM IST
ಉಡುಪಿ: ಕರ್ನಾಟಕ ಕರಾವಳಿ ವಲಯ ನಿರ್ವಹಣಾ ಸಮಿತಿ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡಿದ 28 ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ.
ರಾಜ್ಯ ಸಮಿತಿಯು ನೀಡಿದ ನಿಬಂಧನೆ ಗಳು, ಒಪ್ಪಂದ ಪತ್ರದ ಮಾರ್ಗಸೂಚಿಗಳನ್ನು ಪರಿಶೀಲಿಸಿದ ಸಮಿತಿಯು ಈಗಾಗಲೇ ಮರಳುಗಾರಿಕೆ ನಡೆಸಲು ನೋಂದಣಿಯಾದ 173 ಅರ್ಜಿದಾರರಲ್ಲಿ ಆಯ್ಕೆ ಮಾಡಲು ಚಿಂತನೆ ನಡೆಸಿತು. ಇವರ ಕುರಿತು ತಹಶೀಲ್ದಾರರಿಂದ ವರದಿ ತರಿಸಿಕೊಂಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಮುಂದೆ ಪರಿಶೀಲನೆ ನಡೆಸಲಿದೆ. ಇನ್ನೆರಡು ದಿನಗಳಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಸಭೆ ನಿರ್ಧರಿಸಿತು. ಇದುವರೆಗೆ ಅರ್ಜಿ ಸಲ್ಲಿಸದವರು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಜನರಿಗೆ ಮರಳುಗಾರಿಕೆ ನಡೆಸಲು ಮತ್ತು ಹೊರಜಿಲ್ಲೆಗೆ ರವಾನೆಯಾಗದೆ ಸ್ಥಳೀಯವಾಗಿ ಬಳಸಲು ಸಭೆ ನಿರ್ಧರಿಸಿತು.
ಸುಮಾರು ಒಂದು ವಾರದಲ್ಲಿ ಮರಳುಗಾರಿಕೆ ಆರಂಭವಾಗಿ ಮರಳು ಜನರಿಗೆ ದೊರಕಬಹುದು ಎಂದು ಅಂದಾಜಿಸಲಾಗಿದೆ. ಸಭೆಯಲ್ಲಿ ಸಹಾಯಕ ಕಮಿಷನರ್ ಶಿಲ್ಪಾ ನಾಗ್, ಎಸ್ಪಿ ಡಾ| ಸಂಜೀವ ಪಾಟೀಲ್, ಸಿಆರ್‌ಝಡ್ ಅಧಿಕಾರಿ ವಿಜಯ ಕುಮಾರ್, ಪರಿಸರ ಅಧಿಕಾರಿ ಲಕ್ಷ್ಮೀಕಾಂತ್, ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಕೋದಂಡರಾಮಯ್ಯ ಮೊದಲಾ ದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.