ಅಡಿಕೆಗೆ ಎಲೆಚುಕ್ಕಿ ರೋಗ ಬಾಧೆ: ಔಷಧ ಸಿಂಪಡಣೆಯಿಂದ ನಿಯಂತ್ರಣಕ್ಕೆ ಪ್ರಯತ್ನ

Team Udayavani, Jan 3, 2023, 6:25 AM IST

ಅಡಿಕೆಗೆ ಎಲೆಚುಕ್ಕಿ ರೋಗ ಬಾಧೆ: ಔಷಧ ಸಿಂಪಡಣೆಯಿಂದ ನಿಯಂತ್ರಣಕ್ಕೆ ಪ್ರಯತ್ನ

ಕುಂದಾಪುರ: ಅಡಿಕೆ ಬೆಳೆಗೆ ಬಾಧಿಸಿದ ಎಲೆ ಚುಕ್ಕೆ ರೋಗವು ಕರಾವಳಿ ಹಾಗೂ ಮಲೆನಾಡು ಭಾಗದ ರೈತರ ನಿದ್ದೆಗೆಡಿಸಿದೆ. ಕುಂದಾಪುರ ಗ್ರಾಮಾಂತರ ಭಾಗದ ಹಳ್ಳಿಹೊಳೆ, ಯಡಮೊಗೆ ಭಾಗದಲ್ಲಿ ವಿಜ್ಞಾನಿಗಳ ಸಲಹೆಯಂತೆ ರೈತರು ಔಷಧ ಸಿಂಪಡಣೆ ಸಹಿತ ಕೆಲವೊಂದು ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲೆಚುಕ್ಕಿ ರೋಗವನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ 1964ರಲ್ಲಿಯೇ ಈ ರೋಗ ಕಂಡು ಬಂದಿದ್ದು, ಅಡಿಕೆೆಗೆ ಕಡಿಮೆ ಹಾನಿಯುಂಟು ಮಾಡಿತ್ತು. ಮಲೆನಾಡಿನ ಸಸಿ ತೋಟಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿದ್ದ ಈ ರೋಗವು ಎರಡು ವರ್ಷಗಳಿಂದೀಚೆಗೆ ಫಸಲು ಕೊಡುತ್ತಿರುವ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅಡಿಕೆ ಗಿಡಗಳ ಎಲೆಗಳಲ್ಲಿ ದ್ಯುತಿ ಸಂಶ್ಲೇಷಣ ಪ್ರಕ್ರಿಯೆಗೆ ಹಾನಿ ಉಂಟು ಮಾಡಿ ಇಳುವರಿ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ಹರಡುವಿಕೆಗೆ ಕಾರಣ ?
ಕಡಿಮೆ ಉಷ್ಣಾಂಶ ಹಾಗೂ ಹೆಚ್ಚಿನ ಆದ್ರìತೆಯಿಂದ ಕೂಡಿದ ವಾತಾವರಣ ಈ ರೋಗ ವೇಗವಾಗಿ ಹರಡಲು ಕಾರಣವಾಗಿದೆ. ಎಲೆ ಚುಕ್ಕಿ ರೋಗವು ಯಡಮೊಗೆ, ಹಳ್ಳಿಹೊಳೆ, ಕಮಲಶಿಲೆ, ಆಜ್ರಿ ಹಾಗೂ ಇನ್ನಿತರ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು, ಸೆಪ್ಟಂಬರ್‌ನಲ್ಲಿ ರೋಗ ಬಾಧೆಯು ತೀವ್ರವಾಗಿತ್ತು. ಇದನ್ನು ಗಮನಿಸಿದ ಯಡಮೊಗೆಯ ಜಯರಾಮ್‌ ನಾಯ್ಕ, ಈ ರೋಗವನ್ನು ನಿವಾರಣೆ ಮಾಡುವ ಸಲುವಾಗಿ ಬ್ರಹ್ಮಾವರ ಕೃಷಿ ವಿಜ್ಞಾನಿಗಳಿಂದ ಮಾಹಿತಿ ಪಡೆದು ಔಷಧ ಸಿಂಪಡಣೆ ಮಾಡಿದ್ದರಿಂದ ರೋಗವು ನಿಯಂತ್ರಣಕ್ಕೆ ಬಂದಿದೆ.

ಈ ರೋಗದ ನಿಯಂತ್ರಣವನ್ನು ರೈತರು ಸಾಮೂಹಿಕವಾಗಿ ಕೈಗೆತ್ತಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ಭಾಗದ ಕೃಷಿಕರು ಈಗಾಗಲೇ ಪ್ರಯತ್ನಕ್ಕೆ ಕೈಹಾಕಿದ್ದು ರೋಗದ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಕುಂದಾಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ನಿಧೀಶ್‌ ಕೆ.ಜಿ. ಅವರು ತಿಳಿಸಿದ್ದಾರೆ.

ರೋಗದ ಲಕ್ಷಣಗಳು
– ಅಡಿಕೆ ಸೋಗೆಯಲ್ಲಿ ಹಳದಿ ಬಣ್ಣದ ಅಂಚುಗಳಿರುವ ಬೂದು ಬಣ್ಣದ ಚುಕ್ಕೆಗಳು ಕಂಡು ಬರುತ್ತದೆ.
– ಸೋಗೆಗಳಲ್ಲಿ ಚುಕ್ಕೆಗಳು ಹೆಚ್ಚಾದಂತೆ ಒಂದಕ್ಕೊಂದು ಕೂಡಿಕೊಂಡು ಒಣಗಿದ ಸೋಗೆಗಳು ಸುಟ್ಟಂತೆ ಕಾಣುತ್ತದೆ.
– ಈ ಚುಕ್ಕೆ ರೋಗವು ತೋಟದಿಂದ ತೋಟಕ್ಕೆ ಹರಡಬಹುದು.
– ರೋಗ ಬಂದಿರುವ ಗಿಡಗಳಲ್ಲಿ ಫಸಲು ಕಡಿಮೆಯಾಗಿ ಇಳುವರಿ ಕುಂಠಿತವಾಗುತ್ತದೆ.

ನಿಯಂತ್ರಣಕ್ಕೇನು ಕ್ರಮ ?
– ಮಳೆಗಾಲದ ಆರಂಭಕ್ಕೂ ಮುನ್ನ ಶೇ. 1ರ ಬೋಡೋì ದ್ರಾವಣವನ್ನು ಅಡಿಕೆ ಗೊನೆಗಳ ಜತೆಗೆ ಎಲೆಗಳು ಹಾಗೂ ಶಿರ ಭಾಗಗಳು ಸಂಪೂರ್ಣವಾಗಿ ನೆನೆಯುವ ಹಾಗೆ ಸಿಂಪಡಿಸಬೇಕು. ಕನಿಷ್ಠ 3 ಬಾರಿ ಹಂತ ಹಂತವಾಗಿ ಸಿಂಪಡಿಸಬೇಕು.
– ಯಾವುದೇ ಶಿಲೀಂಧ್ರ (propico nozol) ನಾಶಕ ಸಿಂಪಡಿಸುವ ಸಂದರ್ಭ ತೋಟದ ಶುಚಿತ್ವ ಹಾಗೂ ಮಳೆ ಬಾರದಿರುವ ಸಮಯ ನಿಗದಿಪಡಿಸಬೇಕು.
– ಮಣ್ಣು ಪರೀಕ್ಷೆ ಆಧಾರದ ಮೇಲೆ ಸಮರ್ಪಕವಾಗಿ ಪೋಷಕಾಂಶಗಳನ್ನು ನೀಡಬೇಕು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.