ಪ್ರಜನನ ಶಾಸ್ತ್ರ -ಸುಶೃತನು ಕಂಡಂತೆ ಕೃತಿ ಬಿಡುಗಡೆ
Team Udayavani, Mar 31, 2017, 12:36 PM IST
ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಕುತ್ಪಾಡಿ ಉಡುಪಿ ಇದರ ಮಹಿಳಾ ಕ್ಷೇಮಾಭಿವೃದ್ಧಿ ಘಟಕದ ವತಿಯಿಂದ ಜರಗಿದ ಸೋದರಿ ನಿವೇದಿತಾ ಅವರ 150ನೇ ಜಯಂತಿಯ ಸಂದರ್ಭದಲ್ಲಿ ಕೆಎಂಸಿ ಮಂಗಳೂರಿನ ಪ್ರಜನನ ಶಾಸ್ತ್ರ ವಿಭಾಗದ ಖ್ಯಾತ ತಜ್ಞ ಡಾ| ಪ್ರಹ್ಲಾದ ಕುಷ್ಟಗಿ ಅವರು ಅನುವಾದಿಸಿದ “ಪ್ರಜನನ ಶಾಸ್ತ್ರ – ಸುಶೃತನು ಕಂಡಂತೆ’ ಕೃತಿಯ ಬಿಡುಗಡೆ ಸಮಾರಂಭ ಮಹಾವಿದ್ಯಾಲಯದ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಸರಕಾರಿ ಆಸ್ಪತ್ರೆಯ ನಿವೃತ್ತ ಪ್ರಸೂತಿ ತಜ್ಞೆ ಡಾ| ಸಾವಿತ್ರಿ ದೈತೋಟ ಕೃತಿಯನ್ನು ಬಿಡುಗಡೆಗೊಳಿಸಿದರು.ಕೃತಿಯ ಅನುವಾದಕ ಡಾ| ಪ್ರಹ್ಲಾದ ಕುಷ್ಟಗಿ ಮಾತನಾಡಿ, ಆಧುನಿಕ ವೈದ್ಯ ಪದ್ಧತಿಯಲ್ಲಿ ಇರುವ ಪ್ರಜನನ ಶಾಸ್ತ್ರದ ಕುರಿತು ಸಾವಿರಾರು ವರ್ಷಗಳ ಹಿಂದೆ ಆಯುರ್ವೇದ ಶಾಸ್ತ್ರದಲ್ಲಿ ವಿವರಿಸಿದೆ. ಇಂದಿನ ಯುವವೈದ್ಯರಿಗೆ ಈ ಕೃತಿ ದಾರಿದೀಪವಾಗಲಿ ಎಂದು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲ ಡಾ| ಪ್ರಭಾಕರ ಯು. ರೆಂಜಾಳ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಜಾದೂಗಾರ ಪ್ರೊ| ಶಂಕರ್ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಮಹಿಳಾ ಕ್ಷೇಮಾಭಿವೃದ್ಧಿ ಘಟಕದ ಅಧ್ಯಕ್ಷೆ ಡಾ| ಮಮತಾ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಲಿಖೀತಾ ಡಿ. ಎನ್. ಹಾಗೂ ಡಾ| ಹರ್ಷಿತಾ ಎಂ. ಎಸ್. ಕಾರ್ಯಕ್ರಮ ನಿರ್ವಹಿಸಿದರು. ಡಾ| ಚೇತನಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.