ಅಷ್ಟೋತ್ತರ ಸಹಸ್ರ ನಾಳಿಕೇರ ಗಣಪತಿ ಯಾಗ
Team Udayavani, Aug 27, 2017, 8:55 AM IST
ತೆಕ್ಕಟ್ಟೆ: ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ ಪೂಜೆಯೊಂದಿಗೆ ಶುಕ್ರವಾರದಂದು ಜರಗಿತು .
ಶ್ರೀ ದೇಗುಲ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದು ಈ ಸಂದರ್ಭದಲ್ಲಿ ನಂಬಿದ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದರು.
ಭಕ್ತ ಸಮೂಹ
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿಯಂದು ಮುಂಜಾನೆಯಿಂದ ವರುಣ ಆಗಮನದ ನಡುವೆಯೂ ಸುಮಾರು ನಲವತ್ತು ಸಾವಿರಕ್ಕೂ ಅಧಿಕ ಭಕ್ತರು ಶ್ರೀ ದೇವರ ದರ್ಶನ ಪಡೆದು 8 ಸಾವಿರಕ್ಕೂ ಅಧಿಕ ಭಕ್ತಾದಿಗಳು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಉದಯವಾಣಿಗೆ ತಿಳಿಸಿದ್ದಾರೆ.
ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆನುವಂಶಿಕ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಕೆ. ವಿಟuಲ ಉಪಾಧ್ಯಾಯ ಆನುವಂಶಿಕ ಪರ್ಯಾಯ ಅರ್ಚಕರಾದ ಕೆ. ರಮಾನಂದ ಉಪಾಧ್ಯಾಯ ಮತ್ತು ಸಹೋದರರು ಉಪಸ್ಥಿತರಿದ್ದರು.
ವಿಶೇಷ ಭದ್ರತೆ
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಿನ್ನೆಲೆಯಲ್ಲಿ ವಿಶೇಷವಾಗಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದ್ದು ಸುರಕ್ಷೆಗೆ ಹೆಚ್ಚಿನ ಗಮನ ನೀಡಲಾಗಿದೆ .
ವಿಶೇಷ ವ್ಯವಸ್ಥೆ
ದೇಗುಲ ಸಂಪೂರ್ಣವಾಗಿ ಹೂವಿನಿಂದ ಅಲಂಕಾರಗೊಳಿಸಲಾಗಿದೆ. ಸುಮಾರು 13 ಸಾವಿರಕ್ಕೂ ಅಧಿಕ ಪಂಚಕಜ್ಜಾಯ, ಸುಮಾರು 10 ಸಾವಿರ ಲಡ್ಡು, ಸುಮಾರು 5 ಸಾವಿರ ಕಡಬು (ಮೂಡೆ) ಹಾಗೂ ಅಪಾರ ಭಕ್ತ ಸಮೂಹವೇ ದೇಗುಲಕ್ಕೆ ಹರಿದು ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸುಮಾರು ಎಂಟುವರೆ ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.