ಸಾಗುವಳಿ ಸಕ್ರಮ:ಅರ್ಜಿ ಸಲ್ಲಿಸಲು ಜನಸ್ನೇಹಿ ಕೇಂದ್ರದ ಮುಂದೆ ಜನಜಂಗುಳಿ


Team Udayavani, Feb 9, 2019, 12:30 AM IST

0802kota1e.jpg

ಕೋಟ:  ಸರಕಾರಿ ಭೂಮಿಯಲ್ಲಿ ಅನಧಿಕೃತ ಸಾಗುವಳಿ ಮಾಡಿರುವ ಜಾಗವನ್ನು ಸಕ್ರಮ ಗೊಳಿಸಿಕೊಳ್ಳುವುದಕ್ಕಾಗಿ ನಮೂನೆ 57ರಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅರ್ಜಿ ಸಲ್ಲಿಸಲು ಆಗಮಿಸುವವರ ಸಂಖ್ಯೆ ದಿನದಿಂದ ದಿನಕ್ಕೆ  ಹೆಚ್ಚುತ್ತಿದೆ. ಇದರಿಂದಾಗಿ ಕೋಟ ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಾಕಷ್ಟು  ಸಮಸ್ಯೆಯಾಗುತ್ತಿದೆ.ಈ ಮೊದಲು ಕೈಬರಹದ ಮೂಲಕ ತಾಲೂಕು ಕಚೇರಿಗಳಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇದ್ದು, ಇದೀಗ ಅದನ್ನು ರದ್ದುಪಡಿಸಿ  ತಂತ್ರಾಂಶದ ಮೂಲಕ ಜನಸ್ನೇಹಿ ಕೇಂದ್ರದಲ್ಲಿ  ನಮೂದಿಸಲು ಸೂಚಿಸಲಾಗಿದೆ. ಹೀಗಾಗಿ ಏಕಾಏಕಿ ಜನರು ಅರ್ಜಿಸಲ್ಲಿಸಲು ಮುಗಿಬೀಳುತ್ತಿದ್ದಾರೆ.

ಇತರ ಕೆಲಸಗಳಿಗೆ ಹಿನ್ನಡೆ
ಪ್ರತಿದಿನ ನೂರಾರು ಮಂದಿ ಸರತಿಯ ಸಾಲಿನಲ್ಲಿ ನಿಲ್ಲುತ್ತಿರುವುದರಿಂದ ಜನಸ್ನೇಹಿ ಕೇಂದ್ರದ ಇತರ ಕೆಲಸ-ಕಾರ್ಯಗಳಿಗೆ ಹಿನ್ನಡೆ ಯಾಗಿದೆ, ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಸಮಸ್ಯೆಯಾಗುತ್ತಿದೆ.

ಕಾಲಾವಕಾಶವಿದ್ದರೂ  ಕೇಳುತ್ತಿಲ್ಲ
ಅರ್ಜಿ ಸಲ್ಲಿಕೆಗೆ 16-3-2019ರ ವರೆಗೆ ಕಾಲಾವಕಾಶವಿದೆ. ಹೀಗಾಗಿ ಅವಸರ ಮಾಡುವ ಅಗತ್ಯವಿಲ್ಲ. ಎಂದು ಮನವಿ ಮಾಡಿದರೂ ಜನರು ಕೇಳುತ್ತಿಲ್ಲ ಹಾಗೂ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಪ್ರತ್ಯೇಕ ಕೌಂಟರ್‌ಗೆ ಆಗ್ರಹ
ಕೋಟದಲ್ಲಿ ಕೇವಲ ಒಂದೇ ಕಂಪ್ಯೂಟರ್‌ ಹಾಗೂ ಸಿಬಂದಿ ಇದ್ದು  ಎಲ್ಲ  ಕೆಲಸಗಳನ್ನು ಒಟ್ಟಿಗೆ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ನಮೂನೆ 57ರ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಮಾಡಬೇಕು, ಇತರ ಕೆಲಸಗಳು ಸಾಂಗವಾಗಿ ನಡೆಯುವಂತೆ ಮಾಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

3 ದಿನಗಳಿಂದ ಬರುತ್ತಿದ್ದೇನೆ
ನಮೂನೆ 57ರ ಅರ್ಜಿ ಸಲ್ಲಿಸಲು ಮೂರು ದಿನದಿಂದ ಈ ಕೇಂದ್ರಕ್ಕೆ ಬರುತ್ತಿದ್ದೇನೆ. ಆದರೆ ಜನದಟ್ಟಣೆಯ ಕಾರಣದಿಂದ ಸಾಧ್ಯವಾಗುತ್ತಿಲ್ಲ. ಮುಂದಿನ ಒಂದು ತಿಂಗಳು ಕೂಡ ಸಾರ್ವಜನಿಕರಿಗೆ ಇದೇ ರೀತಿ ಸಮಸ್ಯೆಯಾಗಲಿದೆ. ಆದ್ದರಿಂದ ಇಲ್ಲಿಗೆ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಮಾಡಬೇಕು.
– ಶಕೀಲಾ ಹೆಗ್ಡೆ, 
ಅರ್ಜಿ ಸಲ್ಲಿಸಲು ಬಂದವರು

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.