“ಹರಿಕಥೆ ಕೇಳುವುದರಿಂದ ನಾಸ್ತಿಕತೆ ಮಾಯ’
Team Udayavani, Sep 27, 2019, 5:18 AM IST
ಉಡುಪಿ: ಹರಿಕಥಾ ಪರಿಷತ್ತು ಗಳು ಸಮೃದ್ಧವಾಗಿ ಬೆಳೆದು ಗ್ರಾಮೀಣ ಭಾಗದಲ್ಲಿ ಹರಿಕಥೆ ಬಗೆ ಜಾಗೃತಿ ಮೂಡಲಿ. ಆ ಮೂಲಕ ಜನರ ಮನಸ್ಸಿನಲ್ಲಿರುವ ನಾಸ್ತಿಕತೆ ಮಾಯವಾಗಲಿ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಿಳಿಸಿದರು.
ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಪಲಿಮಾರು ಮಠ, ಮಂಗಳೂರು ಹರಿಕಥಾ ಪರಿಷತ್ತು, ಬೆಂಗಳೂರು ಅಖೀಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು, ಕಾರ್ಕಳ ಶ್ರೀ ಹಂಡೆದಾಸ ಪ್ರತಿಷ್ಠಾನ ಸಹಯೋಗ ದಲ್ಲಿ ಗುರುವಾರ ರಾಜಾಂಗಣದಲ್ಲಿ ಆಯೋಜಿಸಿದ್ದ “60 ದಿನಗಳ ನಿರಂತರ ಹರಿಕಥಾ ಜ್ಞಾನ ಯಜ್ಞ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಜನರಿಗೆ ಮನೋರಂಜನೆ ನೀಡುವುದರ ಜತೆಗೆ ಮನಸ್ಸಿನಲ್ಲಿ ದೇವರನ್ನು ನೆಲೆಸುವಂತೆ ಮಾಡಲು ಹರಿಕಥಾ ಕಾರ್ಯಕ್ರಮ ಸಹಕಾರಿ. ಶ್ರೀ ಕೃಷ್ಣ ಮಠದಲ್ಲಿ ಅನೇಕ ಹರಿಕಥಾ ಭಾಗಗಳು ನಡೆದಿವೆ. ಆದರೆ ಇದೇ ಮೊದಲ 60 ದಿನಗಳ ಕಾಲ ನಿರಂತರವಾಗಿ ವಿವಿಧ ಊರುಗಳ ಹರಿದಾಸರನ್ನು ಕರೆದು ಹರಿಕಥಾ ಕಾರ್ಯ ಕ್ರಮವನ್ನು ನಡೆಸಿರುವುದು ಶ್ಲಾಘನೀಯ. 4ವರ್ಷದ ಮಗು ಸಹ ಹರಿಕಥಾ ಭಾಗ ನಡೆಸಿಕೊಟ್ಟಿರುವುದು ಈ ಬಾರಿ ವಿಶೇಷ ಎಂದರು.
ಉಡುಪಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ದೇವಾನಂದ ಉಪಾಧ್ಯಾಯ, ಮಂಗಳೂರು ಹರಿಕಥಾ ಪರಿಷತ್ತು ಅಧ್ಯಕ್ಷ ಮಹಾಬಲ ಶೆಟ್ಟಿ, ಬೆಂಗಳೂರು ಕೀರ್ತನ ಕಲಾ ಪರಿಷತ್ತು ಲೋಕೇಶದಾಸ, ಕಾರ್ಕಳ ಹಂಡೆದಾಸ ಪ್ರತಿಷ್ಠಾನದ ರುಕ್ಮಣಿ ಹಂಡೆ, ಬೆಂಗಳೂರು ನಾಗರಾಜ್ ಉಪಸ್ಥಿತರಿದ್ದರು. ಪರಿಷತ್ತಿನ ಜಿಲ್ಲಾ ಸಂಚಾಲಕ ವೈ. ಅನಂತಪದ್ಮನಾಭ ಭಟ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.