ಮಕ್ಕಳಿಗೆ ರಾಧಾ-ಕೃಷ್ಣ, ಊರ್ಮಿಳೆ-ಲಕ್ಷ್ಮಣರ ಪ್ರೇಮ ತಿಳಿಸಿ: ಅಕ್ಷಯಾ ಗೋಖಲೆ

ಶಿವಪಾಡಿ ದೇಗುಲ ಅತಿರುದ್ರ ಮಹಾಯಾಗ ಧಾರ್ಮಿಕ ಸಭೆಯಲ್ಲಿ ಅಕ್ಷಯಾ ಗೋಖಲೆ

Team Udayavani, Feb 23, 2023, 5:15 AM IST

ಮಕ್ಕಳಿಗೆ ರಾಧಾ-ಕೃಷ್ಣ, ಊರ್ಮಿಳೆ-ಲಕ್ಷ್ಮಣರ ಪ್ರೇಮ ತಿಳಿಸಿ: ಅಕ್ಷಯಾ ಗೋಖಲೆ

ಉಡುಪಿ: ಪ್ರಸ್ತುತ ಪೋಷಕರು ಮನೆಯಲ್ಲಿ ತಮ್ಮ ಮಕ್ಕಳಿಗೆ ರಾಧಾ-ಕೃಷ್ಣ, ಸೀತಾ-ರಾಮ ಮತ್ತು ಊರ್ಮಿಳೆ-ಲಕ್ಷ್ಮಣರ ಪವಿತ್ರ ಅಮರ ಪ್ರೇಮವನ್ನು ತಿಳಿಸುವುದರ ಜತೆಗೆ ಭಾರತೀಯ ಸಂಸ್ಕೃತಿಯನ್ನು ತಿಳಿಸಿಕೊಡುವ ಪ್ರಯತ್ನವನ್ನು ಮಾಡಬೇಕಿದೆ. ಇದರಿಂದ ಲವ್‌ ಜೆಹಾದ್‌ನಂತಹ ಪಿಡುಗನ್ನು ತಡೆಗಟ್ಟಬಹುದು ಎಂದು ಕಾರ್ಕಳದ ಉಪನ್ಯಾಸಕಿ, ವಾಗ್ಮಿ ಅಕ್ಷಯಾ ಗೋಖಲೆ ತಿಳಿಸಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಬುಧವಾರ ಆರಂಭಗೊಂಡಿರುವ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

18 ವರ್ಷ ತುಂಬುತ್ತಿದ್ದಂತೆ ಹಿಂದೂ ಯುವತಿ ಲಕ್ಷ್ಮೀ, ರಜಿಯಾ ಆಗಿ ಮತಾಂತರವಾಗುವುದಕ್ಕೆ ಮೂಲ ಕಾರಣ ಪೋಷಕರು. ಶ್ರದ್ಧಾ 32 ತುಂಡುಗಳಾಗಿ ಫ್ರಿಡ್ಜ್ ನಲ್ಲಿ ಸೇರಿದರೂ ನಮ್ಮ ಯುವತಿಯರು ಲವ್‌ ಜೆಹಾದ್‌ ಬಲೆಗೆ ಸಿಲುಕುತ್ತಿದ್ದಾರೆ ಎಂಬುದಕ್ಕೆ ಕಾರಣ ಏನೆಂದು ಚಿಂತಿಸಬೇಕಾಗಿದೆ. ಮಕ್ಕಳಿಗೆ ಭಾರತದ ಸಂಸ್ಕೃತಿಯ ಬಗ್ಗೆ ಸ್ಥೂಲವಾದ ಪರಿಚಯವನ್ನು ಹೆತ್ತವರು ತಿಳಿಹೇಳಬೇಕಾಗಿದೆ. ನಾವು ಸರಿಯಿದ್ದರೆ ಯಾರು ಏನು ಮಾಡಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಅರಿವು ಮೂಡಿಸಬೇಕಾದ ಅನಿವಾರ್ಯತೆ ಇದೆ ಎಂದರು.

ಹಿಂದೂ ಧರ್ಮದ ಬಗ್ಗೆ ದೃಢವಾದ ಹೆಮ್ಮ ಮತ್ತು ಅಗಾಧವಾದ ಅರಿವನ್ನು ಮಕ್ಕಳಲ್ಲಿ ತುಂಬಬೇಕು. ಭಾರತವನ್ನು ಮಾತೆಯ ರೂಪದಲ್ಲಿ ಪೂಜಿಸುತ್ತೇವೆ. ಪುರುಷ ಮತ್ತು ಪ್ರಕೃತಿ, ಶಿವ ಹಾಗೂ ಶಕ್ತಿ ಒಂದಾದರೆ ಮಾತ್ರ ಸಮಾಜವು ಪರಿಪೂರ್ಣವಾಗಲು ಸಾಧ್ಯ. ಪ್ರಸ್ತುತ ಸಮಾಜದಲ್ಲಿ ಪುರುಷರಿಗಿಂತ ಮಹಿಳೆಯರೇ ಸಂಸ್ಕೃತಿಯಿಂದ ದೂರ ಹೋಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಎಲ್ಲವೂ “ಶಿವ’

ಉದ್ಘಾಟಿಸಿದ ಶೃಂಗೇರಿ ಪಾಠಶಾಲೆಯ ಪ್ರಚಾರಕ, ಯಾಗದ ಪ್ರಧಾನ ಅರ್ಚಕ ವಿನಾಯಕ ಉಡುಪ ಮಾತನಾಡಿ, ಭಗವಂತನು ಎಲ್ಲ ರೂಪಗಳಲ್ಲಿಯೂ ಇದ್ದಾನೆ ಎಂದು ಶಾಸ್ತ್ರ ತಿಳಿಸುತ್ತದೆ. “ಶಿವ’ ಎನ್ನುವ ಶಬ್ದದ ಅರ್ಥ ಎಲ್ಲವೂ, ಯಾವುದರಲ್ಲಿ ಸೇರಿಕೊಂಡಿದೆಯೋ ಅವನೇ ಶಿವ. ಈ ಪ್ರಪಂಚದಲ್ಲಿ ಭಗವಂತನ ಅಸ್ತಿತ್ವವನ್ನು ಹೊರತುಪಡಿಸಿ ಬೇರಾವುದಕ್ಕೂ ಸ್ವಾತಂತ್ರ್ಯವಿಲ್ಲ. ವೈದಿಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯೇ ದೇಶದ ಘನತೆಯನ್ನು ಎತ್ತಿಹಿಡಿಯುವ ಸಾಧನವಾಗಿದೆ ಮತ್ತು ವೈಶಿಷ್ಟ್ಯವೂ ಹೌದು ಎಂದು ತಿಳಿಸಿದರು.

ಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಆರೆಸ್ಸೆಸ್‌ ಜಿಲ್ಲಾ ಸಂಘಚಾಲಕ್‌ ನಾರಾಯಣ ಶೆಣೈ, ಸಹಕಾರಿ ಧುರೀಣರಾದ ಶಂಭು ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ, ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಉಡುಪಿ ತಾಲೂಕು ಬ್ರಾಹ್ಮಣ ಸಂಘದ ಮಂಜುನಾಥ ಉಪಾಧ್ಯ, ಶೃಂಗೇರಿ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ್‌ ಶಾಸ್ತ್ರೀ, ಪ್ರಮುಖರಾದ ಎಂ. ಮುಕುಂದ ಪ್ರಭು, ಪಾಂಡುರಂಗ ಲಾಗ್ವಾಂಕರ್‌, ಮೊಕ್ತೇಸರರಾದ ದಿನೇಶ್‌ ಪ್ರಭು, ಶುಭಕರ ಸಾಮಂತ್‌, ದೇಗುಲದ ಶಾಶ್ವತ ಟ್ರಸ್ಟಿ ದಿನೇಶ್‌ ಶ್ರೀಧರ ಸಾಮಂತ್‌ ಮೊದಲಾದವರು ಉಪಸ್ಥಿತರಿದ್ದರು.

ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿದರು. ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ ನಿರೂಪಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ವಂದಿಸಿದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.