ಆತ್ಮಸ್ಥೈರ್ಯ ವ್ಯಕ್ತಿತ್ವ ವಿಕಸನದ ಮೂಲ : ಡಾ| ಕೃಪಾ ಆಳ್ವ
Team Udayavani, Mar 10, 2017, 2:02 PM IST
ಉಡುಪಿ: ವಿದ್ಯಾರ್ಥಿ ದೆಸೆಯಲ್ಲಿ ಕೀಳರಿಮೆಯಂತಹ ಗುಣಗಳನ್ನು ಮೈಗೋಡಿಸಿಕೊಳ್ಳದೆ, ಆತ್ಮಸ್ಥೈರ್ಯದಿಂದ ವೈಚಾರಿಕ ಮತ್ತು ವೈಜಾನಿಕ ದೃಷ್ಟಿಕೋನದೊಂದಿಗೆ ಮುನ್ನಡೆದಾಗ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದೆಂದು ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷೆ ಡಾ| ಕೃಪಾ ಆಳ್ವ ಹೇಳಿದರು.
ಅವರು ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರ. ದ. ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಾಂಶುಪಾಲ ಪೊ›| ಬಿ. ಜಗದೀಶ್ ರಾವ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಅವರನ್ನು ಈ ವೇಳೆ ಸಮ್ಮಾನಿಸಲಾಯಿತು. ನಗರಸಭಾ ಸದಸ್ಯ ಯಶ್‌ಪಾಲ್ ಸುವರ್ಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರಕಾಶ್ ಅಂದ್ರಾದೆ ಮತ್ತು ಸುಜಾತ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮ್ಯಾಕ್ಸ್ ವೆಲ್ ಕುಂದರ್ ಉಪಸ್ಥಿತರಿದ್ದರು.
ಸಾಧನೆಗೈದ ವಿದ್ಯಾರ್ಥಿನಿಯರನ್ನು ಈ ಸಂದರ್ಭ ಸಮ್ಮಾನಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ| ಭಾಸ್ಕರ್ ಶೆಟ್ಟಿ ಎಸ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ| ರೋಶನ್ ಕುಮಾರ್ ವರದಿ ವಾಚಿಸಿದರು. ವಾಣಿಜ್ಯ ವಿಭಾಗದ
ಶೋಭಾ ಆರ್. ಕಾರ್ಯಕ್ರಮ ನಿರ್ವಹಿಸಿದರು. ಮನಃಶಾಸ್ತ್ರ ವಿಭಾಗದ ಡಾ| ವಾಣಿ ಆರ್ ಬಲ್ಲಾಳ್ ವಂದಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.