Ayodhya Ram Mandir; ಜ. 22ಕ್ಕೆ 500ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಪೂಜೆ, ಅನ್ನಪ್ರಸಾದ

ಮನೆಮನೆಯಲ್ಲಿ ರಾಮನಾಮ ಜಪ

Team Udayavani, Jan 9, 2024, 1:05 AM IST

Ayodhya Ram Mandir; ಜ. 22ಕ್ಕೆ 500ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಪೂಜೆ, ಅನ್ನಪ್ರಸಾದ

ಉಡುಪಿ/ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠಾಪನೆಗೆ ದಿನಗಣನೆ ಆರಂಭಗೊಂಡಿದ್ದು, ಕರಾವಳಿ ಉಭಯ ಜಿಲ್ಲೆಯಾದ್ಯಂತ ಸಂಭ್ರಮ ಇಮ್ಮಡಿ ಗೊಂಡಿದೆ. ಒಂದೆಡೆ ಪರ್ಯಾಯೋತ್ಸವ ಮತ್ತೊಂದೆಡೆ ಅಯೋಧ್ಯೆ ಉತ್ಸವದ ಸಂಭ್ರಮ ಜಿಲ್ಲೆಗೆ ಮತ್ತಷ್ಟು ಮೆರುಗು ನೀಡಲಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲೆಯ ಮನೆಮನೆಗಳಿಗೆ ಭೇಟಿ ನೀಡಿ ಮಂತ್ರಾಕ್ಷತೆ ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಜ. 16ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಈಗಾಗಲೇ ಶೇ. 80ರಷ್ಟು ಮನೆಗಳಿಗೆ ಮಂತ್ರಾಕ್ಷತೆ ತಲುಪಿದೆ.

ಎಲ್ಲ ದೇವಸ್ಥಾನಗಳಲ್ಲಿಯೂ ಅನ್ನಪ್ರಸಾದ
ಜ. 22ರಂದು ಆಯಾ ಊರಿನ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.

ರಾಮ ಮಂದಿರ ಪ್ರತಿಷ್ಠಾಪನೆಯ ನೇರವೀಕ್ಷಣೆಗಾಗಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗುತ್ತದೆ. ರಾಮನಾಪ ಜಪ, ಭಜನೆ ಸಂಕೀರ್ತನೆ, ಪಾನಕ, ಉಪಾಹಾರ, ಮಧ್ಯಾಹ್ನ ಪ್ರಮುಖ ದೇವಸ್ಥಾನಗಳಲ್ಲಿ ಅನ್ನಪ್ರಸಾದ ಸೇವೆ, ಸಂಜೆ ದೀಪೋತ್ಸವ ಸಹಿತ ಎಲ್ಲ ಮನೆಗಳಲ್ಲಿ ದೀಪ ಬೆಳಗಲಿದೆ ಎನ್ನುತ್ತಾರೆ ರಾಮಮಂದಿರದ ಉಡುಪಿ ನಗರ ಸಂಯೋಜಕ ಶಶಾಂಕ್‌ ಶಿವತ್ತಾಯ.

ಮಂತ್ರಾಕ್ಷತೆ ರಕ್ಷಣೆ
ಕಾರ್ಯಕರ್ತರು ಮನೆಮನೆಗೆ ತಂದು ನೀಡಿರುವ ಮಂತ್ರಾಕ್ಷತೆಗೆ ತುಪ್ಪ ಹಾಕಿರುವ ಕಾರಣ ವರ್ಷಗಟ್ಟಲೆ ಕಾಲ ಶೇಖರಿಸಿಟ್ಟುಕೊಳ್ಳಬಹುದು. ದೇವರ ಕೋಣೆ, ಅಕ್ಕಿಗೆ ಮಿಶ್ರಣ ಮಾಡಿ ಅಥವಾ ತಲೆಗೆ ಕೂಡ ಹಾಕಿಕೊಳ್ಳಬಹುದು. ನೈವೇದ್ಯ ರೂಪದಲ್ಲಿಯೂ ಸೇವನೆ ಮಾಡಬಹುದು. ಅಯೋಧ್ಯೆಯ ರಾಮ ಮಂದಿರದಿಂದ ಆಗಮಿಸಿರುವ ರಾಮ ಮಂತ್ರಾಕ್ಷತೆ ಪ್ರತೀ ಹಿಂದೂಗಳ ಮನೆಗೆ ತಲುಪಲಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಈಗಾಗಲೇ ಶೇ. 80ರಷ್ಟು ಮನೆಗಳಿಗೆ ಮಂತ್ರಾಕ್ಷತೆ ತಲುಪಿದ್ದು, ಶೀಘ್ರದಲ್ಲಿ ಎಲ್ಲ ಮನೆಗಳಿಗೆ ತಲುಪಿಸಲಾಗುವುದು.
-ಸುರೇಂದ್ರ ಮಾರ್ಕೋಡು ಕೋಟೇಶ್ವರ,
ಜಿಲ್ಲಾ ಸಂಯೋಜಕರು, ರಾಮಮಂದಿರ ಅಕ್ಷತೆ ಅಭಿಯಾನ

ಮಂಗಳೂರು ನಗರ ವ್ಯಾಪ್ತಿಯಲ್ಲಿ ಶೇ. 80ರಷ್ಟು ಅಕ್ಷತೆ ವಿತರಣೆಯಾಗಿದೆ. ಉಳಿದದ್ದನ್ನು ಎರಡು ಮೂರು ದಿನಗಳಲ್ಲಿ ಮುಗಿಸಲಾಗುವುದು. ಜ. 22ರಂದು ನಗರದ ಸುಮಾರು 70 ದೇವಳಗಳಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಎಲ್‌ಇಡಿ ಪರದೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ನೇರಪ್ರಸಾರದ ವೀಕ್ಷಣೆಗೆ ವ್ಯವಸ್ಥೆಯಾಗಿದೆ. ದೇವಳಗಳಲ್ಲಿ ಅನ್ನಪ್ರಸಾದ ಸೇವೆ, ರಾಮತಾರಕ ಹವನ, ಭಜನೆ, ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ ಪ್ರತಿ ಮನೆಯಲ್ಲಿ ಕನಿಷ್ಠ ಐದು ರಾಮಜ್ಯೋತಿ ಬೆಳಗಿ, ಉತ್ತರ ದಿಕ್ಕಿಗೆ ಆರತಿ ಬೆಳಗಿಸುವ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿದೆ.
– ಶಿವಾನಂದ ಮೆಂಡನ್‌, ಮಂತ್ರಾಕ್ಷತೆ ವಿತರಣೆ ಅಭಿಯಾನ ಮಹಾನಗರ ಸಂಚಾಲಕರು, ಮಂಗಳೂರು

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.