ಅಯೋಧ್ಯೆಯಲ್ಲಿ ನೀಲಿಮಿಶ್ರಿತ ಶ್ವೇತಶಿಲೆಯ ರಾಮನ ವಿಗ್ರಹ
ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ ಸಭೆಯಲ್ಲಿ ನಿರ್ಣಯ
Team Udayavani, Sep 12, 2022, 7:05 AM IST
ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್‌ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್ , ಕೋಶಾಧಿಕಾರಿ ಶ್ರೀಗೋವಿಂದಗಿರಿ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮೊದಲಾದವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ನಿರ್ಮಾಣವೆಚ್ಚ, ದೇಣಿಗೆ ಹೆಚ್ಚಳ:
ಆರಂಭದಲ್ಲಿ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ರೂ. ವೆಚ್ಚ ತಗುಲಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜಿಎಸ್‌ಟಿ ವೆಚ್ಚ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ತಗುಲಬಹುದೆಂದು ಅಂದಾಜಿಸಲಾಗಿದೆ. ತಿಂಗಳೊಂದಕ್ಕೆ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿಗೂ ಮೀರಿದೆ ಎಂದು ಸಭೆಗೆ ತಿಳಿಸಲಾಯಿತು.
ಮಹಾರಾಷ್ಟ್ರದ ಸಾಗುವಾನಿ ಮರ
ಮಂದಿರಕ್ಕೆ ಬೇಕಾಗುವ ಸಾಗುವಾನಿ ಮರವನ್ನು ಮಹಾರಾಷ್ಟ್ರದಿಂದ ತರಿಸಿಕೊಳ್ಳಲಾಗುವುದು. ಈ ಖರ್ಚು ವೆಚ್ಚಗಳ ವಿವರಗಳನ್ನು ಸಭೆಗೆ ಸಲ್ಲಿಸಿ ಅನುಮೋದನೆ ಪಡೆಯಲಾಯಿತು.
ಕರ್ನಾಟಕದಿಂದ ಸ್ವರ್ಣ
ಶಿಖರ: ಬೇಡಿಕೆ ಮಂಡನೆ
ಭವ್ಯ ರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ ಇಂಗಿತವನ್ನು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು.
ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕರ್ನಾಟಕದ ಹಂಪಿಯಿಂದ ಸ್ವರ್ಣ ಶಿಖರ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಿ ಅಯೋಧ್ಯೆಗೆ ತಲುಪಿಸುವ ಇರಾದೆಯನ್ನು ಭಕ್ತರು ಹೊಂದಿರುವುದನ್ನು ಶ್ರೀಗಳು ತಿಳಿಸಿದರು.
ಅದರ ಜತೆಗೆ ಮುಂದಿನ ವರ್ಷಾಂತ್ಯಕ್ಕೆ ನಡೆಯುವ ನೂತನ ಮಂದಿರ ಸಮರ್ಪಣೆ ಮತ್ತು ಶ್ರೀರಾಮನ ಪ್ರತಿಷ್ಠಾ ಮಹೋತ್ಸವಕ್ಕೆ ದಿನಾಂಕ ನಿಗದಿ ಪಡಿಸಿದ ಬಳಿಕ ದೇಶದ ಭಕ್ತರನ್ನು ಈ ಉತ್ಸವಕ್ಕೆ ಆಹ್ವಾನಿಸುವ ಸಲುವಾಗಿಯೂ ಒಂದು ಯಾತ್ರೆಯನ್ನು ಕೈಗೊಳ್ಳಬಹುದೆಂಬ ಅಭಿಪ್ರಾಯವನ್ನು ಶ್ರೀಗಳು ವ್ಯಕ್ತಪಡಿಸಿದರು. ವಿಶ್ವಸ್ತರಾದ ಹಿರಿಯ ನ್ಯಾಯವಾದಿ ಪರಾಶರನ್ ಆನ್ ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.
ಹೈದರಾಬಾದ್‌ನಲ್ಲಿ ಚಾತುರ್ಮಾಸ ವ್ರತ ಮುಗಿಸಿ ರವಿವಾರ ಬೆಳಗ್ಗೆ ಅಯೋಧ್ಯೆ ತಲುಪಿದ ಪೇಜಾವರ ಶ್ರೀಗಳು ತಾತ್ಕಾಲಿಕ ಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.