Ayodhya: ಪೇಜಾವರ ಶ್ರೀಗಳ ಸುಧಾಮಂಗಲೋತ್ಸವ ಸಂಪನ್ನ
Team Udayavani, Mar 1, 2024, 1:04 AM IST
ಅಯೋಧ್ಯೆ: ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವವನ್ನು ವೈಭವದಿಂದ ನಡೆಸುತ್ತಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ತಮ್ಮ ವಿದ್ಯಾರ್ಥಿಗಳಿಗೆ ಶ್ರೀಮನ್ಯಾಯಸುಧಾ ಮಂಗಲೋತ್ಸವ ನಡೆಸಿ ರಾಮನಿಗೆ ಜ್ಞಾನ ಪುಷ್ಪವನ್ನು ಸಮರ್ಪಿಸಿದರು.
ಅಯೋಧ್ಯೆಯ ತೀರ್ಥಕ್ಷೇತ್ರಪುರಮ್‌ನ ಟೆಂಟ್ ಸಿಟಿ ಸಭಾಂಗಣದಲ್ಲಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಘಟಿಕೋತ್ಸವ ನಡೆಯಿತು. ವಿದ್ಯಾಪೀಠದಲ್ಲಿ 13 ವರ್ಷಗಳ ವ್ಯಾಸಂಗ ಮುಗಿಸಿದ 14 ವಿದ್ಯಾರ್ಥಿಗಳು ಮಂಗಲೋತ್ಸವವನ್ನು ಶ್ರೀರಾಮನಿಗೆ ಅರ್ಪಿಸಿದರು.
ಶ್ರೀ ಪಲಿಮಾರು ಉಭಯ ಶ್ರೀಗಳು, ಪೇಜಾವರ ಶ್ರೀ, ಚಿತ್ರಾಪುರ ಮಠದ ಶ್ರೀ ವಿದ್ಯೆàಂದ್ರತೀರ್ಥರು ಸಾನ್ನಿಧ್ಯ ವಹಿಸಿ ಶ್ರೀ ಜಯತೀರ್ಥ ಗುರುವಿರಚಿತ ಶ್ರೀಮನ್ಯಾಯಸುಧಾನುವಾದ ಹಾಗೂ ಜಗದ್ಗುರು ಮಧ್ವಾಚಾರ್ಯರ ತಣ್ತೀವಾದದ ಹಿನ್ನೆಲೆಯಲ್ಲಿ ಸಂದೇಶ ನೀಡಿದರು.
ಹಿರಿಯ ವಿದ್ವಾಂಸರಾದ ಪ್ರೊ| ಎ. ಹರಿದಾಸ ಭಟ್, ರಾಮವಿಟuಲಾಚಾರ್ಯ, ಸತ್ಯಧ್ಯಾನಾಚಾರ್ಯ ಕಟ್ಟಿ ಜಿ.ಪಿ. ನಾಗರಾಜ ಆಚಾರ್ಯ, ರಘುಪತಿ ಉಪಾಧ್ಯಾಯ, ತಿರುಮಲ ಕುಲಕರ್ಣಿ, ಬ್ರಹ್ಮಣ್ಯಾಚಾರ್ಯ ಮೊದಲಾದವರಿದ್ದರು. ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.