ಉತ್ಥಾನ ದ್ವಾದಶಿಯಂದು ರಾಮನ ಉತ್ಥಾನ: ಪಲಿಮಾರು ಶ್ರೀ
Team Udayavani, Nov 10, 2019, 5:12 AM IST
ಉಡುಪಿ: ಉತ್ಥಾನ ದ್ವಾದಶಿಯ ಪರ್ವ ಕಾಲದಲ್ಲಿ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟು ದೇಶದ ಆರಾಧ್ಯ ದೇವರನ್ನು ಎಬ್ಬಿಸುವಂತಹ ಉತ್ತಮ ತೀರ್ಪು ನೀಡಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದ್ದಾರೆ.
ನ್ಯಾಯಾಲಯದ ಮೇಲಿಟ್ಟ ನಿರೀಕ್ಷೆ, ಭರವಸೆ ಈಡೇರಿದೆ, ನ್ಯಾಯ ಸಿಕ್ಕಿದೆ. ನ್ಯಾಯಾಧೀಶರೂ ಅಭಿನಂದನೀಯರು. ತೀರ್ಪಿನ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದ ಕಾಪಾಡಲು ಕೈಗೊಂಡ ಕ್ರಮ ಶ್ಲಾಘನೀಯ. ಮಂದಿರ ನಿರ್ಮಾಣಕ್ಕೆ ಉತ್ತಮ ವಾತಾವರಣ ಮೂಡಿದೆ.
ವಿವಾದಿತ ಕಟ್ಟಡ ಬೀಳುವಾಗ ಭಜನೆ ನಡೆಯುತ್ತಿದ್ದರೆ ಉಡುಪಿಯಲ್ಲಿ ಕಳೆದೆರಡು ವರ್ಷಗಳಿಂದ ಆಯೋಜಿಸಿದ ಅಖಂಡ ಭಜನೆ ಭಕ್ತರ ಭಕ್ತಿಯ ಜತೆಗೆ ನ್ಯಾಯಾಲಯದ ನ್ಯಾಯ ತೀರ್ಮಾನಕ್ಕೆ ವರವಾಗಿದೆ.
“ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ, ಅಭ್ಯುತ್ಥಾನಮಧರ್ಮಸ್ಯ ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ’ ಎಂದ ಕೃಷ್ಣ ಈಗಲೂ ಧರ್ಮದ ರಕ್ಷಣೆ ಕೆಲಸ ಮಾಡುತ್ತಿದ್ದಾನೆ. ಐದು ಎಕರೆ ಜಾಗದ ನ್ಯಾಯ ಮಸೀದಿ ನಿರ್ಮಾಣಕ್ಕೆ ಸಂದಿದೆ. ರಾಮ ರಹೀಮರ ಪರಸ್ಪರ ಸಹಕಾರದಿಂದ ದೇಶಕ್ಕೆ ಒಳಿತಾಗಲಿ ಎನ್ನುವ ಹಾರೈಕೆಯೊಂದಿಗೆ ಶ್ರೀಕೃಷ್ಣಮುಖ್ಯಪ್ರಾಣರಿಗೆ ಪ್ರಾರ್ಥನೆ ಸಲ್ಲಿಸುವುದಾಗಿ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.