ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ


Team Udayavani, Sep 26, 2019, 5:34 AM IST

ayushman

ಕಾರ್ಕಳ: ಆರೋಗ್ಯ ಹದಗೆಟ್ಟಾಗ ಸರಕಾರಿ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಬೇಕು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗುವಂತಹ ಸಂದರ್ಭ ಸರಕಾರಿ ವೈದ್ಯರು ಸೂಚಿಸಿದ ಆಸ್ಪತ್ರೆಗೆ ಹೋದಲ್ಲಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು. ಈ ಅತ್ಯುತ್ತಮ ಯೋಜನೆಯ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಹೇಳಿದರು.

ಸೆ. 24ರಂದು ಕಾರ್ಕಳ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾ| ಆರೋಗ್ಯಾಧಿಕಾರಿಗಳ ಕಚೇರಿ, ಸರಕಾರಿ ಪದವಿಪೂರ್ವ ಕಾಲೇಜು ಕಾರ್ಕಳ‌ ಸಂಯುಕ್ತ ಆಶ್ರಯದಲ್ಲಿ ನಡೆದ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿ.ಪಂ. ಸದಸ್ಯ ಉದಯ ಎಸ್‌. ಕೋಟ್ಯಾನ್‌, ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯು ಬಡವರಿಗೆ, ಮಧ್ಯಮ ವರ್ಗದವರಿಗೆ ಉಪಯುಕ್ತ ಯೋಜನೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ, ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಜ್ಯೋತಿ ಹರೀಶ್‌ ಮಾತನಾಡಿದರು. ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿ ಮೇಬಲ್‌ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು.

ಜಿ.ಪಂ. ಸದಸ್ಯೆ ದಿವ್ಯಾಶ್ರೀ ಅಮೀನ್‌, ಪುರಸಭಾ ಸದಸ್ಯೆ ಸುಮಾ ಕೇಶವ್‌, ಕಾಲೇಜಿನ ಪ್ರಾಂಶುಪಾಲ ಪ್ರೊ| ಮಾಧವ ಭಟ್‌, ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪಿ.ಕೆ. ಮಲ್ಯ, ಕಿರಿಯ ಆರೋಗ್ಯ ಸಹಾಯಕ-ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ಸಹಾಯಕ ಬಿ.ವಿ. ಶಿವರಾಮ ಸ್ವಾಗತಿಸಿ, ಐಸಿಟಿಸಿ ವಿಭಾಗದ ಕಿರಣ್‌ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ವಿ.ಜೆ. ಅನ್ನಕುಟ್ಟಿ ವಂದಿಸಿದರು.

5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ
ಸುವರ್ಣ ಆರೋಗ್ಯ ಟ್ರಸ್ಟ್‌ನ‌ ಜಿಲ್ಲಾ ಸಂಯೋಜಕ ಜಗನ್ನಾಥ ಮಾಹಿತಿ ನೀಡಿ, ಬಿಪಿಎಲ್‌ ಪಡಿತರ ಕಾರ್ಡ್‌ ಹೊಂದಿರುವ ಹಾಗೂ ರಾಷ್ಟ್ರೀಯ ಸ್ವಾಸ್ಥ é ವಿಮಾ ಯೋಜನೆಯಲ್ಲಿ ನೋಂದಾಯಿತರಾಗಿರುವ ಫ‌ಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಸೌಲಭ್ಯವಿದೆ. ಎಪಿಎಲ್‌ ಕಾರ್ಡುದಾರರಿಗೆ ಸಹ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್‌ ದರದ ಶೇ. 30ರಷ್ಟು ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಒಂದೂವರೆ ಲಕ್ಷ ರೂ. ಆಗಿದ್ದು, ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಹಾಜರು ಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.