ಕುಂದಾಪುರದಲ್ಲಿ ಅಝಾದಿ ಸಮಾವೇಶ: “ದೇಶ ಉಳಿಸಿ-ದ್ವೇಷ ಅಳಿಸಿ’
Team Udayavani, Aug 13, 2017, 7:30 AM IST
ಕುಂದಾಪುರ: ಈ ದೇಶದ ಶ್ರೇಷ್ಠತೆ, ಸಂಪತ್ತು, ಇತಿಹಾಸವನ್ನು ಕಂಡು ದೇಶದ ಮೇಲೆ ಅನೇಕ ದಾಳಿಗಳು ನಡೆದರೂ ಸು ಧೀರ್ಘವಾದ ಹೋರಾಟಗಳ ಮೂಲಕ ಬ್ರಿಟಿಷರಿಂದ ಮುಕ್ತಿ ಪಡೆದಿದೆ. ನಾವು ದೇಶಕ್ಕೆ ಸ್ವಾತಂತ್ರ್ಯ ತರುವ ನಿಟ್ಟಿನಲ್ಲಿ ಸ್ವಾತಂತ್ರ್ಯಸೇನಾನಿಗಳ ಕನಸನ್ನು ನನಸು ಮಾಡಬೇಕಾಗಿದೆ. ದ್ವೇಷ, ಅಸೂಯೆಗಳು ಈ ದೇಶವನ್ನು ಬಿಟ್ಟು ತೊಲಗಬೇಕಾಗಿದೆ ಎಂದು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಹಾಫಿಳ್ ಮುಹಮ್ಮದ್ ಸುಫ್ಯಾನ್ ಸಖಾಫಿ ಹೇಳಿದರು.
ಅವರು ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ನಡೆದ ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ರಿ., ಎಸ್.ಎಸ್.ಎಫ್ ಉಡುಪಿ ಜಿಲ್ಲೆಯ ವತಿಯಿಂದ ನಡೆದ ದೇಶ ಉಳಿಸಿ-ದ್ವೇಷ ಅಳಿಸಿ ಅಝಾದಿ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಸಂದೇಶ ಭಾಷಣ ಮಾಡಿದರು.
ಎಸ್.ಎಸ್.ಎಫ್. ಉತ್ತರ ಕನ್ನಡ ಜಿಲ್ಲೆ ಅಧ್ಯಕ್ಷ ಅಸ್ಸಯ್ಯದ್ ಅಲವಿ ತಂಙಳ್ ಅಲ್ ಬುಖಾರಿ, ಎಸ್.ಎಸ್.ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಇಲ್ಯಾಸ್ ನಾವುಂದ, ಎಸ್.ಎಸ್.ಎಫ್ ಇಹ್ಸಾನ್ ಕರ್ನಾಟಕ ಇದರ ಜನರಲ್ ಕನ್ವೀನರ್ ಕೆ.ಎ. ಅಬ್ದುರ್ರಹ್ಮಾನ್ ರಝಿÌ, ಎಸ್.ಎಸ್.ಎಫ್ ಉಡುಪಿ ಜಿಲ್ಲೆ ಉಸ್ತುವಾರಿ ಶಾಹುಲ್ ಹಮೀದ್ ಮುಸ್ಲಿಯಾರ್ ಶಿವಮೊಗ್ಗ, ಎಸ್.ಎಸ್.ಎಫ್ ರಾಜ್ಯ ಸಮಿತಿ ಸದಸ್ಯ ಅಬ್ದುರ್ರವೂಫ್ ಖಾನ್, ಎಸ್.ಎಸ್.ಎಫ್ ಕುಂದಾಪುರ ವಿಭಾಗದ ಅಧ್ಯಕ್ಷ ಮುಹಮ್ಮದ್ ಮುಸ್ತಪ ಸಅದಿ, ಉಡುಪಿ ವಿಭಾಗದ ಅಧ್ಯಕ್ಷ ಕೆ.ಎಂ.ಅಬ್ದುರ್ರಹ್ಮಾನ್ ಸಅದಿ, ಎಸ್.ವೈ.ಎಸ್ ಉಡುಪಿ ಜಿಲ್ಲೆ ಅಧ್ಯಕ್ಷ ಅಸ್ಸಯ್ಯಿದ್ ಜಲ್‌ಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ಉಪಸ್ಥಿತರಿದ್ದರು.ಎಸ್.ಎಸ್.ಎಫ್. ಉಡುಪಿ ಜಿಲ್ಲೆ ಅಧ್ಯಕ್ಷ ಪಿ.ಎಂ.ಎ. ಮುಹಮ್ಮದ್ ಅಶ್ರಫ್ ರಝಾ ಅಂಜದಿ ಸ್ವಾಗತಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದಲ್ಲಿ ಜಾಥಾ ನಡೆಯಿತು.
ಈ ದೇಶದಲ್ಲಿ ಶೇ. 99ರಷ್ಟು ಜನತೆ ಶಾಂತಿ ಬಯಸುತ್ತಾರೆ ಆದರೆ ಶೇ.1ರಷ್ಟು ಮಂದಿ ಮಾತ್ರ ಸ್ವಾರ್ಥ ಹಿತಾಸಕ್ತಿಗಾಗಿ ಧರ್ಮ, ರಾಜಕೀಯದ ಹೆಸರಲ್ಲಿ ಅಶಾಂತಿ ಸೃಷ್ಟಿಸುತ್ತಾರೆ. ಈ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ.
– ಹಾಫಿಳ್ ಮುಹಮ್ಮದ್ ಸುಫ್ಯಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.