ಆನೆಗುಂದಿ ಮಠದಲ್ಲಿ ಯಾಗ ನಡೆಸಿದ ಬಿಎಸ್‌ವೈ!
Team Udayavani, Jul 26, 2018, 3:50 AM IST
ಕಾಪು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಡುಕುತ್ಯಾರು ಆನೆಗುಂದಿ ಮೂಲ ಮಠದಲ್ಲಿ ಗುಟ್ಟಾಗಿ ಶತ ಚಂಡಿಕಾಯಾಗ ಮತ್ತು ಅತೀ ರುದ್ರ ಮಹಾಯಾಗ ನಡೆಸಿದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಕುತ್ಯಾರು ಆನೆಗುಂದಿ ಮಠಕ್ಕೆ ಸದ್ದಿಲ್ಲದೇ ಬಂದಿದ್ದ ಯಡಿಯೂರಪ್ಪ ಅವರು ಮಠದಲ್ಲಿ ನಡೆದ ಮಹಾರುದ್ರ ಯಾಗ, ಶತಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು. ಅವರ ಜತೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಪರಿವಾರದವರು ಭಾಗಿಯಾಗಿದ್ದರು.
ಯಾಗದ ಪೂರ್ಣಾಹುತಿ ಕಾಲದಲ್ಲಿ ಆನೆಗುಂದಿ ಮಠದ ಯತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮೀಜಿಯವರೂ ಪಾಲ್ಗೊಂಡಿದ್ದು, ಜ್ಯೋತಿಷ್ಯ ವಿದ್ವಾನ್ ಉಮೇಶ ಆಚಾರ್ಯ ಪಡೀಲು ಅವರ ನೇತೃತ್ವದಲ್ಲಿ ಪುತ್ತೂರು ಮತ್ತು ಸುಳ್ಯ ಮೂಲದ ಪುರೋಹಿತರ ಸಹಭಾಗಿತ್ವದೊಂದಿಗೆ ಐದು ದಿನಗಳ ಕಾಲ ಯಾಗ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಶತಚಂಡಿಕಾ ಯಾಗ ನಡೆಸಿರುವುದು ಎಂದು ಹೇಳಲಾಗುತ್ತಿದೆಯಾದರೂ ಯಡಿಯೂರಪ್ಪ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿರಿಸಿಕೊಂಡು ಯಾಗದ ಮೊರೆ ಹೋಗಿರುವ ಸಾಧ್ಯತೆಗಳಿವೆ. ಯಾರಿಗೂ ತಿಳಿಸದೇ, ಮಾಧ್ಯಮಗಳ ಕಣ್ಣು ತಪ್ಪಿಸಿ ಗುಟ್ಟಾಗಿ ನಡೆಸಿದ್ದ ಯಾಗದ ವಿಚಾರವು ಬುಧವಾರ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಬಿಎಸ್‌ವೈ ಅವರನ್ನು ನಿದ್ದೆಗೆಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.