ಸಂಪೂರ್ಣ ಹದಗೆಟ್ಟ ಬುಕ್ಕಿಗುಡ್ಡೆ – ಹೊಸಂಗಡಿ ಬಜೆ ರಸ್ತೆ
Team Udayavani, Mar 23, 2018, 6:20 AM IST
ಹೆಬ್ರಿ: ಪೆರ್ಡೂರಿನ ಬುಕ್ಕಿಗುಡ್ಡೆಯಿಂದ ಹೊಸಂಗಡಿ ಮಾರ್ಗ ವಾಗಿ ಬಜೆಗೆ ಸಂಪರ್ಕ ಕಲ್ಪಿ ಸುವ ರಸ್ತೆ 20 ವರ್ಷಗಳಿಂದ ಡಾಮರೀಕರಣ ಆಗದೆ ಸಂಪೂರ್ಣ ಹದಗೆಟ್ಟಿದ್ದು ಈ ಭಾಗದಲ್ಲಿ ಸಂಚರಿಸುವ ಗ್ರಾಮಸ್ಥರ ಗೋಳು ಹೇಳತೀರದಾಗಿದೆ.
ಈ ರಸ್ತೆಯಲ್ಲಿ ಸುಮಾರು 5 ಬಸ್‌ಗಳು ಓಡಾಡುತ್ತಿದ್ದು, ಅವುಗಳ ಸಂಚಾರಕ್ಕೆ ತೀರಾ ತೊಂದರೆಯಾಗಿದೆ.
ವಿದ್ಯಾರ್ಥಿಗಳು ಸೇರಿದಂತೆ ದಿನನಿತ್ಯ ನೂರಾರು ಜನರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ಕಳೆದ ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ಈ ಭಾಗದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ತೊಂದರೆಯಾಗಿತ್ತು. ಬಳಿಕ ರಸ್ತೆ ತೇಪೆಕಾರ್ಯ ಮಾಡಿದ್ದು ಕಳಪೆ ಕಾಮಗಾರಿಯಿಂದ ಮತ್ತೆ ರಸ್ತೆ ಸಂಪೂರ್ಣ ಹದಗೆಟ್ಟಿದೆ, ಸಂಚಾರ ಕಷ್ಟ ಸಾಧ್ಯವಾಗಿದೆ.
ಈ ಬಗ್ಗೆ ಈಗಾಗಲೇ ಹಲವು ಬಾರಿ ಪಂಚಾಯತ್ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ
ವಾಗಿಲ್ಲ. ಮತ್ತೆ ಮಳೆಗಾಲ ಸಮೀಪಿಸುತ್ತಿರುವುದ ರಿಂದ ಕೂಡಲೇ ರಸ್ತೆಯನ್ನು ದುರಸ್ತಿ ಮಾಡಬೇಕಾಗಿದೆ. ಈ ಭಾಗದ ಜನರು ಈಗಾಗಲೇ ಸಮಸ್ಯೆ ಬಗ್ಗೆ ಬೇಸತ್ತಿದ್ದು ಇನ್ನಾ ದರೂ ಸಂಬಂಧಪಟ್ಟವರು ರಸ್ತೆಯನ್ನು ದುರಸ್ತಿಗೊಳಿಸಿ ಸಮಸ್ಯೆ ಪರಿಹರಿಸ ದಿದ್ದಲ್ಲಿ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದ ರೊಂದಿಗೆ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು.
– ಸಂತೋಷ, ಹೊಸಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.