ಬೇಸಗೆಯಲ್ಲೂ ಬಜೆಯಲ್ಲಿ  5.71  ಮೀ. ನೀರು ಸಂಗ್ರಹ!


Team Udayavani, May 5, 2021, 5:40 AM IST

ಬೇಸಗೆಯಲ್ಲೂ ಬಜೆಯಲ್ಲಿ  5.71  ಮೀ. ನೀರು ಸಂಗ್ರಹ!

ಉಡುಪಿ: ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಜೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, 15 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿಯೂ ಭಾರೀ ಪ್ರಮಾಣದ ನೀರು ಸಂಗ್ರಹವಾಗಿದೆ.

ಪ್ರತಿ ವರ್ಷ ಮಾರ್ಚ್‌ ಆರಂಭದಲ್ಲಿ ಬಜೆಯಲ್ಲಿ ನೀರು ಬರಿದಾಗಿ ಎ.11ರ ಸುಮಾರಿಗೆ ಸ್ವರ್ಣಾ ನದಿಯಲ್ಲಿ ಪಂಪಿಂಗ್‌ ಕೆಲಸ ಪ್ರಾರಂಭಿಸಲಾಗುತ್ತಿತ್ತು. ಮೇ ಆರಂಭದಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸುವ ಪರಿಪಾಠ ಹಿಂದಿ ನಿಂದಲೂ ಇತ್ತು. ಆದರೆ ಈ ಬಾರಿ ಅಂತಹ ಸ್ಥಿತಿ ಇಲ್ಲ. ಜನವರಿಯಿಂದ ಎಪ್ರಿಲ್‌ವರೆಗೆ ಬಿಟ್ಟು ಬಿಟ್ಟು ಸುರಿದ ಮಳೆಯಿಂದ ಜಲಮೂಲಗಳು ಚೇತರಿಸಿವೆ. ಮುಂದಿನ ತಿಂಗಳು ಸಮಯಕ್ಕೆ ಸರಿಯಾಗಿ ಮುಂಗಾರು ಪ್ರವೇಶವಾದರೆ ಈ ಬಾರಿ ನಗರಕ್ಕೆ ನೀರಿನ ಸಮಸ್ಯೆ ಕಾಡದು.

ಇತಿಹಾಸದಲ್ಲೇ ಮೊದಲು :

ಕಳೆದೊಂದು ದಶಕದ ಇತಿಹಾಸದಲ್ಲಿ ಮೇ ನಲ್ಲಿ 5.71 ಮೀಟರ್‌ವರೆಗೆ ನೀರು ಏರಿಕೆಯಾಗಿರುವುದು ಇದೇ ಮೊದಲ ಬಾರಿ. ಕಳೆದ ಮಾರ್ಚ್‌ ತಿಂಗಳಿನಲ್ಲಿ 4.40 ಮೀಟರ್‌ ನೀರು ಸಂಗ್ರಹವಿತ್ತು. ಈ ಹಿನ್ನೆಲೆಯಲ್ಲಿ ಎಪ್ರಿಲ್‌ ತಿಂಗಳ ಅಂತ್ಯದಲ್ಲಿ ಡ್ರೆಜಿಂಗ್‌  ಮಾಡುವ ನಿಟ್ಟಿನಲ್ಲಿ 30 ಲ.ರೂ. ಕಾಯ್ದಿರಿಸ ಲಾಗಿತ್ತು. ಈ ಬಾರಿ ಎಪ್ರಿಲ್‌ ತಿಂಗಳ ಅಂತ್ಯದಲ್ಲಿ ಏಕಾಏಕಿ ನೀರಿನ ಒಳಹರಿವು ಪ್ರಾರಂಭವಾದ ಹಿನ್ನೆಲೆಯಲ್ಲಿ ಹೂಳೆತ್ತಿಲ್ಲ.

ನೀರಿನ ಬಳಕೆ ಹೆಚ್ಚಳ :

ನಗರದಲ್ಲಿ ಸುಮಾರು 12,500 ಮನೆಗಳು, ಮಣಿಪಾಲ ಕೈಗಾರಿಕಾ ವಲಯದಲ್ಲಿ 70ರಿಂದ 80 ಕೈಗಾರಿಕೆ ಘಟಕ, 570 ಫ್ಲ್ಯಾಟ್‌ಗಳಿವೆ; ಸುಮಾರು 1,000 ವಾಣಿಜ್ಯ ಸಂಸ್ಥೆಗಳಿವೆ; ಸುಮಾರು 600 ಹೊಟೇಲ್‌, 40 ಲಾಡ್ಜ್ಗಳಿವೆ. ಸರಕಾರದ ಪ್ರಕಾರ ಪ್ರತಿ ಪ್ರಜೆಗೆ ದಿನಕ್ಕೆ 135 ಲೀ. ನೀರು ಒದಗಿಸಬೇಕು. ನಗರ ಪ್ರದೇಶದ ಶೇ. 90ರಷ್ಟು ವಾಣಿಜ್ಯ ಕಟ್ಟಡಗಳು ನಗರಸಭೆಯ ನೀರನ್ನೇ ಅವಲಂಬಿಸಿರುವುದರಿಂದ ಬೇಸಗೆಯಲ್ಲಿ ಹೊಟೇಲ್‌ಗ‌ಳಲ್ಲಿ ನೀರಿನ ಬಳಕೆ ಪ್ರಮಾಣ ಹೆಚ್ಚಾಗಿದೆ. ಈ ಬಾರಿ  ನಳ್ಳಿ ನೀರು ಸಂಪರ್ಕ 19,200ಕ್ಕೆ ಏರಿಕೆಯಾಗಿದೆ.

70 ದಿನಗಳಿಗೆ ಸಾಕು :

ಪ್ರಸ್ತುತ ಬಜೆಯಲ್ಲಿ ಸಂಗ್ರಹವಾದ 5.71 ಮೀಟರ್‌ ನೀರಿನಲ್ಲಿ 1.5 ಮೀಟರ್‌ ಡೆಡ್‌ ಸ್ಟೋರೆಜ್‌ ಹೊರತು ಪಡಿಸಿದರೆ, ಸಂಗ್ರಹವಿರುವ 4.21 ಮೀಟರ್‌ ನೀರಿನಲ್ಲಿ ಇಡೀ ನಗರಕ್ಕೆ 70 ದಿನಗಳ ವರೆಗೆ ನೀರು ಯಾವುದೇ ವ್ಯತ್ಯಯವಿಲ್ಲದೆ ಪೂರೈಸಬಹುದು. ನಗರಸಭೆ 2020ರಲ್ಲಿ ಹೂಳೆತ್ತಲು 13 ಲ.ರೂ. ವ್ಯಯ ಮಾಡಿತ್ತು. ಆದರೆ ಟ್ಯಾಂಕರ್‌ ನೀರು ನೀಡಿರಲಿಲ್ಲ. ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಬಜೆ, ಶಿರೂರಿನಲ್ಲಿ ಸ್ಯಾಂಡ್‌ ಬ್ಯಾಗ್‌ ಬಳಸಿ ನೀರನ್ನು ಸಂಗ್ರಹಿಸಿ ಇಡಲಾಗಿದೆ ಎಂದು ನಗರಸಭೆ ಎಇಇ ಮೋಹನ್‌ ರಾಜ್‌ ತಿಳಿಸಿದ್ದಾರೆ.

ಪ್ರತಿದಿನ 24 ದಶಲಕ್ಷ ಲೀಟರ್‌ ನೀರು : ಬಜೆಯಲ್ಲಿ 1972ರ ಜನಸಂಖ್ಯೆ ಹಾಗೂ ಅಭಿವೃದ್ಧಿ ಆಧಾರದ ಮೇಲೆ ಅಣೆಕಟ್ಟು ನಿರ್ಮಿಸಲಾಗಿತ್ತು. ಸ್ವರ್ಣಾ ನದಿಯಿಂದ 2 ಹಂತಗಳಲ್ಲಿ ನಗರಕ್ಕೆ ನೀರು ಸರಬರಾಜಾಗುತ್ತಿದೆ. ಬಜೆ ಅಣೆಕಟ್ಟು ನಿರ್ಮಾಣವಾದ ಬಳಿಕ ಮೊದಲ ಹಂತದಲ್ಲಿ ಪ್ರತಿದಿನ 9 ದಶಲಕ್ಷ ಲೀ. ನೀರು ಸರಬರಾಜು ಆಗಿತ್ತು. 2006ರಲ್ಲಿ ಆರಂಭಗೊಂಡ ಎರಡನೇ ಹಂತದ ಯೋಜನೆಯಲ್ಲಿ ಪ್ರತಿದಿನ 24 ದಶಲಕ್ಷ ಲೀ. ನೀರು ಸರಬರಾಜು ಮಾಡುವ ಯೋಜನೆಯಾಗಿದೆ.

ಪ್ರಸ್ತುತ ಬಜೆಯಲ್ಲಿ ಸಂಗ್ರಹವಾಗಿರುವ ನೀರು ನಗರಕ್ಕೆ 70ದಿನಗಳ ಕಾಲ ಪೂರೈಕೆ ಮಾಡಬಹುದು. ಜನವರಿಯಿಂದ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ಕಡುಬೇಸಗೆಯಲ್ಲಿಯಲ್ಲಿ ಸಹ ಒಳಹರಿವು ಇದೆ.  -ಮೋಹನ್‌ ರಾಜ್‌,  ಎಎಇ ನಗರಸಭೆ, ಉಡುಪಿ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.