ಬಜೆ: ನದಿಯಲ್ಲಿ ಮುಳುಗಿ ಇಬ್ಬರ ಸಾವು
Team Udayavani, Mar 28, 2019, 6:18 AM IST
ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಬುಧವಾರ ಸಂಜೆ ಹಿರಿಯಡಕ ಸಮೀಪದ ಬಜೆ ಸ್ವರ್ಣಾ ನದಿಯಲ್ಲಿ ಸಂಭವಿಸಿದೆ.
ಹಿರಿಯಡಕ ಬಜೆ ಮೂಡುಕಂಗಣ ನಿವಾಸಿ ಕೃಷ್ಣ ಅವರ ಪತ್ನಿ ಪುಷ್ಪಾ (48) ಮತ್ತು ಮಂಜುನಾಥ-ಸುಜಾತಾ ದಂಪತಿಯ ಪುತ್ರಿ ಅಶ್ವಿನಿ (13) ಮೃತಪಟ್ಟವರು. ಪುಷ್ಪಾ ಅವರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಅವರು ಸಂಜೆ 5.30ರ ವೇಳೆಗೆ ಬಟ್ಟೆ ಒಗೆಯಲೆಂದು ನದಿಗೆ ಇಳಿದಿದ್ದರು. ಮೊದಲಿಗೆ ಅಶ್ವಿನಿ ಅವರು ಆಯತಪ್ಪಿ ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಲೆಂದು ಧಾವಿಸಿದ ಪುಷ್ಪಾ ಕೂಡ ಆಯ ತಪ್ಪಿ ನೀರಿನಲ್ಲಿ ಮುಳುಗಿದರು.
ತತ್ಕ್ಷಣ ಸ್ಥಳೀಯರು ಇಬ್ಬರನ್ನೂ ನೀರಿನಿಂದ ಮೇಲಕ್ಕೆತ್ತಿ ಮಣಿಪಾಲದ ಆಸ್ಪತ್ರೆಗೆ ಸಾಗಿಸಿದರು. ಪುಷ್ಪಾ ಅವರು ಮಾರ್ಗ ಮಧ್ಯೆ ಹಾಗೂ ಅಶ್ವಿನಿ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು.ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.