ಬಂಟಕಲ್ ತಾಂತ್ರಿಕ ಕಾಲೇಜು: ಸಾಧನೆಯ ಮೈಲಿಗಲ್ಲು ;ಹೊಸ ಕೋರ್ಸ್‌ಗಳ ಪ್ರಾರಂಭ
Team Udayavani, Jul 19, 2023, 5:21 PM IST
ಶಿರ್ವ: ಉಡುಪಿಯ ಶ್ರೀ ಸೋದೆ ವಾದಿರಾಜ ಮಠ ಪ್ರತಿಷ್ಠಾನದ ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗಳ ಜತೆಗೆ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ (ಎಂಬಿಎ) ಮತ್ತು ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಎಜ್ಯುಕೇಶನ್ ಸೊಸೈಟಿಯ ಆಶ್ರಯದಲ್ಲಿ ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಹಾಗೂ ನಿರಾಮಯ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳನ್ನು ಪ್ರಾರಂಭಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಸರಕಾರದಿಂದ ಅನುಮತಿ ದೊರೆತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್ ತಿಳಿಸಿದ್ದಾರೆ.
ಅವರು ಜು. 19 ರಂದು ಕಾಲೇಜಿಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಶ್ರೀ ಸೋದೆ ವಾದಿರಾಜ ಮಠ ಪ್ರತಿಷ್ಠಾನದಿಂದ ಸ್ಥಾಪಿತ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ನ್ಯಾಕ್ ನಿಂದ ಎ ಶ್ರೇಣಿಯ ಮಾನ್ಯತೆ ಹಾಗೂ ರಾಷ್ಟ್ರೀಯ ಮೌಲ್ಯಾಂಕನ ಮಂಡಳಿ (ಎನ್‌ಬಿಎ)ಯಿಂದ ಮಾನ್ಯತೆ ದೊರೆತ್ತಿದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಈ ಎರಡು ಮಾನ್ಯತೆಗಳನ್ನು ವಿದ್ಯಾಸಂಸ್ಥೆಯು ಪ್ರಾರಂಭವಾದ 9 ಮತ್ತು 11ನೇ ವರ್ಷಗಳಲ್ಲಿ ಪಡೆದಿರುವ ಕರಾವಳಿ ಕರ್ನಾಟಕದ ಪ್ರಪ್ರಥಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆ ಈ ವಿದ್ಯಾ ಸಂಸ್ಥೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಾಗೂ ಮೆಶಿನ್ ಲರ್ನಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಾಗೂ ಡೇಟಾ ಸೈನ್ಸ್ ಕೋರ್ಸ್‌ಗಳ ಜತೆಗೆ 2023-24 ಶೈಕ್ಷಣಿಕ ವರ್ಷದಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ(ಎಂಬಿಎ) ಪ್ರಾರಂಭಿಸಿದ್ದು, ಉತ್ತಮ ಉದ್ಯೋಗಾವಕಾಶಗಳನ್ನು ತಂದುಕೊಡುವ ಈ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ಸುಭದ್ರಗೊಳಿಸಲು ಸಹಕಾರಿಯಾಗಲಿದೆ.
ಕೋರ್ಸ್‌ಗಳ ವಿವರ
ಎಂಬಿಎ ಕಾರ್ಯಕ್ರಮವು ಬೆಳಗಾವಿ ವಿಶ್ವವಿದ್ಯಾನಿಲಯದ ಅನುಮೋದನೆ ಮತ್ತು ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಅನುಮೋದನೆ ಪಡೆದಿದ್ದು ಮಾರ್ಕೆಟಿಂಗ್ ಹಾಗೂ ಫೈನಾನ್ಸ್ ವಿಶೇಷತೆಯೊಂದಿಗೆ ಪ್ರಾರಂಭವಾಗುವ 2 ವರ್ಷದ ಪದವಿಯಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಯದಿಂದ 3 ವರ್ಷದ ಪದವಿ ಪೂರ್ಣಗೊಳಿಸಿ ಶೇಕಡಾ 50% ಅಂಕಗಳೊಂದಿಗೆ ಹಾಗೂ KMAT/PGCET/CAT ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು.
ಬಿಎಸ್ಸಿ ನರ್ಸಿಂಗ್ 4 ವರ್ಷದ ಕೋರ್ಸ್ ಆಗಿದ್ದು (3 ವರ್ಷ ಮತ್ತು 1 ವರ್ಷ ಇಂಟರ್ನ್ಶಿಪ್) ಅಭ್ಯರ್ಥಿಗಳು ಸಂಪೂರ್ಣವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ ಪಡೆಯಬಹುದು. ಅಲೈಡ್ ಹೆಲ್ತ್ ಸೈನ್ಸ್ 4 ವರ್ಷದ ಕೋರ್ಸ್ ಆಗಿದ್ದು (3 ವರ್ಷ ಮತ್ತು 1 ವರ್ಷ ಇಂಟರ್ನ್ಶಿಪ್) ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ಮಾನದಂಡದ ಪ್ರಕಾರ ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಕನಿಷ್ಠ 50% ಅಂಕವನ್ನು ಪಡೆದಿರಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆಯ ಅವಶ್ಯಕತೆ ಇರುವುದಿಲ್ಲ.
ಈ ಎಲ್ಲಾ ಕೋರ್ಸ್‌ಗಳು ಬಂಟಕಲ್ ಕ್ಯಾಂಪಸ್‌ನಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದ್ದು, ಶ್ರೀ ಸೋದೆ ವಾದಿರಾಜ ಮಠದ ಶ್ರೀಪಾದರ ಕನಸಾದ ಮಧ್ವ ವಿಶ್ವವಿದ್ಯಾನಿಲಯದ ಕನಸಿಗೆ ಮತ್ತೂಂದು ಮೆಟ್ಟಿಲಾಗಿದೆ.
ಉಡುಪಿ ಸುತ್ತಮುತ್ತಲಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಪ್ರಾರಂಭಗೊಳ್ಳಲಿರುವ ಈ ವೈದ್ಯಕೀಯ ಕೋರ್ಸ್‌ಗಳು ಆರೋಗ್ಯ ಕ್ಷೇತ್ರದಲ್ಲಿ ಸಮಾಜಸೇವೆ ಮಾಡಲಿಚ್ಚಿಸುವವರಿಗೆ ಉತ್ತಮ ಅಡಿಪಾಯ ಒದಗಿಸುವುದು.
ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಹರೀಶ್ ಬೆಳ್ಮಣ್, ನರ್ಸಿಂಗ್ ಕಾಲೇಜಿನ ನಿಯೋಜಿತ ಪ್ರಾಂಶುಪಾಲೆ ಡಾ|ಫ್ಲೆೇವಿಯಾ ಕ್ಯಾಸ್ತಲಿನೊ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ನಿಯೋಜಿತ ಪ್ರಾಂಶುಪಾಲ ಡಾ|ನವೀನ್ ಬಲ್ಲಾಳ್, ಆಡಳಿತಾಧಿಕಾರಿ ವಿದ್ಯಾಭಟ್ ಪತ್ರಿಕಾಗೋಷ್ಠಿಯಲ್ಲಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ಸ್ವಾಗತಿಸಿ,ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.