![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 12, 2022, 1:02 PM IST
ಮಣಿಪಾಲ: ನಮ್ಮ ಮೌನವನ್ನು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ರೀತಿಯ ಓಲೈಕೆ ರಾಜಕಾರಣವನ್ನು ನಾವು ಮಾಡುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಮಣಿಪಾಲದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಮಾತಿಗೆ ನಾವು ಮೌನವಾಗಿರುವುದರಿಂದ ಅವರಿಗೆ ಸಮಸ್ಯೆಯಾಗಿರಬೇಕು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವೇನು ಮಾಡಲು ಸಾಧ್ಯವಿಲ್ಲ. ಯಾರೇ ಆಗಿರಲಿ ಅವರು ಆಡಿದ ಮಾತಿಗೆ ಬೆಲೆ ಬರಬೇಕಾದರೆ ಬಳಸುವ ಭಾಷೆ ಬಹಳ ಮುಖ್ಯವಾಗುತ್ತದೆ. ಸರಕಾರ ನಡೆಸುತ್ತಿರುವ ನಮಗೆ ಯಾವಾಗ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿದಿದೆ ಎಂದು ಹೇಳಿದರು.
ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಉಡುಪಿಯಲ್ಲಿ ಆತ್ಮಹತ್ಯೆ!
ಶಿವಮೊಗ್ಗದಲ್ಲಿ ಘಟನೆ ನಡೆದಾಗ ಕಠಿನ ಕ್ರಮ ತೆಗೆದುಕೊಂಡು ನಿರ್ದಿಷ್ಟ ತನಿಖೆಗೂ ಒಪ್ಪಿಸಿದ್ದೇವೆ. ಧಾರವಾಡ ಘಟನೆಯ ಸಂಬಂಧ ಕ್ರಮ ಆಗಿದೆ. ಕಾನೂನು ಪ್ರಕಾರವಾಗಿ ಯಾರು ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ಆಗಲಿದೆ. ಕಾಂಗ್ರೆಸ್ ರೀತಿಯಲ್ಲಿ ಓಲೈಕೆಯ ರಾಜಕಾರಣ ಮಾಡುತ್ತಿಲ್ಲ ಎಂದರು.
ಮುನ್ನೆಚ್ಚರಿಕೆ ಕ್ರಮ: ಕೋವಿಡ್ ಒಂದು, ಎರಡು ಹಾಗೂ ಮೂರನೇ ಅಲೆಯ ಅನುಭವದಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳವುದು ಅಗತ್ಯವಾಗಿದೆ. ಹೀಗಾಗಿ ಆರೋಗ್ಯ ಸಚಿವರು ಹಲವು ಸೂಚನೆಯನ್ನು ನೀಡಿದ್ದಾರೆ. ಅದೆಲ್ಲವೂ ಪಾಲನೆಯಾದರೆ, ಮುಂದೆ ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಸಾಧ್ಯವಿದೆ ಎಂದು ಹೇಳಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.