ಬಸ್ರೂರು ಮೂಲದ ವ್ಯಕ್ತಿ ಕುವೈಟ್‌ನಲ್ಲಿ ಬಂದಿ
Team Udayavani, Aug 29, 2018, 4:00 AM IST
ಕುಂದಾಪುರ: ಊರಿನಿಂದ ಬೇರೆಯವರ ಮಾತ್ರೆ ಪಾರ್ಸೆಲನ್ನು ಕುವೈಟ್‌ಗೆ ತೆಗೆದುಕೊಂಡು ಹೋಗಿದ್ದ ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿ ಶಂಕರ ಪೂಜಾರಿ (40) ಅವರು ಮೂರು ತಿಂಗಳಿಂದ ಕುವೈಟ್ ಜೈಲಿನಲ್ಲಿ ಬಂದಿಯಾಗಿದ್ದಾರೆ. ನಾಲ್ಕು ವರ್ಷಗಳಿಂದ ಕುವೈಟ್‌ನ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿ ಮೂರು ತಿಂಗಳ ಹಿಂದೆ ಕೇವಲ 10 ದಿನಗಳ ರಜೆಯಲ್ಲಿ ಊರಿಗೆ ಬಂದಿದ್ದರು. ಅನಂತರ ಅವರು ಕುವೈಟಿಗೆ ವಾಪಸಾಗುವಾಗ ತನ್ನ ಸಹೋದ್ಯೋಗಿಯ ವಿನಂತಿಯಂತೆ ಉಡುಪಿಯ ವ್ಯಕ್ತಿಯೊಬ್ಬರು ನೀಡಿದ ಪಾರ್ಸೆಲ್‌ನ್ನು ಪಡೆದುಕೊಂಡಿದ್ದರು. ಅದನ್ನು ಕುವೈಟ್‌ನಲ್ಲಿ ಕೆಲಸ ಮಾಡುತ್ತಿರುವ ಅವರ ಅತ್ತೆಗೆ ತಲುಪಿಸುವಂತೆ ಅವರು ಹೇಳಿದ್ದರು’ ಎಂದು ಶಂಕರ ಪೂಜಾರಿಯವರ ಪತ್ನಿ ಜ್ಯೋತಿ ತಿಳಿಸಿದ್ದಾರೆ.
ಕುವೈಟ್ ವಿಮಾನ ನಿಲ್ದಾಣದಲ್ಲಿ ಇಳಿದಾಗ ಅವರನ್ನು ತಪಾಸಣೆಗೆ ಒಳಪಡಿಸಿದ ಪೊಲೀಸರಿಗೆ ಮಾತ್ರೆಗಳಿರುವ ಪಾರ್ಸೆಲ್ ಸಿಕ್ಕಿತ್ತು. ವಿಚಾರಣೆ ವೇಳೆ ಪತಿ, ಇದನ್ನು ತನ್ನ ಸಹೋದ್ಯೋಗಿಯ ವಿನಂತಿಯಂತೆ ಕುವೈಟ್‌ನಲ್ಲಿರುವ ಮಹಿಳೆಗೆ ನೀಡಲು ತಂದಿರುವುದಾಗಿ ಹೇಳಿದ್ದರು. ಆದರೆ ಪೊಲೀಸರ ಮುಂದೆ ಅವರ ಸಹೋದ್ಯೋಗಿ ನಮಗೂ ಪಾರ್ಸೆಲ್‌ಗೂ ಸಂಬಂಧ ಇಲ್ಲ ಎಂದು ಹೇಳಿಕೆ ನೀಡಿ ನನ್ನ ಪತಿಗೆ ಮೋಸಮಾಡಿದ್ದಾರೆ ಎಂದು ಜ್ಯೋತಿ ಆರೋಪಿಸಿದ್ದಾರೆ. ನನ್ನ ಪತಿ ಯಾವುದೇ ತಪ್ಪು ಮಾಡದಿದ್ದರೂ ಮೂರು ತಿಂಗಳಿಂದ ಕುವೈಟ್ ಜೈಲಿನಲ್ಲಿದ್ದಾರೆ. ಈ ಬಗ್ಗೆ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ ಅವರ ಮೂಲಕ ಸಚಿವೆ ಸುಷ್ಮಾ ಸ್ವರಾಜ್‌ರಿಗೆ ಮನವಿ ಕೊಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಜ್ಯೋತಿ.
ಡಿಸಿ, ಎಸ್.ಪಿ.ಯಿಂದ ಮಾಹಿತಿ ಸಂಗ್ರಹ
ಕುವೈಟ್‌ನ ಜೈಲಿನಲ್ಲಿ ಬಂಧಿಯಾಗಿರುವ ಶಂಕರ್ ಪೂಜಾರಿ ಪ್ರಕರಣ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಇತರ ಅಧಿಕಾರಿಗಳ ಸಮ್ಮುಖ ಜ್ಯೋತಿ ಅವರನ್ನು ಆ. 28ರಂದು ತಮ್ಮ ಕಚೇರಿಗೆ ಕರೆಸಿ ಪ್ರಕರಣದ ಮಾಹಿತಿ ಪಡೆದುಕೊಂಡು ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದರು. ಎಸ್ಪಿ ಲಕ್ಷ್ಮಣ ಬ. ನಿಂಬರಗಿ, ಕುಂದಾಪುರದ ಸಹಾಯಕ ಆಯುಕ್ತ ಭೂಬಾಲನ್, ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ಡಾ| ರವೀಂದ್ರನಾಥ್ ಶ್ಯಾನುಭಾಗ್, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್ ಉಪಸ್ಥಿತರಿದ್ದರು.
ಶಂಕರ ಪೂಜಾರಿ ಅವರ ಪತ್ನಿಯನ್ನು ಕರೆಸಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಆದರೆ ಅವರನ್ನು ಬಂಧಿಸಿದ ಕಾರಣದ ಬಗ್ಗೆ ಸ್ಪಷ್ಟತೆಯಿಲ್ಲದ ಕಾರಣ ನಾವೇ ಕುವೈಟ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲಾಗುವುದು. ಅಲ್ಲಿನ ಮಾಹಿತಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಉಡುಪಿ ಡಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.