“ಮಾನವ ಸಂಪದ ಸದ್ಭಳಕೆಯಾಗಲಿ’
Team Udayavani, Jul 13, 2017, 1:20 AM IST
ಉಡುಪಿ: ದೇಶದಲ್ಲಿ ಜನಸಂಖ್ಯೆ ವಿಪರೀತ ಏರಿಕೆಯಾಗುತ್ತಿದ್ದು, ಅದಕ್ಕೆ ಬೇಕಾದ ಮೂಲ ಸೌಕರ್ಯಗಳ ಕೊರತೆ ಕಾಡುತ್ತಿದೆ. ಮಾನವ ಸಂಪನ್ಮೂಲವನ್ನು ಸಮರ್ಪಕ ರೀತಿಯಲ್ಲಿ ಸದ್ಭಳಿಕೆ ಮಾಡಲು ಆಡಳಿತ ವರ್ಗ ಚಿಂತಿಸಬೇಕಿದೆ
ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಬಿ. ರಾಜೀವ್ ಶೆಟ್ಟಿ ಹೇಳಿದರು.
ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಡಾ| ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರಥಮ ಚಿಕಿತ್ಸಾ ತರಬೇತಿ ಮತ್ತು ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಹೆಚ್ಚುತ್ತಿದ್ದು, ಅದರಲ್ಲೂ ಹೆಚ್ಚಾಗಿ ಯುವಕರೇ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ವಿದ್ಯಾಭ್ಯಾಸದ ಅವಧಿದಲ್ಲಿÉಯೇ ಕಡ್ಡಾಯವಾಗಿ ಪ್ರಥಮ ಚಿಕಿತ್ಸಾ ತರಬೇತಿ ನೀಡಬೇಕು. ಸದ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ಒನ್‌ಲೈನ್ ಮೂಲಕ ರಾಜ್ಯದಲ್ಲಿ 7 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡುವ ಕಾರ್ಯಕ್ರಮ ಪ್ರಾರಂಭಿಸಿದೆ. ಕಾಲೇಜಿನ ಪ್ರಾಂಶುಪಾಲರು ಸದುಪಯೋಗ ಪಡಿಸಿಕೊಳ್ಳಲಿ ಎಂದು ಅವರು ವಿನಂತಿಸಿದರು.
ಡಾ| ಅಶೋಕ್ ಕುಮಾರ್ ವೈ.ಜಿ. ಅಧ್ಯಕ್ಷತೆ ವಹಿಸಿದ್ದರು. ಡಾ| ಜಿ. ಶಂಕರ್ ಮಹಿಳಾ ಪ್ರ. ದರ್ಜೆ ಕಾಲೇಜು ಅಜ್ಜರಕಾಡಿನ ಪ್ರಾಂಶುಪಾಲ ಪ್ರೊ| ಜಗದೀಶ್ ರಾವ್ ಉಪಸ್ಥಿತರಿದ್ದರು.
ಡಾ| ರಾಮಚಂದ್ರ ಕಾಮತ್ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡಿದರು. ಯುವ ರೆಡ್ ಕ್ರಾಸ್ ಕೋ-ಆರ್ಡಿನೇಟರ್ ಶೋಭಾ ಸ್ವಾಗತಿಸಿದರು. ಜನಾರ್ಧನ್ ವಂದಿಸಿದರು. ಡಾ| ಅರವಿಂದ ನಾಯಕ್ ಅಮ್ಮುಂಜೆ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.