ಬೀಚ್‌ ದತ್ತು ಪಡೆಯುವ ಅವಕಾಶ: ಕರಾವಳಿ ಕಾವಲು ಪೊಲೀಸ್‌ ಪಡೆಯ ವಿಭಿನ್ನ ಕಲ್ಪನೆ


Team Udayavani, Dec 14, 2022, 6:30 AM IST

ಬೀಚ್‌ ದತ್ತು ಪಡೆಯುವ ಅವಕಾಶ: ಕರಾವಳಿ ಕಾವಲು ಪೊಲೀಸ್‌ ಪಡೆಯ ವಿಭಿನ್ನ ಕಲ್ಪನೆ

ಉಡುಪಿ : ಸಮುದ್ರ ತೀರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಬಯಸುವ ಸಂಘ-ಸಂಸ್ಥೆಗಳು ಯಾವುದೇ ಬೀಚ್‌ ಅನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಿ ಕೊಡಲಾಗಿದೆ.

ಆಸಕ್ತರು ಕರಾವಳಿ ಕಾವಲು ಪಡೆಯ ಮೂಲಕ ದತ್ತು ಪಡೆದುಕೊಂಡು ನಿರ್ದಿಷ್ಟ ಕಾಲಮಿತಿಯ ವರೆಗೆ ಆ ಭಾಗದ ಸ್ವಚ್ಛತೆಯನ್ನು ನೋಡಿಕೊಳ್ಳಬೇಕಾಗುತ್ತದೆ. ಎಲ್ಲ ಬೀಚ್‌ಗಳ ಸಮೀಪದ ಊರುಗಳು ಅಥವಾ ಇತರ ಭಾಗದ ಸಂಸ್ಥೆಗಳೂ ಇದರಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ ಇದೆ.

ಪ್ಲಾಸ್ಟಿಕ್‌ ಮುಕ್ತ ಕಡಲತೀರ
ಕಡಲತೀರವನ್ನು ಪ್ಲಾಸ್ಟಿಕ್‌ ಮುಕ್ತ ಗೊಳಿಸುವ ನಿಟ್ಟಿನಲ್ಲಿ ಕರಾವಳಿ ಕಾವಲು ಪೊಲೀಸ್‌ ಪಡೆ ವತಿಯಿಂದ ಆಗಸ್ಟ್‌ನಿಂದ ಆರಂಭಗೊಂಡಿರುವ ದ.ಕ. ಜಿಲ್ಲೆಯಿಂದ ಕಾರವಾರ ವರೆಗಿನ ಸುಮಾರು 324 ಕಿ.ಮೀ. ಕಡಲತೀರದ ಸ್ವತ್ಛತೆ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗುತ್ತಿದೆ. ಡಿ. 27ರಿಂದ 31ರ ವರೆಗೆ ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ.

ವಿವಿಧ ಚಟುವಟಿಕೆ
ಡಿ. 27ರಿಂದ ಆರಂಭಗೊಳ್ಳಲಿರುವ ನಿರಂತರ ಬೀಚ್‌ ಸ್ವತ್ಛತೆ ಕಾರ್ಯಕ್ರಮ ಪ್ರತೀ ದಿನ ಬೆಳಗ್ಗೆ 7ರಿಂದ ಬೆಳಗ್ಗೆ 10ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಡಿ. 31ರಂದು ಕೊನೆಯ ದಿನ ಬೆಳಗ್ಗಿ
ನಿಂದ ತಡರಾತ್ರಿವರೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಯಲಿದೆ. ಇದರಲ್ಲಿ ಮರಳು ಕಲಾಕೃತಿ, ಕಲೆ, ಸಂಸ್ಕೃತಿಕ ಚಟು ವಟಿಕೆಗಳೂ ಇರಲಿವೆ.

ಯಾಕಾಗಿ ಬೀಚ್‌ ಶುಚಿತ್ವ ?
ಸಮುದ್ರ ಮಾಲಿನ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸಾಗರದಲ್ಲಿನ ಕಸ ಮತ್ತು ಪ್ಲಾಸ್ಟಿಕ್‌ ಅನ್ನು ಕಡಿಮೆ ಮಾಡಲು ಕೊಡುಗೆ ನೀಡುವುದು ಬೀಚ್‌ ಸ್ವತ್ಛತೆಯ ಗುರಿಯಾಗಿದೆ. ಸಮುದ್ರ ತೀರದಲ್ಲಿ ಶೇಖರಣೆಯಾಗುವ ಪ್ಲಾಸ್ಟಿಕ್‌ಗಳು ಕ್ರಮೇಣ ಪುಡಿಯಾಗಿ ಮೀನುಗಳಿಗೆ ಆಹಾರವಾಗುತ್ತಿವೆ. ಅವುಗಳನ್ನು ಸೇವಿಸುವ ಮನುಷ್ಯರೂ ಆರೋಗ್ಯ ಸಮಸ್ಯೆಗೆ ಈಡಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕರಾವಳಿ ಕಾವಲು ಪೊಲೀಸ್‌ ಪಡೆಯು ಬೀಚ್‌ಗಳ ಸ್ವತ್ಛತೆಗೆ ಮುಂದಾಗಿದೆ. ಈಗಾಗಲೇ ದ.ಕ., ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಈ ಅಭಿಯಾನ ತಿಂಗಳಿಗೊಂದು ಬಾರಿ ನಡೆಯುತ್ತಿದೆ.

ಸಮುದ್ರ ತೀರವನ್ನು ಪ್ಲಾಸ್ಟಿಕ್‌ ಮುಕ್ತವನ್ನಾಗಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಮಾಸಿಕವಾಗಿ ಇಲಾಖೆ ವತಿಯಿಂದ ಹಾಗೂ ಇತರ ಸಂಘ-ಸಂಸ್ಥೆಗಳು ಶುಚಿತ್ವ ಮಾಡುತ್ತಿದ್ದಾರೆ. ಮುಂದಿನ ದಿನದಲ್ಲಿ ಇದರ ಜತೆಗೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಸಾರ್ವಜನಿಕರು ಸ್ವಯಂ ಆಸಕ್ತಿಯಿಂದ ಪಾಲ್ಗೊಳ್ಳಬೇಕಿದೆ.
– ಅಬ್ದುಲ್‌ ಅಹದ್‌, ವರಿಷ್ಠಾಧಿಕಾರಿಗಳು, ಕರಾವಳಿ ಕಾವಲು ಪೊಲೀಸ್‌ ಪಡೆ

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.