ಬೀಡಿನಮನೆ ಕಂಬಳ ಸಂಪನ್ನ
Team Udayavani, Dec 4, 2018, 2:00 AM IST
ಕೊಲ್ಲೂರು: ಕೆರಾಡಿ ಬೀಡಿನಮನೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಬೀಡಿನಮನೆ ಕಂಬಳವು ಇಲ್ಲಿನ ಕಂಬಳಗದ್ದೆಯಲ್ಲಿ ಡಿ. 2ರಂದು ನಡೆಯಿತು. ಕಂಬಳಕ್ಕೆ ಆಗಮಿಸಿದ ಕೋಣಗಳು ಹಾಗೂ ಯಜಮಾನರನ್ನು ಸಂಘಟಕರು ವಾದ್ಯ ಹಾಗೂ ಸಾಂಪ್ರದಾಯಿಕವಾಗಿ ವೀಳ್ಯ ನೀಡುವುದರ ಮೂಲಕ ಸ್ವಾಗತಿಸಿದರು. ಕಂಬಳವು ಹಲಗೆ, ಹಗ್ಗ ವಿಭಾಗಗಳಲ್ಲಿ ನಡೆದರೆ, ಸ್ಥಳೀಯ ಯುವಕರಿಗೆ ಕೆಸರುಗದ್ದೆ ಓಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು.
ಖ್ಯಾತ ಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. ಬೀಡಿನಮನೆ ಕುಟುಂಬದ ಅಶ್ವತ್ಥ್ ಮಾತನಾಡಿದರು. ಈ ಸಂದರ್ಭ ನ್ಯಾಯವಾದಿ ಪ್ರಸನ್ನ ಕುಮಾರ ಶೆಟ್ಟಿ ಕೆರಾಡಿ, ಬೀಡಿನಮನೆ ನರಸಿಂಹ ಶೆಟ್ಟಿ, ಭುಜಂಗ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.
30 ಕ್ಕೂ ಹೆಚ್ಚು ಕೋಣಗಳನ್ನು ಕಂಬಳದ ಸ್ಪರ್ಧೆಯಲ್ಲಿ ಆಯ್ಕೆಗೊಳಿಸಲಾಗಿದ್ದು ಸ್ಪರ್ಧೆಯಲ್ಲಿ ಗೆದ್ದ ಕೋಣಗಳಿಗೆ ನಗದು ಹಾಗೂ ಶಾಶ್ವತ ಫಲಕ ನೀಡಿ ಗೌರವಿಸಲಾಯಿತು. ಸ್ಥಳೀಯ ಯುವಕರಿಗೆ ನಡೆದ ಕೆಸರುಗದ್ದೆ ಕ್ರೀಡಾಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ಹಾಗೂ ಶಾಶ್ವತ ಫಲಕ ನೀಡಿ ಗೌರವಿಸಲಾಯಿತು. ಶಿಕ್ಷಕರಾದ ಭಾಸ್ಕರ ಶೆಟ್ಟಿ ಹಾಗೂ ವಿಜಯ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.